Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:16 - ಪರಿಶುದ್ದ ಬೈಬಲ್‌

16 ದೇವಾಲಯದ ಹಿಂಭಾಗದಲ್ಲಿ ಅವರು ಮೂವತ್ತು ಅಡಿ ಉದ್ದವಾಗಿರುವ ಒಂದು ಕೊಠಡಿಯನ್ನು ನಿರ್ಮಿಸಿದ್ದರು. ಈ ಕೊಠಡಿಯ ಗೋಡೆಗಳಿಗೂ ದೇವದಾರು ಮರದ ಹಲಗೆಗಳನ್ನು ನೆಲದಿಂದ ಮಾಳಿಗೆಯವರೆಗೆ ಹೊದಿಸಿದ್ದರು. ಈ ಕೊಠಡಿಯನ್ನು ಮಹಾ ಪವಿತ್ರಸ್ಥಳವೆಂದು ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದಲ್ಲದೆ ಅವನು ದೇವಾಲಯದೊಳಗೆ ಹಿಂದಿನ ಇಪ್ಪತ್ತು ಮೊಳ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿದನು. ಅದರ ಹಿಂದಿನ ಭಾಗವನ್ನು ಗರ್ಭಗೃಹ ಅಥವಾ ಮಹಾಪರಿಶುದ್ಧ ಸ್ಥಳ ಎಂದು ಪ್ರತ್ಯೇಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇದಲ್ಲದೆ, ದೇವಾಲಯದೊಳಗೆ ಹಿಂದಿನ 9 ಮೀಟರ್ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿ ಅದರ ಹಿಂದಿನ ಭಾಗವನ್ನು ಗರ್ಭಗುಡಿ, ಅಥವಾ ಮಹಾಪರಿಶುದ್ಧ ಸ್ಥಳವೆಂದು ಪ್ರತ್ಯೇಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದಲ್ಲದೆ ಅವನು ದೇವಾಲಯದೊಳಗೆ ಹಿಂದಿನ ಇಪ್ಪತ್ತು ಮೊಳ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಿಗೆಗಳಿಂದ ಒಂದು ಗೋಡೆಯನ್ನು ಮಾಡಿಸಿ ಅದರ ಹಿಂದಿನ ಭಾಗವನ್ನು ಗರ್ಭಗೃಹ ಅಥವಾ ಮಹಾಪರಿಶುದ್ಧ ಸ್ಥಳವೆಂದು ಪ್ರತ್ಯೇಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವನು ಆಲಯದ ಕಡೆಗಳಲ್ಲಿ 9 ಮೀಟರ್ ನೆಲವನ್ನೂ, ಗೋಡೆಗಳನ್ನೂ, ದೇವದಾರುಗಳ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿ ಅದರ ಹಿಂದಿನ ಭಾಗವನ್ನು ಅತಿ ಪರಿಶುದ್ಧಸ್ಥಳದ ಅಂಗನ ಅಥವಾ ಮಹಾಪರಿಶುದ್ಧ ಸ್ಥಳವೆಂದು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:16
13 ತಿಳಿವುಗಳ ಹೋಲಿಕೆ  

ಸೊಲೊಮೋನನು ಮಹಾಪವಿತ್ರ ಸ್ಥಳವನ್ನು ತಯಾರಿಸಿದನು. ಅದು ಇಪ್ಪತ್ತು ಮೊಳ ಉದ್ದ ಮತ್ತು ಇಪ್ಪತ್ತು ಮೊಳ ಅಗಲವಿತ್ತು. ದೇವಾಲಯದ ಅಗಲದಷ್ಟೇ ಅದು ಅಗಲವಿತ್ತು. ಅದರ ಗೋಡೆಗಳನ್ನು ಅಪ್ಪಟ ಬಂಗಾರದ ತಗಡಿನಿಂದ ಹೊದಿಸಿದನು. ಆ ಬಂಗಾರವು ಇಪ್ಪತ್ತಮೂರು ಟನ್ ತೂಕವಿತ್ತು.


ಆಗ ಯಾಜಕರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಅದರ ಸರಿಯಾದ ಸ್ಥಳದಲ್ಲಿ ಇಟ್ಟರು. ಇದು ಆಲಯದ ಮಹಾ ಪವಿತ್ರಸ್ಥಳವಾಗಿತ್ತು. ಒಡಂಬಡಿಕೆಯ ಪೆಟ್ಟಿಗೆಯನ್ನು ಕೆರೂಬಿಗಳ ರೆಕ್ಕೆಗಳ ಅಡಿಯಲ್ಲಿ ಇಟ್ಟರು.


ಎರಡನೆ ತೆರೆಯ ಹಿಂದೆ “ಮಹಾ ಪವಿತ್ರಸ್ಥಳ”ವೆಂದು ಕರೆಸಿಕೊಳ್ಳುವ ಒಂದು ಕೊಠಡಿಯಿತ್ತು.


ಆತನು ಹೇಳಿದ್ದೇನೆಂದರೆ: “ನಿನ್ನ ಸಹೋದರನಾದ ಆರೋನನೊಡನೆ ಮಾತಾಡು. ಅವನು ತನಗೆ ಇಷ್ಟಬಂದಾಗಲೆಲ್ಲಾ ತೆರೆಯ ಹಿಂದಿರುವ ಮಹಾ ಪವಿತ್ರಸ್ಥಳದೊಳಕ್ಕೆ ಹೋಗಬಾರದೆಂದು ಅವನಿಗೆ ಹೇಳು. ಆ ತೆರೆಯ ಹಿಂದೆ ಇರುವ ಕೋಣೆಯೊಳಗೆ ಪವಿತ್ರ ಪೆಟ್ಟಿಗೆಯು ಇರುತ್ತದೆ. ಕೃಪಾಸನವು ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿರುತ್ತದೆ. ಕೃಪಾಸನದ ಮೇಲೆ ಮೇಘದಲ್ಲಿ ನಾನು ಕಾಣಿಸಿಕೊಳ್ಳುತ್ತೇನೆ. ಆರೋನನು ಆ ಕೋಣೆಯೊಳಗೆ ಹೋದರೆ ಸಾಯುವನು!


ಪವಿತ್ರವಾದ ಪ್ರದೇಶದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಹತ್ತು ಸಾವಿರ ಮೊಳ ಅಗಲದ ಸ್ಥಳವು ಯಾಜಕರಿಗೆ ಸೇರಬೇಕು. ಅವರು ಯೆಹೋವನ ಸನ್ನಿಧಿಗೆ ಹೋಗಿ ಆತನ ಪವಿತ್ರಾಲಯದಲ್ಲಿ ಆತನ ಸೇವೆ ಮಾಡುವುದರಿಂದ ಪವಿತ್ರ ಪ್ರದೇಶದ ಈ ಭಾಗವು ಅವರಿಗೋಸ್ಕರವಾಗಿಯೂ ಅವರ ಮನೆಗಳಿಗೋಸ್ಕರವಾಗಿಯೂ ಇರಬೇಕು. ಆಲಯಕ್ಕಾಗಿ ಮೀಸಲಾದ ಐನೂರು ಮೊಳ ಚೌಕವಾದ ಜಾಗವು ಈ ಪವಿತ್ರ ಪ್ರದೇಶದೊಳಗಿರಬೇಕು. ಆ ಸ್ಥಳವು ಮಹಾ ಪವಿತ್ರವಾದ ಸ್ಥಳ. ಯಾಕೆಂದರೆ ಅತ್ಯಂತ ಪವಿತ್ರವಾದ ಆಲಯವು ಅಲ್ಲಿರುತ್ತದೆ.


ನಂತರ ಸೊಲೊಮೋನನು ದೇವಾಲಯದ ಗೋಡೆಯ ಸುತ್ತಲೂ ಸಾಲಾಗಿ ಕೊಠಡಿಗಳನ್ನು ನಿರ್ಮಿಸಿದನು. ಈ ಕೊಠಡಿಗಳನ್ನು ಒಂದರ ಮೇಲೆ ಮತ್ತೊಂದನ್ನು ಕಟ್ಟಿಸಿದನು. ಈ ಸಾಲು ಕೊಠಡಿಗಳು ಮೂರು ಅಂತಸ್ತುಗಳನ್ನು ಹೊಂದಿದ್ದವು.


ಪವಿತ್ರಗುಡಾರದ ಹಿಂಭಾಗದಲ್ಲಿರುವ ಮೂಲೆಗಳಿಗೆ ಎರಡು ಚೌಕಟ್ಟುಗಳನ್ನು ಮಾಡಿಸಬೇಕು.


ಈ ಮಹಾ ಪವಿತ್ರಸ್ಥಳದ ಎದುರಿನಲ್ಲಿ ದೇವಾಲಯದ ಮುಖ್ಯ ಭಾಗವಿದೆ. ಈ ಕೊಠಡಿಯ ಉದ್ದ ಅರವತ್ತು ಅಡಿ.


ಸೊಲೊಮೋನನು ಜನರಿಗೆ ತೀರ್ಪುನೀಡಲು ಸಿಂಹಾಸನ ಮಂದಿರವನ್ನು ಕಟ್ಟಿಸಿದನು. ಅವನು ಇದನ್ನು, “ನ್ಯಾಯಮಂದಿರ” ಎಂದೂ ಕರೆದನು. ಈ ಕೋಣೆಗೆ ನೆಲದಿಂದ ಮಾಳಿಗೆಯವರೆಗೆ ದೇವದಾರು ಮರದ ಹಲಗೆಗಳನ್ನು ಹೊದಿಸಲಾಗಿತ್ತು.


ಆಮೇಲೆ ಆ ಪುರುಷನು ಕೋಣೆಯ ಉದ್ದವನ್ನು ಅಳತೆ ಮಾಡಿದನು. ಅದು ಇಪ್ಪತ್ತು ಮೊಳ ಉದ್ದ, ಇಪ್ಪತ್ತು ಮೊಳ ಅಗಲವಾಗಿತ್ತು. “ಇದು ಮಹಾ ಪವಿತ್ರಸ್ಥಳ” ಎಂದು ಅವನು ನನಗೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು