1 ಅರಸುಗಳು 4:6 - ಪರಿಶುದ್ದ ಬೈಬಲ್6 ಅಹೀಷಾರ್; ಅಹೀಷಾರನು ರಾಜನ ಅರಮನೆಯ ಪ್ರತಿಯೊಂದರಲ್ಲೂ ಜವಾಬ್ದಾರನಾಗಿದ್ದನು. ಅಬ್ದನ ಮಗನಾದ ಅದೋನೀರಾಮ; ಅದೋನೀರಾಮನು ಗುಲಾಮರ ಮೇಲ್ವಿಚಾರಕನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅಹೀಷಾರನು ರಾಜಗೃಹಾಧಿಪತಿಯು. ಅಬ್ದನ ಮಗನಾದ ಅದೋನೀರಾಮನು ಬಿಟ್ಟೀಕೆಲಸ ಮಾಡಿಸುವವರ ಮುಖ್ಯಸ್ಥನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅಹೀಷಾರನು - ರಾಜ್ಯಗೃಹಾಧಿಪತಿ; ಅಬ್ದನ ಮಗನಾದ ಅದೋನೀರಾಮನು - ಬಿಟ್ಟೀ ಕೆಲಸಮಾಡಿಸುವವರ ಮುಖ್ಯಸ್ಥ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅಹೀಷಾರನು ರಾಜಗೃಹಾಧಿಪತಿಯು; ಅಬ್ದನ ಮಗನಾದ ಅದೋನೀರಾಮನು ಬಿಟ್ಟೀ ಕೆಲಸಮಾಡಿಸುವವರ ಮುಖ್ಯಸ್ಥನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅಹಿಷಾರನು ರಾಜ್ಯ ಗೃಹಾಧಿಪತಿ. ಅಬ್ದನ ಮಗ ಅದೋನೀರಾಮನು ದಾಸರ ಮೇಲೆ ಉಸ್ತುವಾರಿಮಾಡಿಸುವವನಾಗಿದ್ದನು. ಅಧ್ಯಾಯವನ್ನು ನೋಡಿ |
ರಾಜನಾದ ಸೊಲೊಮೋನನು ತಾನು ನಿರ್ಮಿಸಿದ್ದ ಆಲಯದ ಮತ್ತು ಅರಮನೆಯ ಕೆಲಸಗಳನ್ನು ಮಾಡಲು ಗುಲಾಮರನ್ನು ಬಲಾತ್ಕರಿಸಿದನು. ರಾಜನಾದ ಸೊಲೊಮೋನನು ಇತರ ಅನೇಕ ಕಟ್ಟಡಗಳ ನಿರ್ಮಾಣಕ್ಕೆ ಬಿಟ್ಟಿಕೆಲಸದವರನ್ನು ಉಪಯೋಗಿಸಿಕೊಂಡನು. ಅವನು ಮಿಲ್ಲೋ ಕೋಟೆಯನ್ನು ನಿರ್ಮಿಸಿದನು; ಜೆರುಸಲೇಮಿನ ಸುತ್ತಲೂ ನಗರದ ಗೋಡೆಯನ್ನು ಕಟ್ಟಿಸಿದನು; ಅಲ್ಲದೆ ಅವನು ಹಾಚೋರ್, ಮೆಗಿದ್ದೋ ಮತ್ತು ಗೆಜೆರ್ ನಗರಗಳನ್ನು ಕಟ್ಟಿಸಿದನು.
ಇಸ್ರೇಲರನ್ನು ಹನ್ನೆರಡು ವಿಭಾಗ ಮಾಡಿ ಅವುಗಳನ್ನು ಜಿಲ್ಲೆಗಳೆಂದು ಕರೆದರು. ಪ್ರತಿಯೊಂದು ಜಿಲ್ಲೆಯನ್ನು ಆಳಲು ಸೊಲೊಮೋನನು ರಾಜ್ಯಪಾಲರನ್ನು ನೇಮಿಸಿದನು. ಈ ರಾಜ್ಯಪಾಲರು ತಮ್ಮ ಜಿಲ್ಲೆಗಳಿಂದ ಆಹಾರಪದಾರ್ಥಗಳನ್ನು ಸಂಗ್ರಹಿಸಿ ರಾಜನಿಗೂ ಅವನ ಕುಟುಂಬಕ್ಕೂ ಕೊಡಬೇಕೆಂದು ಆಜ್ಞಾಪಿಸಿದನು. ಪ್ರತಿಯೊಬ್ಬ ರಾಜ್ಯಪಾಲನು ವರ್ಷಕ್ಕೆ ಒಂದು ತಿಂಗಳು ರಾಜನಿಗೆ ಆಹಾರಪದಾರ್ಥಗಳನ್ನು ಕೊಡುವ ಜವಾಬ್ದಾರಿಯನ್ನು ಹೊಂದಿದ್ದನು.