Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:11 - ಪರಿಶುದ್ದ ಬೈಬಲ್‌

11 ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿದ್ದರಿಂದ ಯಾಜಕರು ತಮ್ಮ ಕಾರ್ಯವನ್ನು ಮುಂದುವರಿಸಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡ ಮೇಘವು ಆಲಯವನ್ನು ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲು ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರನ ತೇಜಸ್ಸಿನಿಂದ ವ್ಯಾಪ್ತವಾಗಿದ್ದ ಆ ಮೇಘವು ಆಲಯವನ್ನು ಆವರಿಸಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನ ತೇಜಸ್ಸಿನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರ ತೇಜಸ್ಸಿನಿಂದ ವ್ಯಾಪಿಸಿದ್ದ ಆ ಮೋಡವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:11
22 ತಿಳಿವುಗಳ ಹೋಲಿಕೆ  

“ಬೆಳಕು ಕತ್ತಲೆಯೊಳಗಿಂದ ಪ್ರಕಾಶಿಸಲಿ!” ಎಂದು ದೇವರು ಒಮ್ಮೆ ಹೇಳಿದ್ದಾನೆ. ಈ ದೇವರೇ ನಮ್ಮ ಹೃದಯಗಳಲ್ಲಿ ತನ್ನ ಬೆಳಕನ್ನು ಬೆಳಗಿಸಿದ್ದಾನೆ. ಕ್ರಿಸ್ತನ ಮುಖದಲ್ಲಿರುವ ದೇವರ ಮಹಿಮೆಯನ್ನು ನಮಗೆ ತಿಳಿಯಪಡಿಸುವುದರ ಮೂಲಕ ಆತನು ನಮಗೆ ಬೆಳಕನ್ನು ಕೊಟ್ಟಿದ್ದಾನೆ.


ನಮ್ಮ ಮುಖಗಳು ಮುಸುಕಿನಿಂದ ಮುಚ್ಚಲ್ಪಟ್ಟಿಲ್ಲ. ನಾವೆಲ್ಲರೂ ಮುಸುಕು ತೆರೆದ ಮುಖವುಳ್ಳವರಾಗಿದ್ದು ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತಿದ್ದೇವೆ. ಪ್ರಭುವಿನಿಂದ ಹೊರಹೊಮ್ಮುವ ಮಹಿಮೆಯು ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಆತನನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮನಾಗಿರುವ ಪ್ರಭುವಿನ ಕಾರ್ಯವೇ.


ಆ ಬಳಿಕ ನನ್ನನ್ನು ಉತ್ತರದ ದ್ವಾರದ ಮೂಲಕ ಆಲಯದ ಮುಂಭಾಗಕ್ಕೆ ಅವನು ಕರೆದುಕೊಂಡು ಹೋದನು. ನಾನು ನೋಡಿದಾಗ ಯೆಹೋವನ ತೇಜಸ್ಸು ಆತನ ಆಲಯವನ್ನು ತುಂಬುತ್ತಿತ್ತು. ನಾನು ಸಾಷ್ಟಾಂಗವೆರಗಿದೆನು.


ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅವರು ಹೊರಗೆ ಬಂದು ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು.


ನಗರದ ಮೇಲೆ ಸೂರ್ಯನಾಗಲಿ ಚಂದ್ರನಾಗಲಿ ಪ್ರಕಾಶಿಸುವ ಅಗತ್ಯವಿರಲಿಲ್ಲ. ದೇವರ ಪ್ರಭಾವವೇ ಆ ನಗರಕ್ಕೆ ಬೆಳಕನ್ನು ನೀಡುತ್ತಿತ್ತು. ಕುರಿಮರಿಯಾದಾತನು ನಗರಕ್ಕೆ ದೀಪವಾಗಿದ್ದನು.


ವಾಕ್ಯ ಎಂಬಾತನು ಮನುಷ್ಯನಾಗಿ ನಮ್ಮೊಂದಿಗೆ ವಾಸಿಸಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಒಬ್ಬನೇ ಮಗನಿಗಿರುವ ಮಹಿಮೆಯಾಗಿತ್ತು. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಅಲ್ಲಿ ಇಸ್ರೇಲ್ ದೇವರ ಮಹಿಮೆಯು ಪೂರ್ವದಿಂದ ಬಂದಿತು. ದೇವರ ಸ್ವರವು ಸಮುದ್ರದ ಶಬ್ದದಂತೆ ಗಟ್ಟಿಯಾಗಿತ್ತು. ದೇವರ ಮಹಿಮಾ ಪ್ರಕಾಶದಿಂದ ನೆಲವು ಬೆಳಕಿನಿಂದ ತುಂಬಿತ್ತು.


ಆ ನಗರವು ದೇವರ ಪ್ರಭಾವದಿಂದ ಪ್ರಕಾಶಿಸುತ್ತಿತ್ತು. ಅದು ಬಹು ಬೆಲೆಬಾಳುವ ವಜ್ರದಂತೆ ಪ್ರಕಾಶಿಸುತ್ತಿತ್ತು. ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು.


ಆದರೆ ಸ್ತೆಫನನು ಪವಿತ್ರಾತ್ಮಭರಿತನಾಗಿದ್ದನು. ಅವನು ಆಕಾಶದತ್ತ ಕಣ್ಣೆತ್ತಿ ನೋಡಿ, ದೇವರ ಮಹಿಮೆಯನ್ನೂ ಯೇಸುವು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ಕಂಡು,


ಮೋಶೆ, “ಯೆಹೋವನು ಆಜ್ಞಾಪಿಸಿದವುಗಳನ್ನು ನೀವು ಮಾಡಿದರೆ ಯೆಹೋವನ ಮಹಿಮೆಯು ನಿಮಗೆ ಪ್ರತ್ಯಕ್ಷವಾಗುವುದು” ಎಂದು ಹೇಳಿದನು.


ಅವರು ಇಸ್ರೇಲಿನ ಜನರು. ಅವರು ದೇವರಿಂದ ಆರಿಸಲ್ಪಟ್ಟ ಮಕ್ಕಳು. ಅವರು ದೇವರ ಮಹಿಮೆಯನ್ನು ಮತ್ತು ದೇವರು ಅವರೊಂದಿಗೆ ಮಾಡಿಕೊಂಡ ಒಡಂಬಡಿಕೆಗಳನ್ನು ಹೊಂದಿದ್ದಾರೆ. ದೇವರು ಅವರಿಗೆ ಮೋಶೆಯ ಧರ್ಮಶಾಸ್ತ್ರವನ್ನೂ ಸರಿಯಾದ ಆರಾಧನೆಯ ಕ್ರಮವನ್ನೂ ತನ್ನ ವಾಗ್ದಾನಗಳನ್ನೂ ಕೊಟ್ಟನು.


ತರುವಾಯ ಮೋಡವು ದೇವದರ್ಶನಗುಡಾರವನ್ನು ಕವಿಯಿತು. ಯೆಹೋವನ ಮಹಿಮೆಯು ಪವಿತ್ರಗುಡಾರವನ್ನು ತುಂಬಿಕೊಂಡಿತು.


ಮೋಡವು ದೇವದರ್ಶನಗುಡಾರದ ಮೇಲೆ ನಿಂತಿತು. ಯೆಹೋವನ ಮಹಿಮೆಯು ಪವಿತ್ರಗುಡಾರವನ್ನು ತುಂಬಿಕೊಂಡಿದ್ದರಿಂದ ಮೋಶೆಯು ಒಳಗೆ ಪ್ರವೇಶಿಸಲಾಗಲಿಲ್ಲ.


ಯಾಜಕರು ಪವಿತ್ರ ಪೆಟ್ಟಿಗೆಯನ್ನು ಮಹಾ ಪವಿತ್ರಸ್ಥಳದಲ್ಲಿ ಇಟ್ಟರು. ಯಾಜಕರು ಪವಿತ್ರಸ್ಥಳದಿಂದ ಹೊರಬಂದಾಗ, ಯೆಹೋವನ ಆಲಯವು ಮೋಡದಿಂದ ತುಂಬಿಕೊಂಡಿತು.


ಆಗ ಸೊಲೊಮೋನನು, “ಆಕಾಶದಲ್ಲಿ ಸೂರ್ಯನು ಹೊಳೆಯುವಂತೆ ಯೆಹೋವನು ಮಾಡಿದನು. ತಾನಾದರೋ ಕಪ್ಪಾದ ಮೋಡದಲ್ಲಿ ವಾಸಿಸಲು ನಿರ್ಧರಿಸಿದನು.


ಆಗ ಯಾಜಕರು ನಿಂತುಕೊಂಡು ಸೇವೆಯನ್ನು ಮಾಡಲಾಗಲಿಲ್ಲ. ಯಾಕೆಂದರೆ ದೇವರ ಮಹಿಮೆಯು ದೇವಾಲಯವನ್ನು ತುಂಬಿಕೊಂಡಿತ್ತು.


ನೀನು ನಿನ್ನ ಸೇವಕರುಗಳಿಗಾಗಿ ಮಾಡಬಲ್ಲ ಅದ್ಭುತಕಾರ್ಯಗಳನ್ನು ನಾವು ನೋಡುವಂತಾಗಲಿ.


ನಾನು ಜನಾಂಗಗಳನ್ನು ನಡುಗಿಸುವೆನು. ಆಗ ಅವರು ಎಲ್ಲಾ ಜನಾಂಗಗಳ ಐಶ್ವರ್ಯದೊಡನೆ ನಿಮ್ಮಲ್ಲಿಗೆ ಬರುವರು. ಆಗ ನನ್ನ ಈ ಆಲಯವನ್ನು ಮಹಿಮೆಯಿಂದ ತುಂಬಿಸುವೆನು.’ ಸರ್ವಶಕ್ತನಾದ ದೇವರು ಇದನ್ನು ಹೇಳುತ್ತಿದ್ದಾನೆ!


ಆ ಸ್ಥಳದಲ್ಲಿ ನಾನು ಇಸ್ರೇಲರನ್ನು ಸಂಧಿಸುವೆನು. ನನ್ನ ಪ್ರಭಾವದಿಂದ ಆ ಸ್ಥಳವು ಪವಿತ್ರವಾಗುವುದು.


ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ನಾನು ನನ್ನ ಒಡೆಯನನ್ನು ಕಂಡೆನು. ಆತನು ಅದ್ಭುತವೂ ಉನ್ನತವೂ ಆಗಿರುವ ಸಿಂಹಾಸನದ ಮೇಲೆ ಕುಳಿತಿದ್ದನು. ಆತನ ಉದ್ದವಾದ ನಿಲುವಂಗಿಯು ಆಲಯವನ್ನು ತುಂಬಿಕೊಂಡಿತ್ತು.


ಯೆಹೋವನ ಮಹಿಮೆಯು ಕೆರೂಬಿದೂತರ ಮೇಲಿನಿಂದ ಹೊರಟು ಆಲಯದ ಹೊಸ್ತಿಲಿಗೆ ಬಂದಿತು. ಆಗ ಮೋಡವು ಆಲಯದಲ್ಲಿ ತುಂಬಿಕೊಂಡಿತು. ಯೆಹೋವನ ಮಹಿಮೆಯ ಪ್ರಕಾಶವು ಇಡೀ ಅಂಗಳವನ್ನು ತುಂಬಿಕೊಂಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು