1 ಅರಸುಗಳು 5:6 - ಪರಿಶುದ್ದ ಬೈಬಲ್6 ಆದ್ದರಿಂದ ನಿನ್ನ ಸಹಾಯವು ನನಗೆ ಬೇಕಾಗಿದೆ. ನಿನ್ನ ಜನರನ್ನು ಲೆಬನೋನಿಗೆ ಕಳುಹಿಸು. ಅಲ್ಲಿ ಅವರು ನನಗಾಗಿ ದೇವದಾರುಮರಗಳನ್ನು ಕಡಿದು ಬೀಳಿಸಲಿ. ನನ್ನ ಸೇವಕರೂ ನಿನ್ನವರೊಂದಿಗೆ ಕೆಲಸಮಾಡುತ್ತಾರೆ. ನಿನ್ನ ಸೇವಕರಿಗೆ ಗೊತ್ತುಪಡಿಸಿದ ವೇತನವನ್ನು ನಾನು ಕೊಡುತ್ತೇನೆ. ಆದರೆ ನಿನ್ನ ಸಹಾಯ ನನಗೆ ಬೇಕು. ನಮ್ಮ ಬಡಗಿಗಳು ಚೀದೋನ್ಯರ ಬಡಗಿಗಳಂತೆ ಕುಶಲಕರ್ಮಿಗಳಲ್ಲ” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದುದರಿಂದ ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು, ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಚೀದೋನ್ಯರಂತೆ ಮರಕೊಯ್ಯುವುದರಲ್ಲಿ ಜಾಣರು ನಮ್ಮಲ್ಲಿರುವುದಿಲ್ಲವೆಂದು ನಿನಗೆ ಗೊತ್ತಿದೆಯಲ್ಲಾ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು; ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಸಿದೋನ್ಯರಂತೆ ಮರಕೊಯ್ಯುವುದರಲ್ಲಿ ಜಾಣರು ನಮ್ಮಲ್ಲಿರುವುದಿಲ್ಲವೆಂದು ನಿನಗೆ ಗೊತ್ತಿದೆಯಲ್ಲವೆ?” ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದದರಿಂದ ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು; ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಚೀದೋನ್ಯರಂತೆ ಮರ ಕೊಯ್ಯುವದರಲ್ಲಿ ಜಾಣರು ನಮ್ಮಲ್ಲಿರುವದಿಲ್ಲವೆಂದು ನಿನಗೆ ಗೊತ್ತುಂಟಲ್ಲಾ ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ಆದ್ದರಿಂದ ನೀನು ನನಗೋಸ್ಕರ ಲೆಬನೋನಿನಲ್ಲಿ ದೇವದಾರು ಮರಗಳನ್ನು ಕಡಿಯಲು ಆಜ್ಞಾಪಿಸು. ನನ್ನ ಸೇವಕರೂ, ನಿನ್ನ ಸೇವಕರೂ ಕೂಡ ಇರಲಿ. ನೀನು ಹೇಳಿದ ಪ್ರಕಾರ, ನಿನ್ನ ಸೇವಕರ ಕೂಲಿಯನ್ನು ಕೊಡುತ್ತೇನೆ. ಏಕೆಂದರೆ ನಮ್ಮಲ್ಲಿ ಸೀದೋನ್ಯರ ಹಾಗೆ ಮರವನ್ನು ಕಡಿಯಲು ತಿಳಿದವರಿಲ್ಲ ಎಂದು ನೀನು ಬಲ್ಲೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ಸೆರೆಯಿಂದ ಹಿಂತಿರುಗಿಬಂದ ಜನರು ಬಡಗಿಗಳಿಗೂ ಕಲ್ಲುಕುಟಿಗರಿಗೂ ಹಣ ಕೊಟ್ಟರು. ಲೆಬನೋನಿನಿಂದ ದೇವದಾರು ಮರಗಳನ್ನು ಸಾಗಿಸುವ ತೂರ್ಯರಿಗೆ ಮತ್ತು ಚೀದೋನ್ಯರಿಗೆ ಆಹಾರಪದಾರ್ಥಗಳನ್ನು, ಆಲಿವ್ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಸಂಬಳವಾಗಿ ಕೊಟ್ಟರು. ಸೊಲೊಮೋನನು ಮೊದಲನೆಯ ದೇವಾಲಯವನ್ನು ಕಟ್ಟುವಾಗ ಅದಕ್ಕೆ ಬೇಕಾದ ಮರಗಳನ್ನು ಸಮುದ್ರಮಾರ್ಗವಾಗಿ ತಂದಂತೆಯೇ ಇವರೂ ಜೆರುಸಲೇಮಿಗೆ ಸಮೀಪವಿರುವ ಯೊಪ್ಪಕ್ಕೆ ಸಮುದ್ರಮಾರ್ಗವಾಗಿ ತಂದರು. ಪರ್ಶಿಯಾದ ಅರಸನಾದ ಸೈರಸನ ಆಜ್ಞೆಗನುಸಾರವಾಗಿ ಇವೆಲ್ಲವೂ ಮಾಡಲ್ಪಟ್ಟವು.