1 ಅರಸುಗಳು 7:12 - ಪರಿಶುದ್ದ ಬೈಬಲ್12 ಅರಮನೆಯ ಅಂಗಳದ, ದೇವಾಲಯದ ಅಂಗಳದ ಮತ್ತು ದೇವಾಲಯದ ಮಂಟಪದ ಸುತ್ತಲೂ ಗೋಡೆಗಳಿದ್ದವು. ಈ ಗೋಡೆಗಳನ್ನು ಮೂರು ಸಾಲು ಕಲ್ಲುಗಳಿಂದ ಮತ್ತು ಒಂದು ಸಾಲು ದೇವದಾರು ಮರಗಳಿಂದ ಕಟ್ಟಿಸಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಒಳಗಿನ ಪ್ರಾಕಾರವೆನ್ನಿಸಿಕೊಳ್ಳುವ ಯೆಹೋವನ ಆಲಯದ ಪ್ರಾಕಾರಕ್ಕೂ ಅರಮನೆಯ ಪ್ರಾಕಾರಕ್ಕೂ ಹೇಗೋ ಹಾಗೆಯೇ ಎಲ್ಲಾ ಮಂದಿರಗಳ ಸುತ್ತಲಿರುವ ದೊಡ್ಡ ಪ್ರಾಕಾರಕ್ಕೆ ಮೂರು ಸಾಲು ಕಲ್ಲಿನ ಕಂಬಗಳೂ, ಒಂದು ಸಾಲು ದೇವದಾರಿನ ಮರದ ಕಂಬಗಳೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಒಳಗಣ ಪ್ರಾಕಾರವೆನಿಸಿಕೊಳ್ಳುವ ಸರ್ವೇಶ್ವರನ ಆಲಯದ ಪ್ರಾಕಾರಕ್ಕೂ ಅರಮನೆಯ ಪ್ರಾಕಾರಕ್ಕೂ ಹೇಗೋ ಹಾಗೆಯೇ ಎಲ್ಲಾ ಮಂದಿರಗಳ ಸುತ್ತಲಿರುವ ದೊಡ್ಡ ಪ್ರಾಕಾರಕ್ಕೆ ಮೂರು ಸಾಲು ಕಲ್ಲಿನ ಕಂಬಗಳೂ ಒಂದು ಸಾಲು ದೇವದಾರಿನ ಮರದ ಕಂಬಗಳೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಒಳಗಣ ಪ್ರಾಕಾರವೆನಿಸಿಕೊಳ್ಳುವ ಯೆಹೋವನ ಆಲಯದ ಪ್ರಾಕಾರಕ್ಕೂ ಅರಮನೆಯ ಪ್ರಾಕಾರಕ್ಕೂ ಹೇಗೋ ಹಾಗೆಯೇ ಎಲ್ಲಾ ಮಂದಿರಗಳ ಸುತ್ತಲಿರುವ ದೊಡ್ಡ ಪ್ರಾಕಾರಕ್ಕೆ ಮೂರು ಸಾಲು ಕಲ್ಲಿನ ಕಂಬಗಳೂ ಒಂದು ಸಾಲು ದೇವದಾರುವಿನ ಮರದ ಕಂಬಗಳೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ದೊಡ್ಡ ಅಂಗಳವು ಸುತ್ತಲೂ ಮೂರು ತರ ಕೆತ್ತಿದ ಕಲ್ಲುಗಳೂ, ಒಂದು ತರ ದೇವದಾರು ಮರದ ತೊಲೆಗಳೂ ಆಗಿದ್ದವು. ಯೆಹೋವ ದೇವರ ಆಲಯದ ಒಳ ಅಂಗಳಕ್ಕೂ, ಆಲಯದ ಮಂಟಪಕ್ಕೂ ಹಾಗೆಯೇ ಇದ್ದವು. ಅಧ್ಯಾಯವನ್ನು ನೋಡಿ |