Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:10 - ಪರಿಶುದ್ದ ಬೈಬಲ್‌

10-11 ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರು ಮತ್ತು ತುರಾಯಿ ಮರಗಳನ್ನು ಕೊಡುತ್ತಿದ್ದನು. ಅದಕ್ಕೆ ಬದಲಾಗಿ ಸೊಲೊಮೋನನು ಪ್ರತಿವರ್ಷವೂ ಹೀರಾಮನಿಗೆ ಅವನ ಮನೆಯವರಿಗೋಸ್ಕರ ಒಂದು ಲಕ್ಷದ ಇಪ್ಪತ್ತು ಸಾವಿರ ಬುಷೆಲ್ ಗೋಧಿಯನ್ನು ಮತ್ತು ಒಂದು ಲಕ್ಷದ ಇಪ್ಪತ್ತು ಸಾವಿರ ಗ್ಯಾಲನ್ ಶುದ್ಧವಾದ ಆಲೀವ್ ಎಣ್ಣೆಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರು ಮರಗಳನ್ನೂ ಮತ್ತು ತುರಾಯಿ ಮರಗಳನ್ನೂ ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರಿನ ಮರಗಳನ್ನೂ ತುರಾಯಿಮರಗಳನ್ನೂ ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರಿನ ಮರಗಳನ್ನೂ ತುರಾಯಿಮರಗಳನ್ನೂ ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹೀಗೆಯೇ ಹೀರಾಮನು ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸೊಲೊಮೋನನ ಇಚ್ಛೆಯ ಪ್ರಕಾರವೆಲ್ಲಾ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:10
7 ತಿಳಿವುಗಳ ಹೋಲಿಕೆ  

ತೂರಿನ ರಾಜನಾದ ಹೀರಾಮನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಹೀರಾಮನು ದೇವದಾರು ಮರಗಳನ್ನು, ಬಡಗಿಗಳನ್ನು ಮತ್ತು ಕಲ್ಲಿನಲ್ಲಿ ಕೆತ್ತನೆ ಮಾಡುವ ಶಿಲ್ಪಿಗಳನ್ನೂ ಸಹ ಕಳುಹಿಸಿದನು. ಅವರು ದಾವೀದನಿಗಾಗಿ ಒಂದು ಮನೆಯನ್ನು ಕಟ್ಟಿದರು.


ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರತೀರಕ್ಕೆ ತರುತ್ತಾರೆ. ನಂತರ ನಾನು ಅವುಗಳನ್ನು ಒಟ್ಟಾಗಿ ಕಟ್ಟಿ, ನೀನು ತಿಳಿಸಿದ ಸ್ಥಳಕ್ಕೆ ತೇಲಿಬಿಡುತ್ತೇನೆ. ಗೊತ್ತುಪಡಿಸಿದ ಸ್ಥಳದಲ್ಲಿ ದಿಮ್ಮಿಗಳನ್ನು ಬೇರ್ಪಡಿಸುತ್ತೇನೆ; ನೀನು ಅವುಗಳನ್ನು ತೆಗೆದುಕೊಳ್ಳಬಹುದು. ಅವುಗಳಿಗೆ ಬದಲಾಗಿ ನೀನು ನನ್ನ ಮನೆಯವರಿಗೆ ಆಹಾರಸಾಮಾಗ್ರಿಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ.”


ಅಲ್ಲದೆ ನನಗೆ ಲೆಬನೋನಿನಿಂದ ದೇವದಾರು, ತುರಾಯಿ ಮತ್ತು ಸುಗಂಧಮರಗಳನ್ನು ಕಳುಹಿಸಿಕೊಡು. ನಿನ್ನ ಸೇವಕರು ಲೆಬನೋನಿನ ಮರಗಳನ್ನು ಕತ್ತರಿಸುವುದರಲ್ಲಿ ನಿಪುಣರೆಂಬುದು ನನಗೆ ಗೊತ್ತಿದೆ. ನಿನ್ನ ಅನುಭವಸ್ಥ ಸೇವಕರಿಗೆ ಸಹಾಯ ಮಾಡಲು ನನ್ನ ಸೇವಕರೂ ಬರುವರು.


ಪೂರ್ವದಿಂದ ಮಿದ್ಯಾನ್ಯರೂ ಅಮಾಲೇಕ್ಯರೂ ಯಾವಾಗಲೂ ಬಂದು ಇವರ ಬೆಳೆಗಳನ್ನು ನಾಶಪಡಿಸುತ್ತಿದ್ದರು.


ಹೀರಾಮನು ತೂರಿನ ರಾಜನಾಗಿದ್ದನು. ಹೀರಾಮನು ಯಾವಾಗಲೂ ದಾವೀದನ ಸ್ನೇಹಿತನಾಗಿದ್ದನು. ದಾವೀದನ ನಂತರ ಸೊಲೊಮೋನನು ನೂತನ ರಾಜನಾದನೆಂದು ಹೀರಾಮನು ಕೇಳಿ, ತನ್ನ ಸೇವಕರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು.


ಚೋಯನಿನ ನಗರದ ಪ್ರಮುಖರು ಮೂರ್ಖರಾಗಿದ್ದಾರೆ. ಫರೋಹನ “ಜ್ಞಾನಿಗಳಾದ ಸಲಹೆಗಾರರು” ತಪ್ಪು ಸಲಹೆ ಕೊಡುತ್ತಾರೆ. ಅವರು ತಾವೇ ಬುದ್ಧಿವಂತರೆಂದೂ ರಾಜವಂಶದವರೆಂದೂ ಹೇಳಿಕೊಳ್ಳುವರು. ಆದರೆ ತಾವು ನೆನಸುವಷ್ಟರ ಮಟ್ಟಿಗೆ ಅವರು ಬುದ್ಧಿವಂತರಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು