ರಾಜನಾದ ಸೊಲೊಮೋನನು ತಾನು ನಿರ್ಮಿಸಿದ್ದ ಆಲಯದ ಮತ್ತು ಅರಮನೆಯ ಕೆಲಸಗಳನ್ನು ಮಾಡಲು ಗುಲಾಮರನ್ನು ಬಲಾತ್ಕರಿಸಿದನು. ರಾಜನಾದ ಸೊಲೊಮೋನನು ಇತರ ಅನೇಕ ಕಟ್ಟಡಗಳ ನಿರ್ಮಾಣಕ್ಕೆ ಬಿಟ್ಟಿಕೆಲಸದವರನ್ನು ಉಪಯೋಗಿಸಿಕೊಂಡನು. ಅವನು ಮಿಲ್ಲೋ ಕೋಟೆಯನ್ನು ನಿರ್ಮಿಸಿದನು; ಜೆರುಸಲೇಮಿನ ಸುತ್ತಲೂ ನಗರದ ಗೋಡೆಯನ್ನು ಕಟ್ಟಿಸಿದನು; ಅಲ್ಲದೆ ಅವನು ಹಾಚೋರ್, ಮೆಗಿದ್ದೋ ಮತ್ತು ಗೆಜೆರ್ ನಗರಗಳನ್ನು ಕಟ್ಟಿಸಿದನು.