1 ಅರಸುಗಳು 6:7 - ಪರಿಶುದ್ದ ಬೈಬಲ್7 ಈ ಗೋಡೆಗಳನ್ನು ಕಟ್ಟಲು ಕೆಲಸಗಾರರು ದೊಡ್ಡದೊಡ್ಡ ಕಲ್ಲುಗಳನ್ನು ಬಳಸಿದ್ದರು. ಕಲ್ಲುಗಣಿಯಿಂದ ಕಲ್ಲುಗಳನ್ನು ಹೊರಗೆ ತೆಗೆಯುವಾಗಲೇ ಕೆಲಸಗಾರರು ಈ ಕಲ್ಲುಗಳನ್ನು ಕೆತ್ತಿದ್ದರು. ಆದ್ದರಿಂದ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಉಪಕರಣಗಳ ಶಬ್ದವು ದೇವಾಲಯದಲ್ಲಿ ಕೇಳಿಸುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದೇವಾಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಕಟ್ಟುವ ದಿನಗಳಲ್ಲಿ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವು ಕೇಳಿಸುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ದೇವಾಲಯವನ್ನು ಕಟ್ಟುವಾಗ, ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ, ಕಟ್ಟುವ ದಿವಸಗಳಲ್ಲೆಲ್ಲಾ ಸುತ್ತಿಗೆ, ಉಳಿ, ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವೂ ಕೇಳಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ದೇವಾಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಕಟ್ಟುವ ದಿವಸಗಳಲ್ಲೆಲ್ಲಾ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವು ಕೇಳಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಆಲಯವನ್ನು ಕಟ್ಟುತ್ತಿರುವಾಗ, ಅದರಲ್ಲಿ ಸುತ್ತಿಗೆ, ಉಳಿ, ಕಬ್ಬಿಣದ ಉಪಕರಣಗಳ ಶಬ್ದವೇ ಕೇಳಲಿಲ್ಲ. ಅಧ್ಯಾಯವನ್ನು ನೋಡಿ |
ಈ ಕೊಠಡಿಗಳು ದೇವಾಲಯದ ಗೋಡೆಯನ್ನು ಸ್ಪರ್ಶಿಸಿದರೂ, ಅವುಗಳ ತೊಲೆಗಳು ಗೋಡೆಯಲ್ಲಿ ಸೇರಿಕೊಂಡಿರಲಿಲ್ಲ. ಆ ದೇವಾಲಯದ ಗೋಡೆಯ ಮೇಲ್ಭಾಗವು ತೆಳುವಾಗಿತ್ತು. ಆ ಕೊಠಡಿಗಳ ಒಂದು ಕಡೆಯ ಗೋಡೆಯು, ಅದರ ಕೆಳಭಾಗದ ಗೋಡೆಗಿಂತ ತೆಳುವಾಗಿತ್ತು. ಕೆಳ ಅಂತಸ್ತಿನ ಕೊಠಡಿಗಳ ಅಗಲ ಏಳುವರೆ ಅಡಿಗಳು. ಮಧ್ಯದ ಅಂತಸ್ತಿನ ಕೊಠಡಿಗಳ ಅಗಲ ಒಂಭತ್ತು ಅಡಿಗಳು. ಅದರ ಮೇಲಿನ ಕೊಠಡಿಗಳ ಅಗಲ ಹತ್ತೂವರೆ ಅಡಿಗಳು.