Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:26 - ಪರಿಶುದ್ದ ಬೈಬಲ್‌

26 ಈ ತೊಟ್ಟಿಯ ಪಾರ್ಶ್ವಗಳು ಮೂರು ಇಂಚು ದಪ್ಪವಾಗಿತ್ತು. ಈ ತೊಟ್ಟಿಯ ಕಂಠವು ಲೋಟದ ಕಂಠದಂತೆ ಅಥವಾ ಹೂಗಳ ದಳದಂತೆ ಇತ್ತು. ಈ ತೊಟ್ಟಿಯಲ್ಲಿ ಹನ್ನೊಂದು ಸಾವಿರ ಗ್ಯಾಲನ್ ನೀರನ್ನು ತುಂಬಬಹುದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಪಾತ್ರೆಯು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲದ ಆಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಎರಡು ಸಾವಿರ ಬಾನೆಗಳಷ್ಟು ನೀರು ಹಿಡಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಕೊಳದ ತಗಡು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲಾಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಸುಮಾರು ನಾಲ್ವತ್ತು ಸಾವಿರ ಲೀಟರ್ ನೀರನ್ನು ಹಿಡಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಪಾತ್ರೆಯು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲಾಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಎರಡು ಸಾವಿರ ಬತ್ ನೀರನ್ನು ಹಿಡಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅದರ ದಪ್ಪವು ಅಂಗೈ ಅಗಲದಷ್ಟಾಗಿಯೂ, ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ, ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ನಾಲ್ವತ್ತು ನಾಲ್ಕು ಸಾವಿರ ಲೀಟರ್ ನೀರನ್ನು ಹಿಡಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:26
12 ತಿಳಿವುಗಳ ಹೋಲಿಕೆ  

ಈ ತಾಮ್ರದ ಎರಕದ ಪಾತ್ರೆಯು ಮೂರು ಇಂಚು ದಪ್ಪವಾಗಿತ್ತು. ಅದರ ಅಂಚು ಕಮಲಾಕಾರದ ಬಟ್ಟಲನ್ನು ಹೋಲುತ್ತಿತ್ತು. ಅದರಲ್ಲಿ ಅರವತ್ತಾರು ಸಾವಿರ ಲೀಟರ್ ನೀರನ್ನು ತುಂಬ ಬಹುದಾಗಿತ್ತು.


ಒಂದು ಕೋರ್ ಆಲೀವ್ ಎಣ್ಣೆಗೆ 1/10 ಬತ್ ಆಲಿವ್ ಎಣ್ಣೆಯನ್ನು ಕೊಡಬೇಕು; ಹತ್ತು ಬತ್ ಅಂದರೆ ಒಂದು ಹೋಮೆರ್, ಹತ್ತು ಬತ್ ಅಂದರೆ ಒಂದು ಕೋರ್ ಎಂಬುದನ್ನು ಜ್ಞಾಪಕದಲ್ಲಿಡಿರಿ.


ಪ್ರತಿಯೊಂದು ಕಂಚಿನ ಕಂಬ ಇಪ್ಪತ್ತೇಳು ಅಡಿ ಎತ್ತರವಾಗಿದ್ದು ಅದರ ಸುತ್ತಳತೆ ಹದಿನೆಂಟು ಅಡಿ ಇತ್ತು. ಪ್ರತಿಯೊಂದು ಕಂಬ ಟೊಳ್ಳಾಗಿದ್ದು ಅದರ ತಗಡು ನಾಲ್ಕು ಅಂಗುಲ ದಪ್ಪವಾಗಿತ್ತು.


ಹೀರಾಮನು ಹತ್ತು ಗಂಗಾಳಗಳನ್ನು ಮಾಡಿದನು. ಹತ್ತು ಬಂಡಿಗಳಲ್ಲಿ ಒಂದೊಂದು ಬಂಡಿಗೆ ಒಂದೊಂದು ಗಂಗಾಳವಿತ್ತು. ಪ್ರತಿಯೊಂದು ಗಂಗಾಳದ ಅಗಲವು ಆರು ಅಡಿಗಳು. ಪ್ರತಿ ಗಂಗಾಳವು ಇನ್ನೂರ ಮೂವತ್ತು ಗ್ಯಾಲನ್ ನೀರನ್ನು ಹಿಡಿಯುತ್ತಿತ್ತು.


ಕಂಬಗಳ ಮೇಲಿದ್ದ ಏಳುವರೆ ಅಡಿ ಎತ್ತರದ ಈ ಬೋದಿಗೆಗಳು ಹೂಗಳಂತೆ ಕಾಣುತ್ತಿದ್ದವು.


ಅವರು ಕೆರೂಬಿಗಳ, ಖರ್ಜೂರವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಬಾಗಿಲುಗಳ ಮೇಲೆ ಕೆತ್ತಿದ್ದರು. ಅವರು ಅವುಗಳಿಗೆ ಚಿನ್ನವನ್ನು ಹೊದಿಸಿದರು.


ಅವರು ಆಲೀವ್ ಮರದಿಂದ ಎರಡು ಬಾಗಿಲುಗಳನ್ನು ಮಾಡಿದರು. ಕೆಲಸಗಾರರು ಕೆರೂಬಿಗಳ, ಖರ್ಜೂರ ವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಬಾಗಿಲುಗಳ ಮೇಲೆ ಕೆತ್ತಿದರು. ನಂತರ ಬಾಗಿಲುಗಳಿಗೆ ಚಿನ್ನವನ್ನು ಹೊದಿಸಿದರು.


ಈ ಕೊಠಡಿಯ ಗೋಡೆಗಳಿಗೆ ದೇವದಾರು ಮರದ ಹೊದಿಕೆಗಳನ್ನು ಹೊದಿಸಲಾಗಿದ್ದು ಈ ಗೋಡೆಗಳಲ್ಲಿದ್ದ ಯಾವುದೇ ಕಲ್ಲುಗಳು ಕಂಡುಬರುತ್ತಿರಲಿಲ್ಲ. ಈ ದೇವದಾರು ಮರದ ಹಲಗೆಗಳ ಮೇಲೆ ಹೂಗಳ ಮತ್ತು ಬಳ್ಳಿಗಳ ಚಿತ್ರಗಳನ್ನು ಕೆತ್ತಲಾಗಿತ್ತು.


ಬಳಿಕ ಮೇಜಿನ ಸುತ್ತಲೂ ಮೂರು ಇಂಚು ಅಗಲದ ಚೌಕಟ್ಟನ್ನು ಮಾಡಿಸಿ ಅದಕ್ಕೂ ಚಿನ್ನದ ಗೋಟು ಕಟ್ಟಿಸಬೇಕು.


ಈ ತೊಟ್ಟಿಯು ಹನ್ನೆರಡು ಹಿತ್ತಾಳೆಯ ಹೋರಿಗಳ ಬೆನ್ನಿನ ಮೇಲಿತ್ತು. ಈ ಹನ್ನೆರಡು ಹೋರಿಗಳೂ ತೊಟ್ಟಿಗೆ ದೂರವಾಗಿದ್ದ ಹೊರಭಾಗವನ್ನು ನೋಡುತ್ತಿರುವಂತೆ ಕಾಣುತ್ತಿದ್ದವು. ಮೂರು ಉತ್ತರದ ಕಡೆಗೂ ಮೂರು ಪೂರ್ವದ ಕಡೆಗೂ ಮೂರು ದಕ್ಷಿಣದ ಕಡೆಗೂ ಮೂರು ಪಶ್ಚಿಮದ ಕಡೆಗೂ ನೋಡುತ್ತಿದ್ದವು.


ಹೀರಾಮನು ಹತ್ತು ಬಂಡಿಗಳನ್ನು ಮಾಡಿದನು. ಪ್ರತಿಯೊಂದರ ಉದ್ದ ಆರು ಅಡಿಗಳು; ಅಗಲ ಆರು ಅಡಿಗಳು; ಮತ್ತು ಎತ್ತರ ನಾಲ್ಕುವರೆ ಅಡಿಗಳು.


ಏಫಾ ಮತ್ತು ಬತ್ ಇವೆರಡು ಒಂದೇ ಅಳತೆಯುಳ್ಳವುಗಳಾಗಿರಬೇಕು. ಬತ್ ಮತ್ತು ಏಫಾ ಇವೆರಡೂ ಹೋಮೆರಿನ ಹತ್ತನೇ ಒಂದು ಪಾಲು. ಆ ಅಳತೆಗಳು ಹೋಮೆರಿಗೆ ಹೊಂದಿಕೊಂಡಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು