Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:1 - ಪರಿಶುದ್ದ ಬೈಬಲ್‌

1 ಹೀರಾಮನು ತೂರಿನ ರಾಜನಾಗಿದ್ದನು. ಹೀರಾಮನು ಯಾವಾಗಲೂ ದಾವೀದನ ಸ್ನೇಹಿತನಾಗಿದ್ದನು. ದಾವೀದನ ನಂತರ ಸೊಲೊಮೋನನು ನೂತನ ರಾಜನಾದನೆಂದು ಹೀರಾಮನು ಕೇಳಿ, ತನ್ನ ಸೇವಕರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನ ಜೀವಮಾನದಲ್ಲೆಲ್ಲಾ ಅವನ ಮಿತ್ರನಾಗಿದ್ದ ತೂರಿನ ಅರಸನಾದ ಹೀರಾಮನು ಸೊಲೊಮೋನನು ಅವನ ತಂದೆಯ ನಂತರ ಅಭಿಷೇಕಿಸಲ್ಪಟ್ಟನು ಎಂಬುದಾಗಿ ಕೇಳಿದಾಗ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದಾವೀದನಿಗೆ ಜೀವಮಾನದಲ್ಲೆಲ್ಲಾ ಆಪ್ತಮಿತ್ರನಾಗಿದ್ದ ಟೈರಿನ ಅರಸನಾದ ಹೀರಾಮನು, ಸೊಲೊಮೋನನು ತಂದೆಗೆ ಬದಲಾಗಿ ಪಟ್ಟಾಭಿಷೇಕ ಪಡೆದಿದ್ದಾನೆಂದು ಕೇಳಿ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾವೀದನ ಜೀವಮಾನದಲ್ಲೆಲ್ಲಾ ಅವನ ವಿುತ್ರನಾಗಿದ್ದ ತೂರಿನ ಅರಸನಾದ ಹೀರಾಮನು ಸೊಲೊಮೋನನು ತಂದೆಗೆ ಬದಲಾಗಿ ಅಭಿಷೇಕಿಸಲ್ಪಟ್ಟನೆಂದು ಕೇಳಿದಾಗ ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸೊಲೊಮೋನನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕ ಪಡೆದಿದ್ದಾನೆಂದು ಟೈರಿನ ಅರಸನಾದ ಹೀರಾಮನು ಕೇಳಿದಾಗ, ಅವನು ತನ್ನ ರಾಜದೂತರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಏಕೆಂದರೆ ಹೀರಾಮನು ಯಾವಾಗಲೂ ದಾವೀದನಿಗೆ ಆಪ್ತಮಿತ್ರನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:1
24 ತಿಳಿವುಗಳ ಹೋಲಿಕೆ  

ತೂರ್ ಪಟ್ಟಣದ ರಾಜನಾದ ಹೀರಾಮನು ದಾವೀದನ ಬಳಿಗೆ ತನ್ನ ಸಂದೇಶಕರನ್ನು ಕಳುಹಿಸಿದನು. ಇವರೊಂದಿಗೆ ದೇವದಾರು ಮರದ ತೊಲೆಗಳನ್ನು, ಕಲ್ಲುಕುಟಿಗರನ್ನು ಮತ್ತು ಬಡಗಿಯರನ್ನು ಕಳುಹಿಸಿದನು. ದಾವೀದನಿಗೊಂದು ಮನೆಯನ್ನು ಕಟ್ಟಲು ಇವರನ್ನು ಕಳುಹಿಸಿದನು.


ಸೊಲೊಮೋನನು ತನ್ನ ಸ್ನೇಹಿತನೂ ತೂರ್ ದೇಶದ ರಾಜನೂ ಆದ ಹೂರಾಮನಿಗೆ ಹೀಗೆ ಬರೆದು ಕಳುಹಿಸಿದನು: “ನನ್ನ ತಂದೆಯಾದ ದಾವೀದನ ಅರಮನೆಗೆ ಬೇಕಾದ ದೇವದಾರುಮರಗಳನ್ನು ನೀನು ಒದಗಿಸಿದಂತೆಯೇ ನನಗೂ ನೀನು ಸಹಾಯ ಮಾಡಬೇಕು.


ತೂರಿನ ರಾಜನಾದ ಹೀರಾಮನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಹೀರಾಮನು ದೇವದಾರು ಮರಗಳನ್ನು, ಬಡಗಿಗಳನ್ನು ಮತ್ತು ಕಲ್ಲಿನಲ್ಲಿ ಕೆತ್ತನೆ ಮಾಡುವ ಶಿಲ್ಪಿಗಳನ್ನೂ ಸಹ ಕಳುಹಿಸಿದನು. ಅವರು ದಾವೀದನಿಗಾಗಿ ಒಂದು ಮನೆಯನ್ನು ಕಟ್ಟಿದರು.


ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರು ಮತ್ತು ತುರಾಯಿ ಮರಗಳನ್ನು ಕೊಡುತ್ತಿದ್ದನು. ಅದಕ್ಕೆ ಬದಲಾಗಿ ಸೊಲೊಮೋನನು ಪ್ರತಿವರ್ಷವೂ ಹೀರಾಮನಿಗೆ ಅವನ ಮನೆಯವರಿಗೋಸ್ಕರ ಒಂದು ಲಕ್ಷದ ಇಪ್ಪತ್ತು ಸಾವಿರ ಬುಷೆಲ್ ಗೋಧಿಯನ್ನು ಮತ್ತು ಒಂದು ಲಕ್ಷದ ಇಪ್ಪತ್ತು ಸಾವಿರ ಗ್ಯಾಲನ್ ಶುದ್ಧವಾದ ಆಲೀವ್ ಎಣ್ಣೆಯನ್ನು ಕೊಟ್ಟನು.


ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ತೂರಿನ ಜನರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಜನಾಂಗದ ಜನರನ್ನೆಲ್ಲಾ ಗುಲಾಮರನ್ನಾಗಿ ಎದೋಮಿಗೆ ಕಳುಹಿಸಿದರು. ಅವರು ತಮ್ಮ ಸಹೋದರರೊಂದಿಗೆ (ಇಸ್ರೇಲಿನೊಂದಿಗೆ) ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟರು.


ತೂರ್ ಪಟ್ಟಣದ ಶ್ರೀಮಂತರು ನಿನ್ನನ್ನು ಸಂಧಿಸಲು ನಿನಗಾಗಿ ಉಡುಗೊರೆಗಳನ್ನು ತರುವರು.


ರಾಜನಾದ ಸೊಲೊಮೋನನು ಇಸ್ರೇಲಿನ ಮೂವತ್ತು ಸಾವಿರ ಜನರನ್ನು ಬಲತ್ಕಾರದಿಂದ ಈ ಕಾರ್ಯಕ್ಕೆ ನೇಮಿಸಿದನು.


ಆಗ ತೋವಿಯು ತನ್ನ ಮಗನಾದ ಯೋರಾಮನನ್ನು ರಾಜನಾದ ದಾವೀದನ ಬಳಿಗೆ ಕಳುಹಿಸಿದನು. ದಾವೀದನು ಹದದೆಜೆರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಯೋರಾಮನು ದಾವೀದನನ್ನು ಅಭಿನಂದಿಸಿದನು ಮತ್ತು ಆಶೀರ್ವದಿಸಿದನು. (ಈ ಮೊದಲು ಹದದೆಜೆರನು ತೋವಿಗೆ ವಿರುದ್ಧವಾಗಿ ಯುದ್ಧವನ್ನು ಮಾಡಿದನು.) ಯೋರಾಮನು ಚಿನ್ನ, ಬೆಳ್ಳಿ ಮತ್ತು ಹಿತ್ತಾಳೆಯಿಂದ ಮಾಡಿದ ವಸ್ತುಗಳನ್ನು ತಂದಿದ್ದನು.


ತೂರಿನ ವಿಷಯವಾಗಿ ದುಃಖಕರವಾದ ಸಂದೇಶ: “ತಾರ್ಷೀಷಿನ ಹಡಗುಗಳೇ, ದುಃಖಿಸಿರಿ! ನಿಮ್ಮ ರೇವು ಕೆಡವಲ್ಪಟ್ಟಿದೆ.” ಕಿತ್ತಿಮಿನಿಂದ ಹೊರಟ ಹಡಗುಗಳಿಗೆ ಈ ವಾರ್ತೆಯು ತಲುಪಿತು.


ಆದ್ದರಿಂದ ಅಂದು ಯೆಹೋವನು ಒಂದು ವಾಗ್ದಾನವನ್ನು ಮಾಡಿ ಅಬ್ರಾಮನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಯೆಹೋವನು ಅವನಿಗೆ, “ನಾನು ನಿನ್ನ ಸಂತತಿಯವರಿಗೆ ಈ ನಾಡನ್ನು ಕೊಡುವೆನು. ನಾನು ಅವರಿಗೆ ಈಜಿಪ್ಟ್ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ನಾಡನ್ನು ಕೊಡುವೆನು.


