1 ಅರಸುಗಳು 7:31 - ಪರಿಶುದ್ದ ಬೈಬಲ್31 ಈ ಪಾತ್ರೆಯ ಮೇಲೆ ಒಂದು ಚೌಕಟ್ಟಿತ್ತು. ಅದು ಪಾತ್ರೆಯ ಮೇಲೆ ಹದಿನೆಂಟು ಇಂಚು ಎತ್ತರವಾಗಿತ್ತು. ಆ ಪಾತ್ರೆಯ ಬಾಯಿಯು ಇಪ್ಪತ್ತೇಳು ಇಂಚು ವ್ಯಾಸದೊಂದಿಗೆ ವೃತ್ತಾಕಾರವಾಗಿತ್ತು. ಆ ಚೌಕಟ್ಟಿನ ಹಿತ್ತಾಳೆಯ ಮೇಲೆ ಚಿತ್ರ ವಿನ್ಯಾಸಗಳನ್ನು ಬಿಡಿಸಲಾಗಿತ್ತು. ಈ ಚೌಕಟ್ಟು ವೃತ್ತಾಕಾರವಾಗಿರದೆ ಚೌಕಾಕಾರವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಗಂಗಾಳವನ್ನು ಇಡುವುದಕ್ಕೋಸ್ಕರ ಪೀಠದ ಮೇಲಣ ಭಾಗದಲ್ಲಿ ಒಂದು ಅಥವಾ ಒಂದುವರೆ ಮೊಳ ಎತ್ತರವಾದ ಬಾಯಿತ್ತು. ಚಕ್ರಾಕಾರವಾಗಿರುವ ಈ ಬಾಯಿಯು ಒಂದುವರೆ ಮೊಳ ಅಗಲವಾಗಿತ್ತು. ಇದರ ಮೇಲೆಯೂ ಚಿತ್ರಗಳಿದ್ದವು. ಇದಕ್ಕೆ ಆಧಾರವಾದ ಅಡ್ಡಪಟ್ಟಿಗಳು ಚಕ್ರಾಕಾರವಾಗಿರದೆ ಚೌಕಾಕಾರವಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಈ ಬಾನೆಯನ್ನು ಇಡುವುದಕ್ಕಾಗಿ ಪೀಠದ ಮೇಲಿನ ಭಾಗದಲ್ಲಿ ಒಂದು ಅಥವಾ ಒಂದುವರೆ ಮೊಳ ಎತ್ತರವಾದ ಬಾಯಿ ಇತ್ತು. ಚಕ್ರಾಕಾರವಾಗಿದ್ದ ಈ ಬಾಯಿಯು ಒಂದೂವರೆ ಮೊಳ ಅಗಲವಾಗಿತ್ತು. ಇದರ ಮೇಲೆಯೂ ಚಿತ್ರಗಳಿದ್ದವು. ಇದಕ್ಕೆ ಆಧಾರವಾದ ಅಡ್ಡಪಟ್ಟಿಗಳು ಚಕ್ರಾಕಾರವಾಗಿರದೆ ಚತುಷ್ಕೋನದವುಗಳಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಗಂಗಾಳವನ್ನು ಇಡುವದಕ್ಕೋಸ್ಕರ ಪೀಠದ ಮೇಲಿನ ಭಾಗದಲ್ಲಿ ಒಂದು ಅಥವಾ ಒಂದುವರೆ ಮೊಳ ಎತ್ತರವಾದ ಬಾಯಿತ್ತು. ಚಕ್ರಾಕಾರವಾಗಿರುವ ಈ ಬಾಯಿಯು ಒಂದುವರೆ ಮೊಳ ಅಗಲವಾಗಿತ್ತು. ಇದರ ಮೇಲೆಯೂ ಚಿತ್ರಗಳಿದ್ದವು. ಇದಕ್ಕೆ ಆಧಾರವಾದ ಅಡ್ಡಪಟ್ಟಿಗಳು ಚಕ್ರಾಕಾರವಾಗಿರದೆ ಚತುಷ್ಕೋಣದವುಗಳಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅಂಚಿಗೆ ಒಳಗಾದ ಅದರ ಬಾಯಿ ಮೇಲೆ ಒಂದು ಮೊಳ ಉದ್ದವಾಗಿತ್ತು. ಚಕ್ರಾಕಾರವಾಗಿದ್ದ ಈ ಬಾಯಿ ಒಂದೂವರೆ ಮೊಳ ಅಗಲವಾಗಿತ್ತು. ಅದರ ಬಾಯಿಯ ಮೇಲೆ ಚಿತ್ರಗಳಿದ್ದವು. ಅದರ ಚಿತ್ರಗಳು ದುಂಡಾಗಿರದೆ ಚೌಕವಾಗಿದ್ದವು. ಅಧ್ಯಾಯವನ್ನು ನೋಡಿ |