1 ಅರಸುಗಳು 8:1 - ಪರಿಶುದ್ದ ಬೈಬಲ್1 ರಾಜನಾದ ಸೊಲೊಮೋನನು ಇಸ್ರೇಲಿನ ಹಿರಿಯರೆಲ್ಲರಿಗೆ, ಕುಲಗಳ ಮುಖ್ಯಸ್ಥರಿಗೆ ಮತ್ತು ಇಸ್ರೇಲಿನ ಕುಟುಂಬ ಪ್ರಧಾನರಿಗೆ ಜೆರುಸಲೇಮಿನಲ್ಲಿದ್ದ ತನ್ನ ಬಳಿಗೆ ಬರಬೇಕೆಂದು ತಿಳಿಸಿದನು. ಒಡಂಬಡಿಕೆಯ ಪೆಟ್ಟಿಗೆಯನ್ನು ದಾವೀದ ನಗರದಿಂದ ಆಲಯಕ್ಕೆ ತರುವಾಗ ಅವರು ಸಹ ತನ್ನೊಂದಿಗಿರಬೇಕೆಂಬುದು ಸೊಲೊಮೋನನ ಅಪೇಕ್ಷೆಯಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅನಂತರ ಅರಸನಾದ ಸೊಲೊಮೋನನು ದಾವೀದ ನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರುವುದಕ್ಕಾಗಿ ಇಸ್ರಾಯೇಲರ ಹಿರಿಯರೂ ಕುಲಾಧಿಪತಿಗಳು ಇವರೇ ಮೊದಲಾದ ಇಸ್ರಾಯೇಲ್ ಪ್ರಧಾನಪುರುಷರನ್ನು ಯೆರೂಸಲೇಮಿಗೆ ತನ್ನ ಹತ್ತಿರಕ್ಕೆ ಕರೆಯಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ದಾವೀದನಗರವಾದ ಸಿಯೋನಿನಿಂದ ದೇವಾಲಯಕ್ಕೆ ತರುವುದಕ್ಕಾಗಿ, ಇಸ್ರಯೇಲರ ಹಿರಿಯರು, ಕುಲಗಳ ನಾಯಕರು, ಇವರೇ ಮೊದಲಾದ ಎಲ್ಲ ಇಸ್ರಯೇಲ್ ಪ್ರಮುಖ ವ್ಯಕ್ತಿಗಳು ಜೆರುಸಲೇಮಿಗೆ, ತನ್ನ ಆಸ್ಥಾನಕ್ಕೆ, ಬರಬೇಕೆಂದು ಅರಸ ಸೊಲೊಮೋನನು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅನಂತರ ಅರಸನಾದ ಸೊಲೊಮೋನನು ದಾವೀದನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಮೇಲೆ ತರುವದಕ್ಕಾಗಿ ಇಸ್ರಾಯೇಲ್ಯರ ಹಿರಿಯರು ಕುಲಾಧಿಪತಿಗಳು ಇವರೇ ಮೊದಲಾದ ಎಲ್ಲಾ ಇಸ್ರಾಯೇಲ್ ಪ್ರಧಾನ ಪುರುಷರನ್ನು ಯೆರೂಸಲೇವಿುಗೆ ತನ್ನ ಹತ್ತಿರಕ್ಕೆ ಕರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ, ಅರಸನಾದ ಸೊಲೊಮೋನನು ಇಸ್ರಾಯೇಲರಲ್ಲಿ ಶ್ರೇಷ್ಠರಾಗಿರುವ ಪಿತೃಗಳಾದ ಇಸ್ರಾಯೇಲಿನ ಹಿರಿಯರನ್ನೂ, ಗೋತ್ರಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು. ಅಧ್ಯಾಯವನ್ನು ನೋಡಿ |
ದಾವೀದನು ತನ್ನ ರಾಜ್ಯದಲ್ಲಿದ್ದ ಎಲ್ಲಾ ನಾಯಕರನ್ನು ಅಂದರೆ ಕುಲಪ್ರಧಾನರನ್ನು, ಪ್ರಧಾನಸೇನಾಧಿಪತಿಗಳನ್ನು, ಮಹಾಸೇನಾಧಿಪತಿಗಳನ್ನು ಮತ್ತು ಸೇನಾಧಿಪತಿಗಳನ್ನು, ರಾಜನಿಗೂ ಅವನ ಗಂಡುಮಕ್ಕಳಿಗೂ ಸೇರಿದ ಆಸ್ತಿಯನ್ನು ಮತ್ತು ಪಶುಗಳನ್ನು ನೋಡಿಕೊಳ್ಳುತ್ತಿದ್ದ ಅಧಿಕಾರಿಗಳನ್ನು; ರಾಜನ ಪ್ರಮುಖ ಅಧಿಕಾರಿಗಳನ್ನು; ಬಲಿಷ್ಠ ಯುದ್ಧವೀರರನ್ನು ಮತ್ತು ಧೈರ್ಯವಂತರಾದ ಸೈನಿಕರನ್ನು ಜೆರುಸಲೇಮಿಗೆ ಕರೆಸಿ ಸಭೆಸೇರಿಸಿದನು.
ಸೊಲೊಮೋನನು ಎಚ್ಚರಗೊಂಡನು. ದೇವರು ಕನಸಿನಲ್ಲಿ ತನ್ನೊಡನೆ ಮಾತನಾಡಿದನೆಂಬುದು ಅವನಿಗೆ ತಿಳಿಯಿತು. ನಂತರ ಸೊಲೊಮೋನನು ಜೆರುಸಲೇಮಿಗೆ ಹೋಗಿ, ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಎದುರಿನಲ್ಲಿ ನಿಂತುಕೊಂಡನು. ಸೊಲೊಮೋನನು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಅನಂತರ ಅವನು ತನ್ನ ಆಳ್ವಿಕೆಗೆ ಸಹಾಯ ಮಾಡಿದ ಎಲ್ಲ ನಾಯಕರಿಗೆ ಮತ್ತು ಅಧಿಕಾರಿಗಳಿಗೆ ಒಂದು ಔತಣವನ್ನೇರ್ಪಡಿಸಿದನು.