1 ಅರಸುಗಳು 6:36 - ಪರಿಶುದ್ದ ಬೈಬಲ್36 ನಂತರ ಅವರು ಒಳಾಂಗಣವನ್ನು ನಿರ್ಮಿಸಿದರು. ಅವರು ಒಳಾಂಗಣದ ಸುತ್ತಲೂ ಗೋಡೆಗಳನ್ನು ನಿರ್ಮಿಸಿದರು. ಪ್ರತಿಯೊಂದು ಗೋಡೆಯು ಕತ್ತರಿಸಿದ ಕಲ್ಲುಗಳ ಮೂರು ಸಾಲುಗಳನ್ನೂ ದೇವದಾರುಮರದ ತೊಲೆಗಳ ಒಂದು ಸಾಲನ್ನೂ ಹೊಂದಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ದೇವಾಲಯದ ಪ್ರಾಕಾರದಲ್ಲಿ ಮೂರು ಸಾಲು ಕಲ್ಲಿನ ಕಂಬಗಳನ್ನೂ, ಒಂದು ಸಾಲು ದೇವದಾರಿನ ಕಂಬಗಳನ್ನೂ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ದೇವಾಲಯದ ಪ್ರಾಕಾರದಲ್ಲಿ ಮೂರು ಸಾಲು ಕಲ್ಲಿನ ಕಂಬಗಳನ್ನೂ ಒಂದು ಸಾಲು ದೇವದಾರುವಿನ ಕಂಬಗಳನ್ನೂ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ದೇವಾಲಯದ ಪ್ರಾಕಾರದಲ್ಲಿ ಮೂರು ಸಾಲು ಕಲ್ಲಿನ ಕಂಬಗಳನ್ನೂ ಒಂದು ಸಾಲು ದೇವದಾರುವಿನ ಕಂಬಗಳನ್ನೂ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಅವನು ಒಳಗಿನ ಅಂಗಳವನ್ನು ಕೆತ್ತಿದ ಕಲ್ಲುಗಳಿಂದ ಮೂರು ಸಾಲುಗಳಾಗಿಯೂ ದೇವದಾರಿನ ಸ್ತಂಭಗಳಿಂದ ಒಂದು ಸಾಲಾಗಿಯೂ ಕಟ್ಟಿಸಿದನು. ಅಧ್ಯಾಯವನ್ನು ನೋಡಿ |
ಆ ಸಂದರ್ಭದಲ್ಲಿ ಯೆರೆಮೀಯನು ಹೇಳಿದ ಆ ಸಂದೇಶವನ್ನು ಬಾರೂಕನು ಓದಿದನು. ಅವನು ಯೆಹೋವನ ಆಲಯದಲ್ಲಿ ಆ ಸುರುಳಿಯನ್ನು ಓದಿದನು. ಯೆಹೋವನ ಆಲಯದಲ್ಲಿದ್ದ ಎಲ್ಲಾ ಜನರು ಕೇಳುವಂತೆ ಬಾರೂಕನು ಆ ಸುರುಳಿಯನ್ನು ಓದಿದನು. ಆ ಸುರುಳಿಯನ್ನು ಓದುವಾಗ ಬಾರೂಕನು ಮೇಲಿನ ಪ್ರಾಕಾರದಲ್ಲಿದ್ದ ಗೆಮರ್ಯನ ಕೋಣೆಯಲ್ಲಿದ್ದನು. ಆ ಕೋಣೆಯು ಪವಿತ್ರ ಆಲಯದ ಹೊಸ ಬಾಗಿಲಿನ ಹತ್ತಿರ ಇತ್ತು. ಗೆಮರ್ಯನು ಶಾಫಾನನ ಮಗನಾಗಿದ್ದನು. ಗೆಮರ್ಯನು ಯೆಹೋವನ ಆಲಯದಲ್ಲಿ ಯೆಹೂದ್ಯ ಧರ್ಮಶಾಸ್ತ್ರಜ್ಞನಾಗಿದ್ದನು.