1 ಅರಸುಗಳು 6:1 - ಪರಿಶುದ್ದ ಬೈಬಲ್1 ಇಸ್ರೇಲಿನ ಜನರು ಈಜಿಪ್ಟನ್ನು ಬಿಟ್ಟ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ ರಾಜನಾದ ಸೊಲೊಮೋನನು ಇಸ್ರೇಲನ್ನು ಆಳಲಾರಂಭಿಸಿದ ನಾಲ್ಕನೆಯ ವರ್ಷದಲ್ಲಿ ದೇವಾಲಯದ ನಿರ್ಮಾಣವು ಆರಂಭಗೊಂಡಿತು. ಅದು ವರ್ಷದ ಎರಡನೆಯ ತಿಂಗಳಾದ ಜೀವ್ (ವೈಶಾಖ) ತಿಂಗಳಲ್ಲಿ ಆರಂಭಗೊಂಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟುಬಂದ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ, ಇಸ್ರಾಯೇಲರ ಅರಸನಾದ ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ, ಎರಡನೆಯ ತಿಂಗಳಿನ, ವೈಶಾಖ ಮಾಸದಲ್ಲಿ ಅರಸನಾದ ಸೊಲೊಮೋನನು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟ ನಾನೂರ ಎಂಬತ್ತನೆಯ ವರ್ಷದಲ್ಲಿ ಅಂದರೆ, ಇಸ್ರಯೇಲರ ಅರಸನಾದ ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಾದ ವೈಶಾಖ ಮಾಸದಲ್ಲಿ ಅರಸ ಸೊಲೊಮೋನನು ಸರ್ವೇಶ್ವರಸ್ವಾಮಿಯ ಆಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇಸ್ರಾಯೇಲ್ಯರು ಐಗುಪ್ತದೇಶವನ್ನು ಬಿಟ್ಟ ನಾನೂರ ಎಂಭತ್ತನೆಯ ವರುಷದ ಅಂದರೆ ಇಸ್ರಾಯೇಲ್ಯರ ಅರಸನಾದ ಸೊಲೊಮೋನನ ಆಳಿಕೆಯ ನಾಲ್ಕನೆಯ ವರುಷದ ಎರಡನೆಯ ತಿಂಗಳಾದ ವೈಶಾಖಮಾಸದಲ್ಲಿ ಅರಸನಾದ ಸೊಲೊಮೋನನು ಯೆಹೋವನ ಆಲಯವನ್ನು ಕಟ್ಟುವದಕ್ಕೆ ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇಸ್ರಾಯೇಲರು ಈಜಿಪ್ಟ್ ದೇಶದಿಂದ ಬಂದ ನಾನೂರ ಎಂಬತ್ತನೆಯ ವರುಷದಲ್ಲಿ ಇಸ್ರಾಯೇಲಿನ ಮೇಲೆ ಸೊಲೊಮೋನನ ಆಳಿಕೆಯ ನಾಲ್ಕನೆಯ ವರ್ಷದ, ಎರಡನೆಯ ತಿಂಗಳಾದ ಜಿವ್ ತಿಂಗಳಲ್ಲಿ ಅವನು ಯೆಹೋವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿ |
ಆದರೆ ಕ್ರಿಸ್ತನು ಈಗಾಗಲೇ ಪ್ರಧಾನಯಾಜಕನಾಗಿ ಬಂದಿದ್ದಾನೆ. ಈಗ ನಾವು ಹೊಂದಿರುವ ಉತ್ತಮ ಸಂಗತಿಗಳಿಗೆ ಆತನು ಪ್ರಧಾನಯಾಜಕನಾಗಿದ್ದಾನೆ. ಇತರ ಯಾಜಕರಾದರೊ ಗುಡಾರದಲ್ಲಿ ಸೇವೆಯನ್ನು ಮಾಡಿದರು. ಆದರೆ ಕ್ರಿಸ್ತನು ಗುಡಾರದಲ್ಲಿ ಸೇವೆ ಮಾಡದೆ ಅದಕ್ಕಿಂತಲೂ ಶ್ರೇಷ್ಠವಾದ ಸ್ಥಳದಲ್ಲಿ ಸೇವೆ ಮಾಡುತ್ತಾನೆ. ಅದು ಮತ್ತಷ್ಟು ಪರಿಪೂರ್ಣವಾದದ್ದು. ಅದು ಮನುಷ್ಯರಿಂದ ನಿರ್ಮಿತವಾದದ್ದಲ್ಲ. ಲೋಕಕ್ಕೆ ಸೇರಿದ್ದೂ ಅಲ್ಲ.