16 ‘ನಾನು ನನ್ನ ಜನರಾದ ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದೆನು. ಆದರೆ ನನ್ನನ್ನು ಘನಪಡಿಸಿಕೊಳ್ಳುವುದಕ್ಕಾಗಿ ಆಲಯವೊಂದನ್ನು ಕಟ್ಟಲು ಇಸ್ರೇಲಿನ ಕುಲಗಳಿಂದ ನಾನಿನ್ನೂ ಯಾವ ನಗರವನ್ನು ಆರಿಸಿಕೊಂಡಿರಲಿಲ್ಲ. ಇಸ್ರೇಲಿನ ಜನರನ್ನಾಳುವ ನಾಯಕನನ್ನು ನಾನಿನ್ನೂ ಆರಿಸಿಕೊಂಡಿರಲಿಲ್ಲ, ಆದರೆ ನಾನೀಗ ಜೆರುಸಲೇಮನ್ನು ನನಗೆ ಸನ್ಮಾನವನ್ನು ತರುವಂಥ ಸ್ಥಳವನ್ನಾಗಿ ಆರಿಸಿಕೊಂಡಿರುವೆ. ಇಸ್ರೇಲಿನ ನನ್ನ ಜನರನ್ನು ಆಳಲು ದಾವೀದನನ್ನು ನಾನು ಆರಿಸಿಕೊಂಡಿರುವೆ’ ಎಂದು ಹೇಳಿದ್ದನು.
16 ಆತನು, ‘ನಾನು ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದಿಂದ ಬರಮಾಡಿದಂದಿನಿಂದ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನು ಆರಿಸಿಕೊಂಡೆನೇ ಹೊರತು ನನ್ನ ನಾಮದ ನಿವಾಸಕ್ಕೋಸ್ಕರ ಆಲಯ ಸ್ಥಾನವನ್ನಾಗಿ ಇಸ್ರಾಯೇಲ್ ಕುಲಗಳ ಯಾವ ಪಟ್ಟಣವನ್ನೂ ಆರಿಸಿಕೊಳ್ಳಲಿಲ್ಲ’ ಎಂದು ಹೇಳಿದ್ದನು.
16 ‘ನಾನು ನನ್ನ ಜನರಾದ ಇಸ್ರಯೇಲರನ್ನು ಈಜಿಪ್ಟಿನಿಂದ ಬರಮಾಡಿದಂದಿನಿಂದ ನನ್ನ ನಾಮದ ನಿವಾಸಕ್ಕಾಗಿ ಆಲಯ ಸ್ಥಾನವನ್ನಾಗಲಿ, ಇಸ್ರಯೇಲ್ ಕುಲಗಳ ಯಾವ ಪಟ್ಟಣವನ್ನಾಗಲಿ ಆರಿಸಿಕೊಳ್ಳಲಿಲ್ಲ. ಆದರೆ ನನ್ನ ಪ್ರಜೆ ಇಸ್ರಯೇಲರನ್ನು ಆಳುವುದಕ್ಕೆ ದಾವೀದನನ್ನು ಆರಿಸಿಕೊಂಡೆ’ ಎಂದು ಹೇಳಿದ್ದರು.
16 ಆತನು - ನಾನು ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತದಿಂದ ಬರಮಾಡಿದಂದಿನಿಂದ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಆಳುವದಕ್ಕೋಸ್ಕರ ದಾವೀದನನ್ನು ಆರಿಸಿಕೊಂಡೆನೇ ಹೊರತು ನನ್ನ ನಾಮದ ನಿವಾಸಕ್ಕೋಸ್ಕರ ಆಲಯ ಸ್ಥಾನವನ್ನಾಗಿ ಇಸ್ರಾಯೇಲ್‍ಕುಲಗಳ ಯಾವ ಪಟ್ಟಣವನ್ನೂ ಆರಿಸಿಕೊಳ್ಳಲಿಲ್ಲ ಎಂದು ಹೇಳಿದ್ದನು.
16 ‘ನನ್ನ ಜನರಾದ ಇಸ್ರಾಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು, ನನ್ನ ನಾಮವು ಅದರಲ್ಲಿರುವ ಹಾಗೆ, ಆಲಯವನ್ನು ಕಟ್ಟುವುದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆಯ್ದುಕೊಳ್ಳದೆ, ನನ್ನ ಜನರಾದ ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನು ಆಯ್ದುಕೊಂಡೆನು,’ ಎಂಬುದು.
ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.
“ಇಸ್ರೇಲರ ದೇವರಾದ ಯೆಹೋವನು ಇಸ್ರೇಲರ ಹನ್ನೆರಡು ಕುಲಗಳನ್ನು ಮುನ್ನಡೆಸಲು ಯೆಹೂದ ಕುಲವನ್ನು ಆರಿಸಿಕೊಂಡಿದ್ದಾನೆ. ಆ ಕುಲದಿಂದ ದೇವರು ನನ್ನ ತಂದೆಯ ಕುಟುಂಬವನ್ನು ಆರಿಸಿದ್ದಾನೆ; ಆ ಕುಟುಂಬದಿಂದ ದೇವರು ಇಸ್ರೇಲರ ಅರಸನನ್ನಾಗಿ ನನ್ನನ್ನು ಆರಿಸಿಕೊಂಡಿದ್ದಾನೆ.
‘ಅಲ್ಲಿ ನಾನು ಸನ್ಮಾನಿಸಲ್ಪಡುವೆನು’ ಎಂದು ನೀನು ಬಹುಕಾಲದ ಹಿಂದೆ ಹೇಳಿರುವೆ. ಆದ್ದರಿಂದ ಈ ಆಲಯವನ್ನು ಹಗಲಿರುಳೂ ದೃಷ್ಟಿಸು. ನಾನು ಈ ಆಲಯದಲ್ಲಿ ನಿನಗೆ ಮಾಡುವ ಪ್ರಾರ್ಥನೆಯನ್ನು ದಯವಿಟ್ಟು ಕೇಳು.
ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು.
“ಯೆಹೂದದ ಜನರಾದ ನೀವು ಈಗ ಶೀಲೋವಿಗೆ ಹೋಗಿರಿ. ನಾನು ಮೊದಲು ನನ್ನ ಹೆಸರಿಗಾಗಿ ಆಲಯವನ್ನು ಮಾಡಿದ ಸ್ಥಳಕ್ಕೆ ಹೋಗಿರಿ. ಇಸ್ರೇಲಿನ ಜನರು ಸಹ ದುಷ್ಕೃತ್ಯಗಳನ್ನು ಮಾಡಿದರು. ಅವರು ಮಾಡಿದ ದುಷ್ಕೃತ್ಯಗಳ ಕಾರಣ ನಾನು ಆ ಸ್ಥಳಕ್ಕೆ ಮಾಡಿರುವುದನ್ನು ಹೋಗಿ ನೋಡಿರಿ.
ಆದರೆ ನೀವು ಹಿಂತಿರುಗಿ ನನ್ನ ಬಳಿಗೆ ಬಂದು, ನನ್ನ ಕಟ್ಟಳೆಗಳಿಗೆ ವಿಧೇಯರಾದರೆ, ನಿಮ್ಮ ಜನರನ್ನು ಬಲವಂತವಾಗಿ ಭೂಲೋಕದ ಕಟ್ಟಕಡೆಯವರೆಗೆ ಕೊಂಡೊಯ್ದಿದ್ದರೂ ಅಲ್ಲಿಂದ ನನ್ನ ಹೆಸರನ್ನು ನೆಲೆಗೊಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸ್ಥಳಕ್ಕೆ ಕರೆದುಕೊಂಡು ಬರುವೆನು” ಎಂದು ಹೇಳಿರುವೆ.
ಯೆಹೋವನು, “ನಾನು ಇಸ್ರೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು. ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮ ಮಹತ್ತಿಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು.
ಸೊಲೊಮೋನನ ಮಗನಿಗೆ ಒಂದು ಕುಲವನ್ನು ಮಾತ್ರ ಕೊಡುತ್ತೇನೆ. ಜೆರುಸಲೇಮಿನ ನನ್ನ ಸನ್ನಿಧಿಯಲ್ಲಿ ಆಳಲು ನನ್ನ ಸೇವಕನಾದ ದಾವೀದನು ಯಾವಾಗಲೂ ತನ್ನ ಸಂತತಿಯವರಲ್ಲಿ ಒಬ್ಬನನ್ನು ಹೊಂದಿರಲೆಂದು ನಾನು ಇದನ್ನು ಮಾಡುತ್ತೇನೆ. ಜೆರುಸಲೇಮ್ ನಗರವನ್ನು ನಾನು ನನ್ನ ಸ್ವಂತದ್ದೆಂದು ಆರಿಸಿಕೊಂಡೆನು.
ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು.