Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:8 - ಪರಿಶುದ್ದ ಬೈಬಲ್‌

8 ನಂತರ ಹೀರಾಮನು ಸೊಲೊಮೋನನಿಗೆ ಈ ಸಂದೇಶವನ್ನು ಕಳುಹಿಸಿದನು: “ನಿನ್ನ ಕೋರಿಕೆಯು ನನಗೆ ತಿಳಿಯಿತು. ನಾನು ನಿನಗೆ ಬೇಕಾದ ಎಲ್ಲ ದೇವದಾರು ಮರಗಳನ್ನು ಮತ್ತು ತುರಾಯಿ ಮರಗಳನ್ನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ ಅವನು ಸೊಲೊಮೋನನಿಗೆ, “ನೀನು ಹೇಳಿಕಳುಹಿಸಿದ್ದನ್ನು ಕೇಳಿದೆನು. ದೇವದಾರು ವೃಕ್ಷಗಳನ್ನೂ, ತುರಾಯಿ ಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇದೂ ಅಲ್ಲದೆ, ಅವನು ಸೊಲೊಮೋನನಿಗೆ, “ನೀನು ಹೇಳಿ ಕಳುಹಿಸಿದ್ದನ್ನು, ಕೇಳಿದೆನು; ದೇವದಾರು ವೃಕ್ಷಗಳನ್ನೂ ತುರಾಯಿಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ಅವನು ಸೊಲೊಮೋನನಿಗೆ - ನೀನು ಹೇಳಿಕಳುಹಿಸಿದ್ದನ್ನು ಕೇಳಿದೆನು; ದೇವದಾರು ವೃಕ್ಷಗಳನ್ನೂ ತುರಾಯಿಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹೀರಾಮನು ಸೊಲೊಮೋನನಿಗೆ ಸಂದೇಶವನ್ನು ಕಳುಹಿಸಿ, “ನೀನು ಹೇಳಿ ಕಳುಹಿಸಿದ್ದನ್ನು ನಾನು ಕೇಳಿದ್ದೇನೆ. ದೇವದಾರು ಮರಗಳ ವಿಷಯವೂ, ತುರಾಯಿ ಮರಗಳ ವಿಷಯವೂ ನೀನು ಇಚ್ಛಿಸಿದ್ದನ್ನೆಲ್ಲಾ ನಾನು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:8
7 ತಿಳಿವುಗಳ ಹೋಲಿಕೆ  

ದೊಡ್ಡ ಕೋಣೆಯ ಗೋಡೆಗೆ ಸೊಲೊಮೋನನು ತುರಾಯಿ ಮರದ ಹಲಗೆಗಳಿಂದ ಹೊದಿಸಿ ಅದರ ಮೇಲೆ ಬಂಗಾರದ ತಗಡನ್ನು ಹೊದಿಸಿದನು. ಅದರಲ್ಲಿ ಖರ್ಜೂರ ಮರಗಳೂ ಸರಪಣಿಗಳೂ ಬಂಗಾರದಿಂದ ಮಾಡಲ್ಪಟ್ಟು ಜೋಡಿಸಲ್ಪಟ್ಟಿದ್ದವು.


ನಂತರ ಅವರು ತುರಾಯಿ ಮರದ ಬಾಗಿಲುಗಳನ್ನು ಮಾಡಿದರು. ಅಲ್ಲಿ ಎರಡು ಬಾಗಿಲುಗಳಿದ್ದು, ಪ್ರತಿಯೊಂದೂ ಮಡಿಸುವಂತಹ ಎರಡು ಭಾಗಗಳನ್ನು ಹೊಂದಿದ್ದವು.


ದೇವಾಲಯದ ಒಳಗಿನ ಗೋಡೆಗಳಿಗೆ ದೇವದಾರು ಮರದ ಹಲಗೆಗಳನ್ನು ನೆಲದಿಂದ ಮಾಳಿಗೆಯವರೆಗೆ ಹೊದಿಸಿದ್ದರು. ಕಲ್ಲಿನ ನೆಲಕ್ಕೆ ತುರಾಯಿ ಮರದ ಹಲಗೆಗಳನ್ನು ಹಾಸಿದ್ದರು.


ದಾವೀದನು ಮತ್ತು ಇಸ್ರೇಲರೆಲ್ಲರು ಕಿನ್ನರಿ, ದಮ್ಮಡಿ, ಝಲ್ಲರಿ, ತಾಳಗಳನ್ನು ಬಾರಿಸುತ್ತಾ ಸನ್ನಿಧಿಯಲ್ಲಿ ನೃತ್ಯಮಾಡುತ್ತಿದ್ದರು.


ಸೊಲೊಮೋನನು ಹೇಳಿದುದನ್ನು ಹೀರಾಮನು ಕೇಳಿದಾಗ ಬಹಳ ಸಂತೋಷಗೊಂಡು, “ಈ ಮಹಾ ಜನಾಂಗಕ್ಕೋಸ್ಕರ ದಾವೀದನಿಗೆ ವಿವೇಕಿಯಾದ ಮಗನನ್ನು ಕರುಣಿಸಿದ್ದಕ್ಕಾಗಿ ನಾನು ಯೆಹೋವನಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ” ಎಂದು ಹೇಳಿದನು.


ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರತೀರಕ್ಕೆ ತರುತ್ತಾರೆ. ನಂತರ ನಾನು ಅವುಗಳನ್ನು ಒಟ್ಟಾಗಿ ಕಟ್ಟಿ, ನೀನು ತಿಳಿಸಿದ ಸ್ಥಳಕ್ಕೆ ತೇಲಿಬಿಡುತ್ತೇನೆ. ಗೊತ್ತುಪಡಿಸಿದ ಸ್ಥಳದಲ್ಲಿ ದಿಮ್ಮಿಗಳನ್ನು ಬೇರ್ಪಡಿಸುತ್ತೇನೆ; ನೀನು ಅವುಗಳನ್ನು ತೆಗೆದುಕೊಳ್ಳಬಹುದು. ಅವುಗಳಿಗೆ ಬದಲಾಗಿ ನೀನು ನನ್ನ ಮನೆಯವರಿಗೆ ಆಹಾರಸಾಮಾಗ್ರಿಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ.”


ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ಅವುಗಳನ್ನು ಜೋಡಿಸಿ ತೆಪ್ಪಗಳನ್ನಾಗಿ ಮಾಡಿ ಸಮುದ್ರದಲ್ಲಿ ತೇಲಿಬಿಡುವೆವು. ಅವು ಯೊಪ್ಪಕ್ಕೆ ತಲುಪಿದಾಗ ನೀನು ಅವುಗಳನ್ನು ಶೇಖರಿಸಿ ಬೇಕಾದ ಕಡೆಗೆ ರವಾನಿಸು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು