1 ಅರಸುಗಳು 8:15 - ಪರಿಶುದ್ದ ಬೈಬಲ್15 ನಂತರ ರಾಜನಾದ ಸೊಲೊಮೋನನು ಯೆಹೋವನಿಗೆ ದೀರ್ಘ ಪ್ರಾರ್ಥನೆಯನ್ನು ಮಾಡಿದನು. ಅವನ ಪ್ರಾರ್ಥನೆ ಇಂತಿದೆ: “ಇಸ್ರೇಲಿನ ದೇವರಾದ ಯೆಹೋವನು ಮಹತ್ವ ಪೂರ್ಣನಾಗಿದ್ದಾನೆ. ಯೆಹೋವನು ನನ್ನ ತಂದೆಯಾದ ದಾವೀದನಿಗೆ ತಾನು ಮಾಡಿದ್ದ ವಾಗ್ದಾನಗಳನ್ನು ಸ್ವತಃ ತಾನೇ ನೆರವೇರಿಸಿದ್ದಾನೆ. ಯೆಹೋವನು ನನ್ನ ತಂದೆಗೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ನನ್ನ ತಂದೆಯಾದ ದಾವೀದನಿಗೆ ಆತನ ಬಾಯಿ ನುಡಿದಿದ್ದನ್ನು ಆತನ ಹಸ್ತವು ಈಗ ನೆರವೇರಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನ ತಂದೆ ದಾವೀದನಿಗೆ ಬಾಯಿಂದ ನುಡಿದದ್ದನ್ನು ಈಗ ಕೈಯಿಂದ ನೆರವೇರಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇಸ್ರಾಯೇಲ್‍ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನನ್ನ ತಂದೆಯಾದ ದಾವೀದನಿಗೆ ಆತನ ಬಾಯಿ ನುಡಿದದ್ದನ್ನು ಆತನ ಹಸ್ತವು ಈಗ ನೆರವೇರಿಸಿಯದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಂತರ ರಾಜನು ಹೀಗೆ ಹೇಳಿದನು: “ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ, ಅವರು ನನ್ನ ತಂದೆಯಾದ ದಾವೀದನಿಗೆ ತಮ್ಮ ಬಾಯಿಂದ ವಾಗ್ದಾನ ಮಾಡಿದ್ದನ್ನು, ತಮ್ಮ ಕೈಗಳಿಂದಲೇ ನೆರವೇರಿಸಿದರು. ಅವರು ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿ |
ಆ ಬಳಿಕ, ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ ಮತ್ತು ಪೆತಹ್ಯ ಎಂಬವರು, “ಎದ್ದುನಿಂತುಕೊಂಡು ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಿದರು. “ದೇವರು ಯಾವಾಗಲೂ ಇದ್ದಾತನಾಗಿದ್ದಾನೆ ಮತ್ತು ಯಾವಾಗಲೂ ಇರುವಾತನಾಗಿದ್ದಾನೆ. ನಿನ್ನ ಮಹಿಮಾಪೂರ್ಣವಾದ ಹೆಸರನ್ನು ಜನರು ಕೊಂಡಾಡಲಿ; ನಿನ್ನ ಹೆಸರು ಎಲ್ಲಾ ಸ್ತುತಿಕೀರ್ತನೆಗಳಿಗೆ ಮಿಗಿಲಾಗಿ ಎತ್ತಲ್ಪಡಲಿ.