“ನೀವು ದೇಶದೊಳಕ್ಕೆ ಹೋದಾಗ, ನಾನು ನಿಮ್ಮ ವೈರಿಗಳನ್ನು ಆ ದೇಶದಿಂದ ಹೊರಗಟ್ಟುವೆನು. ನಾನು ನಿಮ್ಮ ಮೇರೆಗಳನ್ನು ವಿಸ್ತರಿಸುವೆನು. ನಿಮಗೆ ಹೆಚ್ಚೆಚ್ಚಾಗಿ ಭೂಮಿ ದೊರೆಯುವುದು. ಪ್ರತಿ ವರ್ಷ ಮೂರುಸಲ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಿರಿ. ಆ ಸಮಯದಲ್ಲಿ ಯಾರೂ ನಿಮ್ಮಿಂದ ಭೂಮಿಯನ್ನು ಅಪಹರಿಸಲು ಪ್ರಯತ್ನಿಸುವುದಿಲ್ಲ.


ನಿಮಗೆ ಯಾವಾಗಲೂ ಬೇಕಾದಷ್ಟು ನೀರು ಇರುವುದು; ನೀವು ಬಿತ್ತಿದ ಬೀಜಗಳು ಬೆಳೆಯಲು ಸಾಕಷ್ಟು ನೀರು ಇರುವುದು. ನಿಮ್ಮ ಅರಸನು ಆಗಾಗ್ ಎಂಬವನಿಗಿಂತಲೂ ದೊಡ್ಡವನಾಗಿದ್ದಾನೆ. ನಿಮ್ಮ ರಾಜ್ಯವು ಬಹಳ ಬಲಿಷ್ಠವಾಗಿರುವುದು.


ಅವರು ನಿಮ್ಮ ಸಂಧಾನವನ್ನು ಸ್ವೀಕರಿಸಿ ನಿಮಗೆ ತಮ್ಮ ಬಾಗಿಲುಗಳನ್ನು ತೆರೆದುಕೊಟ್ಟರೆ ಆ ಪಟ್ಟಣದಲ್ಲಿರುವವರೆಲ್ಲರೂ ನಿಮಗೆ ಗುಲಾಮರಾಗುವರು. ಅವರು ನಿಮ್ಮ ಕೆಲಸಗಳನ್ನು ಮಾಡಲೇಬೇಕು.


ಆದರೆ ಕೆಲವು ಕಿರುಕುಳಕಾರರು, “ಈ ಮನುಷ್ಯನು ಹೇಗೆ ತಾನೆ ನಮ್ಮನ್ನು ರಕ್ಷಿಸುವನು?” ಎಂದು ಹೇಳಿದರು. ಅವರು ಸೌಲನ ಬಗ್ಗೆ ಕೆಟ್ಟಮಾತುಗಳನ್ನು ಆಡಿದರು; ಅವನನ್ನು ತಿರಸ್ಕರಿಸಿ, ಕಾಣಿಕೆಗಳನ್ನು ತಂದುಕೊಡಲಿಲ್ಲ. ಆದರೆ ಸೌಲನು ಏನೂ ಮಾತನಾಡಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು, ಗಾದ್ ಮತ್ತು ರೂಬೆನ್ ಕುಲದವರಿಗೆ ಕಿರುಕುಳಕೊಡುತ್ತಿದ್ದನು. ನಾಹಾಷನು ಪ್ರತಿ ಮನುಷ್ಯನ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ನಾಹಾಷನು ಅವರಿಗೆ ಸಹಾಯಮಾಡಲು ಯಾರಿಗೂ ಅವಕಾಶಕೊಡುತ್ತಿರಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು ಜೋರ್ಡನ್ ನದಿಯ ಪೂರ್ವ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲ ಇಸ್ರೇಲರ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ಆದ್ದರಿಂದ ಅಮ್ಮೋನಿಯರಿಂದ ಏಳು ಸಾವಿರ ಮಂದಿ ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಓಡಿಹೋದರು.


ಪ್ರತಿವರ್ಷವೂ ರಾಜನನ್ನು ನೋಡಲು ಜನರು ಬರುತ್ತಿದ್ದರು. ಪ್ರತಿಯೊಬ್ಬನೂ ಕಾಣಿಕೆಯನ್ನು ತರುತ್ತಿದ್ದನು. ಅವರು ಬೆಳ್ಳಿಬಂಗಾರದಿಂದ ಮಾಡಿದ ವಸ್ತುಗಳನ್ನು, ಆಯುಧಗಳನ್ನು, ಉಡುಪುಗಳನ್ನು, ಸಾಂಬಾರ ಪದಾರ್ಥಗಳನ್ನು, ಕುದುರೆಗಳನ್ನು ಮತ್ತು ಹೇಸರಕತ್ತೆಗಳನ್ನು ತರುತ್ತಿದ್ದರು.


ಯೂಫ್ರೇಟೀಸ್ ನದಿಯಿಂದ ಹಿಡಿದು ಫಿಲಿಷ್ಟಿಯರ ರಾಜ್ಯ ಮತ್ತು ಈಜಿಪ್ಟಿನ ಮೇರೆಯ ತನಕವಿದ್ದ ಎಲ್ಲಾ ಅರಸರುಗಳಿಗೆ ಸೊಲೊಮೋನನೇ ರಾಜನಾಗಿದ್ದನು.


ಫಿಲಿಷ್ಟಿಯರಲ್ಲಿ ಕೆಲವರು ಅವನಿಗೆ ಬೆಳ್ಳಿಬಂಗಾರಗಳ ಕಾಣಿಕೆಗಳನ್ನು ತಂದುಕೊಟ್ಟರು; ಅವನೊಬ್ಬ ಬಲಿಷ್ಠನಾದ ರಾಜನೆಂದು ಅವರು ತಿಳಿದುಕೊಂಡಿದ್ದರು. ಅರಬಿಯದ ಜನರು ಯೆಹೋಷಾಫಾಟನಿಗೆ ಪಶುಗಳ ಹಿಂಡುಗಳನ್ನು ತಂದುಕೊಟ್ಟರು. ಅವುಗಳಲ್ಲಿ ಏಳು ಸಾವಿರದ ಏಳುನೂರು ಟಗರುಗಳು ಮತ್ತು ಏಳು ಸಾವಿರದ ಏಳುನೂರು ಹೋತಗಳು ಇದ್ದವು.


ಬಲಿಷ್ಠರಾಜರು ಜೆರುಸಲೇಮನ್ನು ಮತ್ತು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯವನ್ನೆಲ್ಲಾ ಆಳಿದರು. ಅವರಿಗೆ ಕಪ್ಪಕಾಣಿಕೆ, ಸುಂಕ, ತೆರಿಗೆಗಳನ್ನು ಸಲ್ಲಿಸಲಾಗುತ್ತಿತ್ತು.


ಅವನ ರಾಜ್ಯವು ಸಮುದ್ರದಿಂದ ಸಮುದ್ರದವರೆಗೂ ಯೂಫ್ರೇಟೀಸ್ ನದಿಯಿಂದ ಭೂಮಿಯ ಬಹುದೂರದ ಸ್ಥಳದವರೆಗೂ ಬೆಳೆಯಲಿ.


ನಿನ್ನ “ದ್ರಾಕ್ಷಾಲತೆ”ಯ ಸಂರಕ್ಷಣೆಗಾಗಿ ಕಟ್ಟಿದ್ದ ಗೋಡೆಗಳನ್ನು ನೀನು ಕೆಡವಿಬಿಟ್ಟದ್ದೇಕೆ? ಈಗ ಅದರ ಸಮೀಪದಲ್ಲಿ ಹೋಗುವ ಪ್ರತಿಯೊಬ್ಬರೂ ಅದರ ಹಣ್ಣುಗಳನ್ನು ತೆಗೆದುಕೊಳ್ಳುವರು.


ಅದು ಬಲವಾದ ಕಾಂಡಗಳನ್ನು ಬೆಳೆಸಿತು. ಅದರ ಕಾಂಡಗಳು ಅಧಿಪತಿಗಳ ರಾಜದಂಡದಂತಿದ್ದವು. ಅವುಗಳಲ್ಲಿ ಒಂದು ಮೋಡಗಳ ಮಧ್ಯದಲ್ಲಿ ಎತ್ತರವಾಗಿ ಬೆಳೆಯಿತು. ಅದು ತನ್ನ ಎತ್ತರದಿಂದ ಮತ್ತು ತನ್ನ ಅನೇಕ ಕೊಂಬೆಗಳಿಂದ ಎದ್ದುಕಾಣುತ್ತಿತ್ತು.


ಅವನು ನಮ್ಮ ಜನರನ್ನು ಪ್ರೀತಿಸುತ್ತಾನೆ ಮತ್ತು ನಮಗೋಸ್ಕರ ಸಭಾಮಂದಿರವನ್ನು ಕಟ್ಟಿಸಿಕೊಟ್ಟಿದ್ದಾನೆ” ಎಂದು ಹೇಳಿ ಬಹಳವಾಗಿ ಬೇಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು