1 ಅರಸುಗಳು 7:7 - ಪರಿಶುದ್ದ ಬೈಬಲ್7 ಸೊಲೊಮೋನನು ಜನರಿಗೆ ತೀರ್ಪುನೀಡಲು ಸಿಂಹಾಸನ ಮಂದಿರವನ್ನು ಕಟ್ಟಿಸಿದನು. ಅವನು ಇದನ್ನು, “ನ್ಯಾಯಮಂದಿರ” ಎಂದೂ ಕರೆದನು. ಈ ಕೋಣೆಗೆ ನೆಲದಿಂದ ಮಾಳಿಗೆಯವರೆಗೆ ದೇವದಾರು ಮರದ ಹಲಗೆಗಳನ್ನು ಹೊದಿಸಲಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇದಲ್ಲದೆ ಅವನು ಸಿಂಹಾಸನ ಮಂದಿರವನ್ನು ಕಟ್ಟಿಸಿದನು. ಅವನು ಅಲ್ಲಿ ನ್ಯಾಯತೀರ್ಮಾನ ಮಾಡುತ್ತಿದ್ದರಿಂದ ಅದಕ್ಕೆ ನ್ಯಾಯಮಂದಿರವೆಂತಲೂ ಹೆಸರಾಯಿತು. ಇದರ ಎಲ್ಲಾ ಗೋಡೆಗಳೂ ನೆಲದಿಂದ ಮಾಳಿಗೆಯ ವರೆಗೆ ದೇವದಾರು ಮರದ ಹಲಿಗೆಗಳಿಂದ ಹೊದಿಸಲ್ಪಟ್ಟಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇದಲ್ಲದೆ ಅವನು ಸಿಂಹಾಸನ ಮಂದಿರವನ್ನು ಕಟ್ಟಿಸಿದನು. ಅವನು ಅಲ್ಲಿ ನ್ಯಾಯತೀರಿಸುತ್ತಿದ್ದುದರಿಂದ ಅದಕ್ಕೆ ನ್ಯಾಯಮಂದಿರ ಎಂದು ಹೆಸರಾಯಿತು. ಇದರ ಎಲ್ಲಾ ಗೋಡೆಗಳು ನೆಲದಿಂದ ಮಾಳಿಗೆಯವರೆಗೆ ದೇವದಾರುವಿನ ಹಲಗೆಗಳಿಂದ ಹೊದಿಸಲಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇದಲ್ಲದೆ ಅವನು ಸಿಂಹಾಸನ ಮಂದಿರವನ್ನು ಕಟ್ಟಿಸಿದನು. ಅವನು ಅಲ್ಲಿ ನ್ಯಾಯತೀರಿಸುತ್ತಿದ್ದದರಿಂದ ಅದಕ್ಕೆ ನ್ಯಾಯಮಂದಿರವೆಂತಲೂ ಹೆಸರಾಯಿತು. ಇದರ ಎಲ್ಲಾ ಗೋಡೆಗಳು ನೆಲದಿಂದ ಮಾಳಿಗೆಯವರೆಗೆ ದೇವದಾರುವಿನ ಹಲಿಗೆಗಳಿಂದ ಹೊದಿಸಲ್ಪಟ್ಟಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅಲ್ಲಿ ನ್ಯಾಯತೀರಿಸಲು ನ್ಯಾಯಾಸನದ ಮಂಟಪವನ್ನು ಮಾಡಿ, ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ದೇವದಾರುಗಳನ್ನು ಹೊದಿಸಿದನು. ಅಧ್ಯಾಯವನ್ನು ನೋಡಿ |