1 ಅರಸುಗಳು 5:5 - ಪರಿಶುದ್ದ ಬೈಬಲ್5 “ನನ್ನ ತಂದೆಯಾದ ದಾವೀದನಿಗೆ ಯೆಹೋವನು, ‘ನಿನ್ನ ನಂತರ ನಿನ್ನ ಮಗನನ್ನು ನಾನು ರಾಜನನ್ನಾಗಿ ಮಾಡುತ್ತೇನೆ. ನನ್ನನ್ನು ಸನ್ಮಾನಿಸಲು ನಿನ್ನ ಮಗನು ನನಗೆ ಒಂದು ದೇವಾಲಯವನ್ನು ಕಟ್ಟುತ್ತಾನೆ’ ಎಂದು ವಾಗ್ದಾನ ಮಾಡಿದ್ದನು. ಈಗ, ನನ್ನ ದೇವರಾದ ಯೆಹೋವನ ಗೌರವಾರ್ಥವಾಗಿ ದೇವಾಲಯವನ್ನು ನಿರ್ಮಿಸಬೇಕೆಂದಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನು ನನ್ನ ತಂದೆಯಾದ ದಾವೀದನಿಗೆ, ‘ನಾನು ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗನು ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ’ ಎಂದು ಹೇಳಿದ್ದರಿಂದ ನಾನು ನನ್ನ ದೇವರಾದ ಯೆಹೋವನ ಹೆಸರಿಗೆ ಒಂದು ಅಲಯವನ್ನು ಕಟ್ಟಬೇಕೆಂದಿದ್ದೇನೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸರ್ವೇಶ್ವರ ನನ್ನ ತಂದೆ ದಾವೀದನಿಗೆ, ‘ನಾನು ನಿನ್ನ ಸ್ಥಾನದಲ್ಲಿ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗ, ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ,’ ಎಂದು ಹೇಳಿದ್ದರು. ಆದುದರಿಂದ ನಾನು ನನ್ನ ದೇವರಾದ ಸರ್ವೇಶ್ವರನಿಗೆ ಒಂದು ಆಲಯವನ್ನು ಕಟ್ಟಬೇಕೆಂದಿರುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನು ನನ್ನ ತಂದೆಯಾದ ದಾವೀದನಿಗೆ - ನಾನು ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗನು ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ ಎಂದು ಹೇಳಿದ್ದರಿಂದ ನಾನು ನನ್ನ ದೇವರಾದ ಯೆಹೋವನ ಹೆಸರಿಗೆ ಒಂದು ಆಲಯವನ್ನು ಕಟ್ಟಬೇಕೆಂದಿರುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದ್ದರಿಂದ, ನನ್ನ ದೇವರಾದ ಯೆಹೋವ ದೇವರ ಹೆಸರಿಗೆ ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಅದರ ವಿಷಯವಾಗಿ ಯೆಹೋವ ದೇವರು ನನ್ನ ತಂದೆಯಾದ ದಾವೀದನಿಗೆ, ‘ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ನಾನು ಕುಳ್ಳಿರಿಸುವ ನಿನ್ನ ಮಗನೇ ನನ್ನ ಹೆಸರಿಗೆ ದೇವಾಲಯವನ್ನು ಕಟ್ಟಿಸುವನು,’ ಎಂದು ಹೇಳಿದ್ದಾರಲ್ಲವೇ. ಅಧ್ಯಾಯವನ್ನು ನೋಡಿ |