1 ಅರಸುಗಳು 6:32 - ಪರಿಶುದ್ದ ಬೈಬಲ್32 ಅವರು ಆಲೀವ್ ಮರದಿಂದ ಎರಡು ಬಾಗಿಲುಗಳನ್ನು ಮಾಡಿದರು. ಕೆಲಸಗಾರರು ಕೆರೂಬಿಗಳ, ಖರ್ಜೂರ ವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಬಾಗಿಲುಗಳ ಮೇಲೆ ಕೆತ್ತಿದರು. ನಂತರ ಬಾಗಿಲುಗಳಿಗೆ ಚಿನ್ನವನ್ನು ಹೊದಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಎಣ್ಣೇ ಮರದ ಆ ಎರಡು ಬಾಗಿಲುಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ ಬಾಗಿಲುಗಳಿಗೆ ಬಂಗಾರದ ತಗಡುಗಳನ್ನು ಹೊದಿಸಿ, ಚಿತ್ರಗಳಿದ್ದಲ್ಲಿ ಆ ತಗಡನ್ನು ಇಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಎಣ್ಣೇಮರದ ಆ ಎರಡು ಕದಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ, ಹೂವು, ಇವುಗಳ ಚಿತ್ರಗಳನ್ನು ಕೆತ್ತಿಸಿ, ಕದಗಳಿಗೆ ಬಂಗಾರದ ತಗಡನ್ನು ಹೊದಿಸಿ, ಚಿತ್ರಗಳಿದ್ದಲ್ಲಿ ಆ ತಗಡನ್ನು ಬಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಚೌಕಟ್ಟು ಪಂಚಕೋಣಗಳುಳ್ಳದಾಗಿತ್ತು. ಎಣ್ಣೇಮರದ ಆ ಎರಡು ಕದಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ, ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ ಕದಗಳಿಗೆ ಬಂಗಾರದ ತಗಡನ್ನು ಹೊದಿಸಿ ಚಿತ್ರಗಳಿದ್ದಲ್ಲಿ ಆ ತಗಡನ್ನು ಬಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಹಿಪ್ಪೇಮರದ ಆ ಜೋಡು ಬಾಗಿಲುಗಳ ಮೇಲೆ ಅವನು ಕೆರೂಬಿ, ಖರ್ಜೂರದ ವೃಕ್ಷ, ಅರಳಿದ ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ, ಆ ಕೆರೂಬಿಗಳನ್ನೂ, ಖರ್ಜೂರ ಗಿಡಗಳನ್ನೂ, ಬಂಗಾರದ ತಗಡಿನಿಂದ ಹೊದಿಸಿದನು. ಅಧ್ಯಾಯವನ್ನು ನೋಡಿ |