Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:36 - ಪರಿಶುದ್ದ ಬೈಬಲ್‌

36 ಬಂಡಿಯ ಪಾರ್ಶ್ವಗಳ ಮೇಲೆ ಮತ್ತು ಚೌಕಟ್ಟುಗಳ ಮೇಲೆ ಕೆರೂಬಿಗಳ, ಸಿಂಹಗಳ, ಖರ್ಜೂರ ಗಿಡಗಳ ಚಿತ್ರಗಳನ್ನು ಹಿತ್ತಾಳೆಯಲ್ಲಿ ಕೆತ್ತಿದ್ದರು. ಈ ಚಿತ್ರಗಳನ್ನು ಬಂಡಿಯಲ್ಲಿ ಅವಕಾಶವಿದ್ದ ಭಾಗಗಳಲ್ಲೆಲ್ಲಾ ಕೆತ್ತಿದ್ದರು. ಬಂಡಿಯ ಸುತ್ತಲಿನ ಚೌಕಟ್ಟಿನ ಮೇಲೆ ಹೂಗಳನ್ನು ಕೆತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅಡ್ಡಪಟ್ಟಿಗಳಿಗೂ ಹಿಡಿಗಳ ಹೊರಮೈಗೂ ಸ್ಥಳವಿದ್ದ ಕಡೆಗೆ ಕೆರೂಬಿ, ಸಿಂಹ, ಖರ್ಜೂರವೃಕ್ಷ ಇವುಗಳ ಚಿತ್ರಗಳನ್ನೂ ಈ ಚಿತ್ರಗಳ ಸುತ್ತಲೂ ತೋರಣ ಚಿತ್ರಗಳನ್ನೂ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಆ ಅಡ್ಡಪಟ್ಟಿಗಳಿಗೂ ಹಿಡಿಗಳ ಹೊರಮೈಗೂ ಸ್ಥಳವಿದ್ದ ಪ್ರಕಾರ ಕೆರೂಬಿ, ಸಿಂಹ, ಖರ್ಜೂರವೃಕ್ಷ, ಇವುಗಳ ಚಿತ್ರಗಳನ್ನೂ ಈ ಚಿತ್ರಗಳ ಸುತ್ತಲೂ ತೋರಣಚಿತ್ರಗಳನ್ನೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಅಡ್ಡಪಟ್ಟಿಗಳಿಗೂ ಹಿಡಿಗಳ ಹೊರ ಮೈಗೂ ಸ್ಥಳವಿದ್ದ ಪ್ರಕಾರ ಕೆರೂಬಿ, ಸಿಂಹ, ಖರ್ಜೂರವೃಕ್ಷ ಇವುಗಳ ಚಿತ್ರಗಳನ್ನೂ ಈ ಚಿತ್ರಗಳ ಸುತ್ತಲೂ ತೋರಣಚಿತ್ರಗಳನ್ನೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಅದರದರ ಪ್ರಮಾಣದ ಪ್ರಕಾರ ಹಲಗೆಗಳ ಕೈಹಿಡಿಗಳ ಮೇಲೆಯೂ ಅಂಚುಗಳ ಮೇಲೆಯೂ ಕೆರೂಬಿ, ಸಿಂಹ ಖರ್ಜೂರ ವೃಕ್ಷಗಳನ್ನು ಚಿತ್ರಿಸಿದನು. ಸುತ್ತಲೂ ಅದರದರ ಪ್ರಮಾಣದ ಪ್ರಕಾರ ಪುಷ್ಪ ತೋರಣಗಳನ್ನು ಚಿತ್ರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:36
11 ತಿಳಿವುಗಳ ಹೋಲಿಕೆ  

ಅಂಕಣದ ಮತ್ತು ಚೌಕಟ್ಟಿನ ಮೇಲೆ ಹಿತ್ತಾಳೆಯ ಸಿಂಹಗಳು, ಹೋರಿಗಳು ಮತ್ತು ಕೆರೂಬಿಗಳಿದ್ದವು. ಸಿಂಹಗಳ, ಹೋರಿಗಳ ಮೇಲ್ಭಾಗದಲ್ಲಿ ಮತ್ತು ಕೆಳಭಾಗದಲ್ಲಿ ಹೂವಿನಾಕಾರದಲ್ಲಿ ಹಿತ್ತಾಳೆಯ ಮೇಲೆ ಕೆತ್ತಿದ್ದನು.


ಕೈಸಾಲೆಯು ಹೊರ ಪ್ರಾಕಾರದಲ್ಲಿಯ ದ್ವಾರದ ಕೊನೆಯಲ್ಲಿತ್ತು. ಖರ್ಜೂರ ವೃಕ್ಷದ ಚಿತ್ರವು ಗೋಡೆಗಳ ಎರಡೂ ಕಡೆಯ ಮೇಲೆ ಕೆತ್ತಲ್ಪಟ್ಟಿತ್ತು. ದ್ವಾರವನ್ನು ಮುಟ್ಟಲು ಎಂಟು ಮೆಟ್ಟಿಲುಗಳಿದ್ದವು.


ಹೊರಗಿನ ಪ್ರಾಕಾರದ ಪಕ್ಕದಲ್ಲಿರುವ ಪ್ರವೇಶ ದ್ವಾರದ ಕೊನೆಯಲ್ಲಿ ಕೈಸಾಲೆಯಿತ್ತು. ಖರ್ಜೂರ ವೃಕ್ಷದ ಕೆತ್ತನೆ ಕೆಲಸವು ಅದರ ಗೋಡೆಯ ಮೇಲಿತ್ತು. ಆ ಪ್ರವೇಶ ದ್ವಾರವನ್ನು ಹತ್ತಲು ಎಂಟು ಮೆಟ್ಟಿಲುಗಳಿದ್ದವು.


ಅವರು ಕೆರೂಬಿಗಳ, ಖರ್ಜೂರವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಬಾಗಿಲುಗಳ ಮೇಲೆ ಕೆತ್ತಿದ್ದರು. ಅವರು ಅವುಗಳಿಗೆ ಚಿನ್ನವನ್ನು ಹೊದಿಸಿದರು.


ಅವರು ಆಲೀವ್ ಮರದಿಂದ ಎರಡು ಬಾಗಿಲುಗಳನ್ನು ಮಾಡಿದರು. ಕೆಲಸಗಾರರು ಕೆರೂಬಿಗಳ, ಖರ್ಜೂರ ವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಬಾಗಿಲುಗಳ ಮೇಲೆ ಕೆತ್ತಿದರು. ನಂತರ ಬಾಗಿಲುಗಳಿಗೆ ಚಿನ್ನವನ್ನು ಹೊದಿಸಿದರು.


ಮುಖ್ಯಕೊಠಡಿಯ ಮತ್ತು ಒಳಕೋಣೆಯ ಗೋಡೆಗಳ ಮೇಲೆ ಕೆರೂಬಿಗಳ, ಖರ್ಜೂರ ವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಕೆತ್ತಿದ್ದರು.


ಪ್ರತಿಯೊಂದು ಬಂಡಿಯ ಮೇಲ್ಗಡೆ ಸುತ್ತಲೂ ಒಂದು ಹಿತ್ತಾಳೆಯ ಪಟ್ಟಿಯಿತ್ತು. ಅದನ್ನು ಬಂಡಿಯೊಂದಿಗೆ ಅಖಂಡವಾಗಿ ಮಾಡಿದ್ದರು.


ಹೀರಾಮನು ಹತ್ತು ಬಂಡಿಗಳನ್ನು ಮಾಡಿದನು. ಅವುಗಳೆಲ್ಲ ಒಂದೇ ತೆರನಾಗಿದ್ದವು. ಪ್ರತಿಯೊಂದನ್ನು ಹಿತ್ತಾಳೆಯಿಂದ ಮಾಡಿದ್ದನು. ಹಿತ್ತಾಳೆಯನ್ನು ಕರಗಿಸಿ, ಅಚ್ಚಿನಲ್ಲಿ ಎರಕ ಹೊಯ್ದಿದ್ದನು. ಆದ್ದರಿಂದ ಬಂಡಿಗಳ ಗಾತ್ರ ಮತ್ತು ಆಕಾರವು ಒಂದೇ ಆಗಿತ್ತು.


ಪ್ರತೀ ಕೆರೂಬಿದೂತನಿಗೆ ನಾಲ್ಕು ಮುಖಗಳಿದ್ದವು. ಮೊದಲನೆಯ ಮುಖವು ಕೆರೂಬಿಯ ಮುಖ, ಎರಡನೆಯದು ಮನುಷ್ಯನ ಮುಖ, ಮೂರನೆಯ ಸಿಂಹದ ಮುಖ ಮತ್ತು ನಾಲ್ಕನೆಯ ಗರುಡನ ಮುಖ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು