1 ಅರಸುಗಳು 7:14 - ಪರಿಶುದ್ದ ಬೈಬಲ್14 ಹೀರಾಮನ ತಾಯಿಯು ನಫ್ತಾಲಿ ಕುಲದವಳಾಗಿದ್ದಳು ಮತ್ತು ಇಸ್ರೇಲಿನವಳಾಗಿದ್ದಳು. ಅವನ ದಿವಂಗತ ತಂದೆಯು ತೂರಿನವನಾಗಿದ್ದನು. ಹೀರಾಮನು ಹಿತ್ತಾಳೆಯಿಂದ ವಸ್ತುಗಳನ್ನು ತಯಾರಿಸುತ್ತಿದ್ದನು. ಅವನು ಕುಶಲಕರ್ಮಿಯೂ ಅನುಭವಿಯೂ ಆದ ಕೆಲಸಗಾರನಾಗಿದ್ದನು. ರಾಜನಾದ ಸೊಲೊಮೋನನು ಹೀರಾಮನಿಗೆ ಬರಲು ಹೇಳಿದಾಗ, ಅವನು ಒಪ್ಪಿಕೊಂಡನು. ರಾಜನಾದ ಸೊಲೊಮೋನನು ಎಲ್ಲಾ ಹಿತ್ತಾಳೆಯ ಕಾರ್ಯಗಳಿಗೆ ಹೀರಾಮನನ್ನು ಮೇಲ್ವಿಚಾರಕನನ್ನಾಗಿ ನೇಮಿಸಿದನು. ಹೀರಾಮನು ಹಿತ್ತಾಳೆಯ ವಸ್ತುಗಳನ್ನು ನಿರ್ಮಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವನು ನಫ್ತಾಲಿ ಕುಲದ ಒಬ್ಬ ವಿಧವೆಯಲ್ಲಿ ತೂರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ, ತಾಮ್ರದ ಕೆಲಸದಲ್ಲಿ ನಿಪುಣನೂ, ಅನುಭವಶಾಲಿಯೂ ಆಗಿದ್ದ ಅವನು ಅರಸನ ಬಳಿಗೆ ಬಂದು ಅರಸನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ಮಾಡಿ ಮುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇವನು ನಫ್ತಾಲಿಕುಲದ ಒಬ್ಬ ವಿಧವೆಯಲ್ಲಿ ಟೈರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ ತಾಮ್ರದ ಕೆಲಸದಲ್ಲಿ ನಿಪುಣನೂ ಅನುಭವಶಾಲಿಯೂ ಆಗಿದ್ದ ಇವನು ಅರಸನ ಬಳಿಗೆ ಬಂದು, ಅವನ ಎಲ್ಲಾ ಕೆಲಸವನ್ನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇವನು ನಫ್ತಾಲಿಕುಲದ ಒಬ್ಬ ವಿಧವೆಯಲ್ಲಿ ತೂರ್‍ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ ತಾಮ್ರದ ಕೆಲಸದಲ್ಲಿ ನಿಪುಣನೂ ಅನುಭವಶಾಲಿಯೂ ಆಗಿದ್ದ ಇವನು ಅರಸನ ಬಳಿಗೆ ಬಂದು ಅವನ ಎಲ್ಲಾ ಕೆಲಸವನ್ನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು, ಅವನ ತಂದೆ ಟೈರ್ ಪಟ್ಟಣದ ಕಂಚುಗಾರನಾಗಿದ್ದನು. ಹೂರಾಮನು ಜ್ಞಾನದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಎಲ್ಲಾ ತರಹದ ಕಂಚಿನ ಕೆಲಸವನ್ನು ಮಾಡುವ ಅನುಭವಶಾಲಿಯಾಗಿದ್ದನು. ಅವನು ಅರಸನಾದ ಸೊಲೊಮೋನನ ಬಳಿಗೆ ಬಂದು, ಅವನ ಕೆಲಸವನ್ನೆಲ್ಲಾ ಮಾಡಿದನು. ಅಧ್ಯಾಯವನ್ನು ನೋಡಿ |
ಅವನ ತಾಯಿಯು ದಾನ್ ಕುಟುಂಬದವಳು, ತಂದೆಯು ತೂರ್ ಪಟ್ಟಣದವನು. ಅವನು ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ ಇವುಗಳ ಕೆಲಸಗಳಲ್ಲಿ ತುಂಬ ಚತುರನು. ಅಲ್ಲದೆ ನೀಲಿ, ಕೆಂಪು ಧೂಮ್ರವರ್ಣದ ಬಟ್ಟೆಗಳನ್ನು ಮತ್ತು ಬೆಲೆಬಾಳುವ ಲಿನಿನ್ ಬಟ್ಟೆಗಳನ್ನು ನೇಯುವುದರಲ್ಲಿ ನಿಪುಣನಾಗಿದ್ದಾನೆ. ನೀನು ಏನೇ ಹೇಳಿದರೂ ಅವನು ಮಾಡಿಕೊಡುವನು. ನಿನ್ನ ಮತ್ತು ದಾವೀದನ ಕುಶಲಕರ್ಮಿಗಳ ಜೊತೆಯಲ್ಲಿ ಅವನು ಕೆಲಸ ಮಾಡುವನು.