1 ಅರಸುಗಳು 8:10 - ಪರಿಶುದ್ದ ಬೈಬಲ್10 ಯಾಜಕರು ಪವಿತ್ರ ಪೆಟ್ಟಿಗೆಯನ್ನು ಮಹಾ ಪವಿತ್ರಸ್ಥಳದಲ್ಲಿ ಇಟ್ಟರು. ಯಾಜಕರು ಪವಿತ್ರಸ್ಥಳದಿಂದ ಹೊರಬಂದಾಗ, ಯೆಹೋವನ ಆಲಯವು ಮೋಡದಿಂದ ತುಂಬಿಕೊಂಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯಾಜಕರು ಪರಿಶುದ್ಧ ಸ್ಥಳದಿಂದ ಹೊರಗೆ ಬಂದ ಕೂಡಲೆ ಮೇಘವು ಯೆಹೋವನ ಆಲಯವನ್ನು ತುಂಬಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಯಾಜಕರು ಆ ಪರಿಶುದ್ಧ ಸ್ಥಳದಿಂದ ಹೊರಗೆ ಬಂದಕೂಡಲೆ ಮೇಘವು ಸರ್ವೇಶ್ವರನ ಆಲಯವನ್ನು ತುಂಬಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯಾಜಕರು ಪರಿಶುದ್ಧಸ್ಥಳದಿಂದ ಹೊರಗೆ ಬಂದ ಕೂಡಲೆ ಮೇಘವು ಯೆಹೋವನ ಆಲಯವನ್ನು ತುಂಬಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ, ಮೇಘವು ಯೆಹೋವ ದೇವರ ಮಂದಿರವನ್ನು ತುಂಬಿತ್ತು. ಅಧ್ಯಾಯವನ್ನು ನೋಡಿ |
ಆತನು ಹೇಳಿದ್ದೇನೆಂದರೆ: “ನಿನ್ನ ಸಹೋದರನಾದ ಆರೋನನೊಡನೆ ಮಾತಾಡು. ಅವನು ತನಗೆ ಇಷ್ಟಬಂದಾಗಲೆಲ್ಲಾ ತೆರೆಯ ಹಿಂದಿರುವ ಮಹಾ ಪವಿತ್ರಸ್ಥಳದೊಳಕ್ಕೆ ಹೋಗಬಾರದೆಂದು ಅವನಿಗೆ ಹೇಳು. ಆ ತೆರೆಯ ಹಿಂದೆ ಇರುವ ಕೋಣೆಯೊಳಗೆ ಪವಿತ್ರ ಪೆಟ್ಟಿಗೆಯು ಇರುತ್ತದೆ. ಕೃಪಾಸನವು ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿರುತ್ತದೆ. ಕೃಪಾಸನದ ಮೇಲೆ ಮೇಘದಲ್ಲಿ ನಾನು ಕಾಣಿಸಿಕೊಳ್ಳುತ್ತೇನೆ. ಆರೋನನು ಆ ಕೋಣೆಯೊಳಗೆ ಹೋದರೆ ಸಾಯುವನು!