Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:27 - ಪರಿಶುದ್ದ ಬೈಬಲ್‌

27 ಹೀರಾಮನು ಹತ್ತು ಬಂಡಿಗಳನ್ನು ಮಾಡಿದನು. ಪ್ರತಿಯೊಂದರ ಉದ್ದ ಆರು ಅಡಿಗಳು; ಅಗಲ ಆರು ಅಡಿಗಳು; ಮತ್ತು ಎತ್ತರ ನಾಲ್ಕುವರೆ ಅಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇದಲ್ಲದೆ ಅವನು ಹತ್ತು ತಾಮ್ರದ ಪೀಠಗಳನ್ನು ಮಾಡಿದನು. ಪ್ರತಿಯೊಂದು ನಾಲ್ಕು ಮೊಳ ಉದ್ದ, ನಾಲ್ಕು ಮೊಳ ಅಗಲ, ಮೂರು ಮೊಳ ಎತ್ತರ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇದಲ್ಲದೆ, ಹೀರಾಮನು ಹತ್ತು ಕಂಚಿನ ಪೀಠಗಳನ್ನು ಮಾಡಿದನು. ಪ್ರತಿಯೊಂದು 1:8 ಮೀಟರ್ ಉದ್ದ, 1:8 ಮೀಟರ್ ಅಗಲ, 1:3 ಮೀಟರ್ ಎತ್ತರ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇದಲ್ಲದೆ ಅವನು ಹತ್ತು ತಾಮ್ರದ ಪೀಠಗಳನ್ನು ಮಾಡಿದನು. ಪ್ರತಿಯೊಂದು ನಾಲ್ಕು ಮೊಳ ಉದ್ದ, ನಾಲ್ಕು ಮೊಳ ಅಗಲ, ಮೂರು ಮೊಳ ಎತ್ತರ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವನು ಹತ್ತು ಕಂಚಿನ ಚಲಿಸುವ ಪೀಠಗಳನ್ನು ಮಾಡಿದನು. ಒಂದೊಂದು ಪೀಠವು 1.8 ಮೀಟರ್ ಉದ್ದವೂ, 1.8 ಮೀಟರ್ ಅಗಲವೂ, 1.4 ಮೀಟರ್ ಎತ್ತರವೂ ಆಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:27
10 ತಿಳಿವುಗಳ ಹೋಲಿಕೆ  

ಹೂರಾಮನು ಪೀಠಗಳನ್ನೂ ಅವುಗಳ ಮೇಲೆ ಬೋಗುಣಿಗಳನ್ನೂ ಮಾಡಿದನು.


ಬಾಬಿಲೋನ್ ಸೈನಿಕರು ದೇವಾಲಯದಲ್ಲಿದ್ದ ತಾಮ್ರದ ಸ್ತಂಭಗಳನ್ನು ಚೂರುಚೂರು ಮಾಡಿದರು. ಅವರು ಯೆಹೋವನ ಆಲಯದಲ್ಲಿದ್ದ ತಾಮ್ರದ ದೊಡ್ಡ ತೊಟ್ಟಿಯನ್ನು ಮತ್ತು ತಾಮ್ರದ ಬಂಡಿಯನ್ನು ಚೂರುಚೂರಾಗಿ ಒಡೆದುಹಾಕಿದರು. ನಂತರ ಬಾಬಿಲೋನ್ ಸೈನಿಕರು ತಾಮ್ರದ ಚೂರುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಬಾಬಿಲೋನಿನ ಸೈನಿಕರು ಪವಿತ್ರಾಲಯದ ಕಂಚಿನ ಕಂಬಗಳನ್ನು ಮುರಿದರು. ಅವರು ಯೆಹೋವನ ಆಲಯದಲ್ಲಿದ್ದ ಪೀಠಗಳನ್ನು ಮತ್ತು ಕಂಚಿನ ಸರೋವರಗಳನ್ನು ಸಹ ಮುರಿದುಬಿಟ್ಟರು. ಅವರು ಎಲ್ಲಾ ಕಂಚಿನ ವಸ್ತುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಅದನ್ನು ಹೊತ್ತುಕೊಂಡಿರುವ ಹನ್ನೆರಡು ಕಂಚಿನ ಹೋರಿಗಳು ಮತ್ತು ಚಲಿಸಬಲ್ಲ ಅಡ್ಡಣಿಗಳು ಬಹಳ ಭಾರವಾಗಿದ್ದವು. ರಾಜನಾದ, ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಆ ವಸ್ತುಗಳನ್ನು ಮಾಡಿಸಿದ್ದನು. ಆ ವಸ್ತುಗಳಿಗಾಗಿ ಉಪಯೋಗಿಸಲಾದ ಕಂಚು ತೂಕ ಮಾಡಲಾರದಷ್ಟು ಭಾರವಾಗಿತ್ತು.


ಅವನು ತೆಗೆದುಕೊಂಡು ಹೋದ ವಸ್ತುಗಳ ಪಟ್ಟಿಯು ಹೀಗಿದೆ: ಎರಡು ತಾಮ್ರ ಕಂಬಗಳು, ಒಂದು ತೊಟ್ಟಿ ಮತ್ತು ದೇವಾಲಯಕ್ಕೆ ಸೊಲೊಮೋನನು ನಿರ್ಮಿಸಿದ್ದ ಬಂಡಿಗಳು. ಈ ವಸ್ತುಗಳ ತಾಮ್ರವು ತೂಕ ಮಾಡಲಾರದಷ್ಟು ಅಧಿಕವಾಗಿತ್ತು.


ಹೀರಾಮನು ಹತ್ತು ಗಂಗಾಳಗಳನ್ನು ಮಾಡಿದನು. ಹತ್ತು ಬಂಡಿಗಳಲ್ಲಿ ಒಂದೊಂದು ಬಂಡಿಗೆ ಒಂದೊಂದು ಗಂಗಾಳವಿತ್ತು. ಪ್ರತಿಯೊಂದು ಗಂಗಾಳದ ಅಗಲವು ಆರು ಅಡಿಗಳು. ಪ್ರತಿ ಗಂಗಾಳವು ಇನ್ನೂರ ಮೂವತ್ತು ಗ್ಯಾಲನ್ ನೀರನ್ನು ಹಿಡಿಯುತ್ತಿತ್ತು.


ಈ ತೊಟ್ಟಿಯ ಪಾರ್ಶ್ವಗಳು ಮೂರು ಇಂಚು ದಪ್ಪವಾಗಿತ್ತು. ಈ ತೊಟ್ಟಿಯ ಕಂಠವು ಲೋಟದ ಕಂಠದಂತೆ ಅಥವಾ ಹೂಗಳ ದಳದಂತೆ ಇತ್ತು. ಈ ತೊಟ್ಟಿಯಲ್ಲಿ ಹನ್ನೊಂದು ಸಾವಿರ ಗ್ಯಾಲನ್ ನೀರನ್ನು ತುಂಬಬಹುದಾಗಿತ್ತು.


ಈ ಬಂಡಿಗಳನ್ನು ಚೌಕಾಕಾರದ ಚೌಕಟ್ಟಿನ ಅಂಕಣದಿಂದ ಮಾಡಿದ್ದನು.


ನಂತರ ರಾಜನಾದ ಅಹಾಜನು ಪೀಠಗಳ ಪಟ್ಟಿಗಳನ್ನು ಕತ್ತರಿಸಿದನು. ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು; ಸಮುದ್ರವೆಂಬ ತೊಟ್ಟಿಯನ್ನು ತಾಮ್ರದ ಹೋರಿಗಳಿಂದ ಕೆಳಗಿಳಿಸಿ ಕಲ್ಲುಕಟ್ಟೆಯ ಮೇಲಿಟ್ಟನು.


“ಸರ್ವಶಕ್ತನಾದ ಯೆಹೋವನು ಜೆರುಸಲೇಮಿನಲ್ಲಿ ಇನ್ನೂ ಉಳಿದ ವಸ್ತುಗಳ ಬಗ್ಗೆ ಹೀಗೆ ಹೇಳುತ್ತಾನೆ. ಯೆಹೋವನ ಆಲಯದಲ್ಲಿ ಕಂಬಗಳಿವೆ, ಕಂಚಿನ ಸಾಗರವಿದೆ, ಪೀಠಗಳಿವೆ ಮತ್ತು ಇತರ ವಸ್ತುಗಳಿವೆ. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಆ ವಸ್ತುಗಳನ್ನು ಜೆರುಸಲೇಮಿನಲ್ಲಿಯೇ ಬಿಟ್ಟುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು