Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:27 - ಪರಿಶುದ್ದ ಬೈಬಲ್‌

27 ಈ ಕೆರೂಬಿಗಳನ್ನು ಮಹಾಪವಿತ್ರ ಸ್ಥಳದಲ್ಲಿಟ್ಟರು. ಅವುಗಳು ಒಂದಕ್ಕೊಂದು ಸಮೀಪದಲ್ಲಿದ್ದವು. ಅವುಗಳ ರೆಕ್ಕೆಗಳು ಕೊಠಡಿಯ ಮಧ್ಯಭಾಗದಲ್ಲಿ ಒಂದನ್ನೊಂದು ತಾಕುತ್ತಿದ್ದವು. ಉಳಿದೆರಡು ರೆಕ್ಕೆಗಳು ಎರಡು ಕಡೆಗಳಲ್ಲಿದ್ದ ಗೋಡೆಗಳನ್ನು ತಾಕುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನು ಅವುಗಳನ್ನು ದೇವಾಲಯದ ಗರ್ಭಗೃಹದಲ್ಲಿಡಿಸಿದನು. ಅವುಗಳ ರೆಕ್ಕೆಗಳು ಚಾಚಿದಂತಿದ್ದುದರಿಂದ ಮೊದಲನೆಯ ಕೆರೂಬಿಯ ಒಂದು ರೆಕ್ಕೆಯು ಈಚೆಯ ಗೋಡೆಗೂ, ಎರಡನೆಯ ಕೆರೂಬಿಯ ಒಂದು ರೆಕ್ಕೆಯು ಆಚೆಯ ಗೋಡೆಗೂ ತಗುಲಿದ್ದವು. ಅವುಗಳ ಬೇರೆ ಎರಡು ರೆಕ್ಕೆಗಳು ಮನೆಯ ಮಧ್ಯದಲ್ಲಿ ಒಂದನ್ನೊಂದು ತಗುಲಿದಂತೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅವನು ಅವುಗಳನ್ನು ದೇವಾಲಯದ ಗರ್ಭಗುಡಿಯಲ್ಲಿರಿಸಿದನು. ಅವುಗಳ ರೆಕ್ಕೆಗಳು ಚಾಚಿದವುಗಳಾಗಿದ್ದುದರಿಂದ ಮೊದಲನೆಯ ಕೆರೂಬಿಯ ಒಂದು ರೆಕ್ಕೆ ಈಚೆಯ ಗೋಡೆಗೂ ಎರಡನೆಯ ಕೆರೂಬಿಯ ಒಂದು ರೆಕ್ಕೆ ಆಚೆಯ ಗೋಡೆಗೂ ತಗುಲಿದ್ದವು; ಅವುಗಳ ಬೇರೆ ಎರಡು ರೆಕ್ಕೆಗಳು ಮನೆಯ ಮಧ್ಯದಲ್ಲಿ ಒಂದನ್ನೊಂದು ತಗುಲಿ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವನು ಅವುಗಳನ್ನು ದೇವಾಲಯದ ಗರ್ಭಗೃಹದಲ್ಲಿಡಿಸಿದನು. ಅವುಗಳ ರೆಕ್ಕೆಗಳು ಚಾಚಿದವುಗಳಾಗಿದ್ದದರಿಂದ ಮೊದಲನೆಯ ಕೆರೂಬಿಯ ಒಂದು ರೆಕ್ಕೆಯು ಈಚೆಯ ಗೋಡೆಗೂ ಎರಡನೆಯ ಕೆರೂಬಿಯ ಒಂದು ರೆಕ್ಕೆಯು ಆಚೆಯ ಗೋಡೆಗೂ ತಗುಲಿದ್ದವು; ಅವುಗಳ ಬೇರೆ ಎರಡು ರೆಕ್ಕೆಗಳು ಮನೆಯ ಮಧ್ಯದಲ್ಲಿ ಒಂದನ್ನೊಂದು ತಗುಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆ ಕೆರೂಬಿಗಳನ್ನು ದೇವಾಲಯದ ಒಳ ಮನೆಯೊಳಗೆ ಇಟ್ಟನು. ಆ ಕೆರೂಬಿಗಳು ರೆಕ್ಕೆಗಳನ್ನು ಚಾಚಿರುವುದರಿಂದ ಒಂದು ರೆಕ್ಕೆಯ ಈ ಭಾಗದ ಗೋಡೆಯನ್ನೂ, ಮತ್ತೊಂದು ಕೆರೂಬಿಯ ರೆಕ್ಕೆಯು ಆ ಭಾಗದ ಗೋಡೆಯನ್ನೂ ಮುಟ್ಟಿತು. ಆಲಯದ ಮಧ್ಯದಲ್ಲಿ ಒಂದರ ರೆಕ್ಕೆ ಮತ್ತೊಂದರ ರೆಕ್ಕೆಯನ್ನು ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:27
8 ತಿಳಿವುಗಳ ಹೋಲಿಕೆ  

ಕೆರೂಬಿಗಳ ರೆಕ್ಕೆಗಳು ಆಕಾಶದ ಕಡೆಗೆ ಚಾಚಿದ್ದವು. ಅವುಗಳು ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚಿದ್ದವು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.


ಅವುಗಳ ರೆಕ್ಕೆಗಳು ಆಕಾಶದ ಕಡೆಗೆ ಚಾಚಿರಬೇಕು; ಪೆಟ್ಟಿಗೆಯನ್ನು ಮುಚ್ಚಿಕೊಂಡಿರಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿರಬೇಕು.


ಕೆರೂಬಿಗಳ ರೆಕ್ಕೆಗಳು ಒಡಂಬಡಿಕೆಯ ಪೆಟ್ಟಿಗೆಯ ಮೇಲೆ ಚಾಚಿಕೊಂಡಿದ್ದವು. ಕೆರೂಬಿಗಳು ಆ ಪೆಟ್ಟಿಗೆಯ ಮೇಲೆಯೂ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಉಪಯೋಗಿಸುತ್ತಿದ್ದ ಕಂಬಗಳ ಮೇಲೆಯೂ ನಿಂತುಕೊಂಡಿದ್ದವು.


ಕೆರೂಬಿಗಳ ರೆಕ್ಕೆಗಳು ಪವಿತ್ರ ಪೆಟ್ಟಿಗೆಯ ಮೇಲೆಲ್ಲಾ ಹರಡಿಕೊಂಡಿದ್ದವು. ಅವು ಪವಿತ್ರ ಪೆಟ್ಟಿಗೆಯನ್ನು ಮತ್ತು ಅದನ್ನು ಹೊರುವ ಕೋಲುಗಳನ್ನು ಮುಚ್ಚಿದವು.


ಕೆರೂಬಿಗಳ ಒಂದೊಂದು ರೆಕ್ಕೆಯು ಐದೈದು ಮೊಳ ಉದ್ದವಿದ್ದವು. ರೆಕ್ಕೆಗಳ ಒಟ್ಟು ಉದ್ದ ಇಪ್ಪತ್ತು ಮೊಳ. ಕೆರೂಬಿಯ ಒಂದು ರೆಕ್ಕೆಯು ಗೋಡೆಗೆ ತಾಗಿತ್ತು; ಅದರ ಇನ್ನೊಂದು ರೆಕ್ಕೆಯು ಮತ್ತೊಂದು ಕೆರೂಬಿಯ ರೆಕ್ಕೆಯನ್ನು ತಾಗಿತ್ತು.


ಈ ಎರಡು ಕೆರೂಬಿಗಳಿಗೆ ಚಿನ್ನದ ತಗಡನ್ನು ಹೊದಿಸಲಾಗಿತ್ತು.


ಆಗ ಯಾಜಕರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಅದರ ಸರಿಯಾದ ಸ್ಥಳದಲ್ಲಿ ಇಟ್ಟರು. ಇದು ಆಲಯದ ಮಹಾ ಪವಿತ್ರಸ್ಥಳವಾಗಿತ್ತು. ಒಡಂಬಡಿಕೆಯ ಪೆಟ್ಟಿಗೆಯನ್ನು ಕೆರೂಬಿಗಳ ರೆಕ್ಕೆಗಳ ಅಡಿಯಲ್ಲಿ ಇಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು