Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:9 - ಪರಿಶುದ್ದ ಬೈಬಲ್‌

9 ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರತೀರಕ್ಕೆ ತರುತ್ತಾರೆ. ನಂತರ ನಾನು ಅವುಗಳನ್ನು ಒಟ್ಟಾಗಿ ಕಟ್ಟಿ, ನೀನು ತಿಳಿಸಿದ ಸ್ಥಳಕ್ಕೆ ತೇಲಿಬಿಡುತ್ತೇನೆ. ಗೊತ್ತುಪಡಿಸಿದ ಸ್ಥಳದಲ್ಲಿ ದಿಮ್ಮಿಗಳನ್ನು ಬೇರ್ಪಡಿಸುತ್ತೇನೆ; ನೀನು ಅವುಗಳನ್ನು ತೆಗೆದುಕೊಳ್ಳಬಹುದು. ಅವುಗಳಿಗೆ ಬದಲಾಗಿ ನೀನು ನನ್ನ ಮನೆಯವರಿಗೆ ಆಹಾರಸಾಮಾಗ್ರಿಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ, ಸಮುದ್ರ ಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ, ಅಲ್ಲಿ ಬಿಚ್ಚಿಸಿಕೊಡುವೆನು. ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರ ಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ ಸಮುದ್ರಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ ಅಲ್ಲೆ ಬಿಚ್ಚಿಸುವೆನು; ನೀನು ಅವುಗಳನ್ನು ತೆಗೆದುಕೊಂಡು, ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆ,” ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ ಸಮುದ್ರಮಾರ್ಗವಾಗಿ ನೀನು ನೇವಿುಸುವ ಸ್ಥಳಕ್ಕೆ ಕಳುಹಿಸಿ ಅಲ್ಲಿ ಬಿಚ್ಚಿಸುವೆನು; ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರಪದಾರ್ಥಗಳನ್ನು ಕೊಡಬೇಕೆಂಬದೇ ನನ್ನ ಅಪೇಕ್ಷೆಯಾಗಿದೆ ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತಂದಮೇಲೆ, ನನಗೆ ನೇಮಿಸಿದ ಸ್ಥಳಕ್ಕೆ ತೆಪ್ಪವನ್ನು ಕಟ್ಟಿ, ಸಮುದ್ರದಿಂದ ಕಳುಹಿಸಿ, ಅಲ್ಲಿ ಒಪ್ಪಿಸುವ ಹಾಗೆ ಮಾಡುವೆನು. ನೀನು ಅವುಗಳನ್ನು ತೆಗೆದುಕೊಂಡು ನನ್ನ ಮನೆಯವರಿಗೊಸ್ಕರ ಆಹಾರವನ್ನು ಕೊಟ್ಟು, ನನ್ನ ಇಚ್ಛೆಯನ್ನು ತೀರಿಸುವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:9
14 ತಿಳಿವುಗಳ ಹೋಲಿಕೆ  

“‘ಇಸ್ರೇಲ್ ಮತ್ತು ಯೆಹೂದ ದೇಶದವರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ನಿನ್ನ ವಸ್ತುಗಳಿಗೆ ಗೋಧಿ, ಆಲೀವ್, ಅಂಜೂರ, ಜೇನು, ಎಣ್ಣೆ ಮತ್ತು ಮುಲಾಮುಗಳನ್ನು ಕೊಟ್ಟರು.


ಸೆರೆಯಿಂದ ಹಿಂತಿರುಗಿಬಂದ ಜನರು ಬಡಗಿಗಳಿಗೂ ಕಲ್ಲುಕುಟಿಗರಿಗೂ ಹಣ ಕೊಟ್ಟರು. ಲೆಬನೋನಿನಿಂದ ದೇವದಾರು ಮರಗಳನ್ನು ಸಾಗಿಸುವ ತೂರ್ಯರಿಗೆ ಮತ್ತು ಚೀದೋನ್ಯರಿಗೆ ಆಹಾರಪದಾರ್ಥಗಳನ್ನು, ಆಲಿವ್ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಸಂಬಳವಾಗಿ ಕೊಟ್ಟರು. ಸೊಲೊಮೋನನು ಮೊದಲನೆಯ ದೇವಾಲಯವನ್ನು ಕಟ್ಟುವಾಗ ಅದಕ್ಕೆ ಬೇಕಾದ ಮರಗಳನ್ನು ಸಮುದ್ರಮಾರ್ಗವಾಗಿ ತಂದಂತೆಯೇ ಇವರೂ ಜೆರುಸಲೇಮಿಗೆ ಸಮೀಪವಿರುವ ಯೊಪ್ಪಕ್ಕೆ ಸಮುದ್ರಮಾರ್ಗವಾಗಿ ತಂದರು. ಪರ್ಶಿಯಾದ ಅರಸನಾದ ಸೈರಸನ ಆಜ್ಞೆಗನುಸಾರವಾಗಿ ಇವೆಲ್ಲವೂ ಮಾಡಲ್ಪಟ್ಟವು.


ಟೈರ್ ಮತ್ತು ಸಿದೋನ್ ಪಟ್ಟಣಗಳ ಜನರ ಮೇಲೆ ಹೆರೋದನು ಬಹು ಕೋಪಗೊಂಡಿದ್ದನು. ಆ ಜನರೆಲ್ಲರೂ ಹೆರೋದನನ್ನು ಭೇಟಿಯಾಗಲು ಒಟ್ಟಾಗಿ ಹೋದರು. ಅವರು ಬ್ಲಾಸ್ತನನ್ನು ತಮ್ಮ ಕಡೆಗೆ ಒಲಿಸಿಕೊಂಡರು. ಬ್ಲಾಸ್ತನು ರಾಜನ ವೈಯಕ್ತಿಕ ಸೇವಕನಾಗಿದ್ದನು. ಆ ಜನರು ತಮ್ಮೊಂದಿಗೆ ಶಾಂತಿಸಂಧಾನ ಮಾಡಿಕೊಳ್ಳಬೇಕೆಂದು ಹೆರೋದನನ್ನು ಕೇಳಿಕೊಂಡರು. ಯಾಕೆಂದರೆ ಅವರ ನಾಡಿಗೆ ಹೆರೋದನ ನಾಡಿನಿಂದ ಆಹಾರವನ್ನು ತರಿಸಿಕೊಳ್ಳಬೇಕಾಗಿತ್ತು.


ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ಅವುಗಳನ್ನು ಜೋಡಿಸಿ ತೆಪ್ಪಗಳನ್ನಾಗಿ ಮಾಡಿ ಸಮುದ್ರದಲ್ಲಿ ತೇಲಿಬಿಡುವೆವು. ಅವು ಯೊಪ್ಪಕ್ಕೆ ತಲುಪಿದಾಗ ನೀನು ಅವುಗಳನ್ನು ಶೇಖರಿಸಿ ಬೇಕಾದ ಕಡೆಗೆ ರವಾನಿಸು.”


ಜೆರುಸಲೇಮಿನಲ್ಲಿ ಸೊಲೊಮೋನನು ಅಪಾರವಾದ ಬೆಳ್ಳಿಬಂಗಾರಗಳನ್ನು ಶೇಖರಿಸಿಟ್ಟಿದನು. ಭೂಮಿಯ ಮೇಲೆ ಕಲ್ಲುಗಳು ಹೇಗಿರುತ್ತವೋ ಅದೇ ರೀತಿಯಲ್ಲಿ ಅವನಲ್ಲಿ ಬೆಳ್ಳಿಬಂಗಾರಗಳಿದ್ದವು. ದೇವದಾರು ಮರಗಳನ್ನೂ ಸೊಲೊಮೋನನು ಶೇಖರಿಸಿಟ್ಟನು. ಪಶ್ಚಿಮದ ಬೆಟ್ಟಪ್ರದೇಶಗಳಲ್ಲಿ ಜಾಲಿಮರಗಳು ಹೇರಳವಾಗಿರುವಂತೆ ದೇವದಾರುಮರಗಳೂ ಹೇರಳವಾಗಿದ್ದವು.


ನಾನು ಜೋರ್ಡನ್ ನದಿ ದಾಟಿ, ನೀನು ನಮಗೆ ಕೊಡುವ ಉತ್ತಮವಾದ ದೇಶವನ್ನು ನಾನು ನೋಡುವಂತೆ ಮಾಡು. ಅದರ ಮನೋಹರವಾದ ಬೆಟ್ಟಪ್ರದೇಶಗಳನ್ನೂ ಲೆಬನೋನ್ ಪ್ರಾಂತ್ಯಗಳನ್ನೂ ನೋಡುವಂತೆ ಮಾಡು’ ಎಂದು ಬೇಡಿದೆನು.


ನಂತರ ಹೀರಾಮನು ಸೊಲೊಮೋನನಿಗೆ ಈ ಸಂದೇಶವನ್ನು ಕಳುಹಿಸಿದನು: “ನಿನ್ನ ಕೋರಿಕೆಯು ನನಗೆ ತಿಳಿಯಿತು. ನಾನು ನಿನಗೆ ಬೇಕಾದ ಎಲ್ಲ ದೇವದಾರು ಮರಗಳನ್ನು ಮತ್ತು ತುರಾಯಿ ಮರಗಳನ್ನು ಕೊಡುತ್ತೇನೆ.


ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರು ಮತ್ತು ತುರಾಯಿ ಮರಗಳನ್ನು ಕೊಡುತ್ತಿದ್ದನು. ಅದಕ್ಕೆ ಬದಲಾಗಿ ಸೊಲೊಮೋನನು ಪ್ರತಿವರ್ಷವೂ ಹೀರಾಮನಿಗೆ ಅವನ ಮನೆಯವರಿಗೋಸ್ಕರ ಒಂದು ಲಕ್ಷದ ಇಪ್ಪತ್ತು ಸಾವಿರ ಬುಷೆಲ್ ಗೋಧಿಯನ್ನು ಮತ್ತು ಒಂದು ಲಕ್ಷದ ಇಪ್ಪತ್ತು ಸಾವಿರ ಗ್ಯಾಲನ್ ಶುದ್ಧವಾದ ಆಲೀವ್ ಎಣ್ಣೆಯನ್ನು ಕೊಟ್ಟನು.


ಸಮುದ್ರದ ಬಗ್ಗೆ ಹೆಚ್ಚಿಗೆ ತಿಳಿದಿರುವ ಕೆಲವು ಜನರು ರಾಜನಾದ ಹೀರಾಮನ ಹತ್ತಿರ ಇದ್ದರು. ಅವರು ಅನುಭವಸ್ಥ ನಾವಿಕರಾಗಿದ್ದರು. ಸೊಲೊಮೋನನ ಹಡಗುಗಳಲ್ಲಿ ಅವನ ಜನರೊಡನೆ ಕೆಲಸಮಾಡಲು, ರಾಜನಾದ ಹೀರಾಮನು ತನ್ನ ನಿಪುಣರಾದ ಜನರನ್ನು ಕಳುಹಿಸಿದನು.


ನಿನ್ನ ಕೋರಿಕೆಯನ್ನು ಅನುಗ್ರಹಿಸುವೆನು; ನಿನ್ನನ್ನು ಜ್ಞಾನಿಯನ್ನಾಗಿಯೂ ವಿವೇಕಿಯನ್ನಾಗಿಯೂ ಮಾಡುವೆನು. ಪೂರ್ವಕಾಲದಲ್ಲಿ ನಿನ್ನಂತವರು ಯಾರೊಬ್ಬರೂ ಇರಲಿಲ್ಲ ಎನ್ನುವಷ್ಟು ಜ್ಞಾನಿಯನ್ನಾಗಿ ನಿನ್ನನ್ನು ಮಾಡುತ್ತೇನೆ. ಮುಂದೆ ನಿನ್ನಂತವರು ಯಾರೊಬ್ಬರೂ ಇರುವುದಿಲ್ಲ.


ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಅನೇಕ ಜನರಿದ್ದರು. ಅಲ್ಲಿನ ಜನಸಂಖ್ಯೆಯು ಸಮುದ್ರತೀರದ ಮರಳಿನ ಕಣಗಳಷ್ಟಿತ್ತು. ಜನರು ಸಂತುಷ್ಟರಾಗಿ ಜೀವಿಸುತ್ತಿದ್ದರು. ಅವರು ತಿಂದು ಕುಡಿದು ಸಂತೋಷಿಸುತ್ತಿದ್ದರು.


ರಾಜನಾದ ಸೊಲೊಮೋನನು ಭೂಲೋಕದ ಎಲ್ಲಾ ರಾಜರುಗಳಿಗಿಂತ ಜ್ಞಾನದಲ್ಲಿಯೂ ಐಶ್ವರ್ಯದಲ್ಲಿಯೂ ಹೆಚ್ಚು ಪ್ರಸಿದ್ಧನಾದನು.


ಆದರೆ ಮನುಷ್ಯರಲ್ಲಿರುವ ದೇವರಾತ್ಮನು ಅಂದರೆ ಸರ್ವಶಕ್ತನಾದ ದೇವರ ‘ಉಸಿರು’ ಮನುಷ್ಯರಿಗೆ ಜ್ಞಾನವನ್ನು ಕೊಡುತ್ತದೆ.


ನಾನು ಮನಸ್ಸಿನಲ್ಲಿ, “ನಾನು ಬಹು ಜ್ಞಾನಿ. ನನಗಿಂತ ಮೊದಲು ಜೆರುಸಲೇಮನ್ನು ಆಳಿದ ಎಲ್ಲಾ ರಾಜರುಗಳಿಗಿಂತ ನಾನು ಜ್ಞಾನಿ. ನಾನು ಜ್ಞಾನವನ್ನೂ ವಿವೇಕವನ್ನೂ ಚೆನ್ನಾಗಿ ತಿಳಿದುಕೊಂಡಿರುವೆ” ಎಂದುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು