Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:19 - ಪರಿಶುದ್ದ ಬೈಬಲ್‌

19 ಆದರೆ ನನ್ನ ಆಲಯವನ್ನು ನಿರ್ಮಿಸಲು ನಾನು ಆರಿಸಿಕೊಂಡಿರುವ ವ್ಯಕ್ತಿಯು ನೀನಲ್ಲ. ನಿನ್ನ ಮಗನೇ ನನ್ನ ಆಲಯವನ್ನು ನಿರ್ಮಿಸುತ್ತಾನೆ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿನ್ನಿಂದ ಹುಟ್ಟುವ ಮಗನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆದರೆ ಅದನ್ನು ಕಟ್ಟಬೇಕಾದವನು ನೀನಲ್ಲ; ನಿನ್ನಿಂದ ಹುಟ್ಟುವ ಮಗನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕು’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದರೂ ನೀನು ಅದನ್ನು ಕಟ್ಟಬಾರದು; ನಿನ್ನಿಂದ ಹುಟ್ಟುವ ಮಗನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ ನೀನು ಆಲಯವನ್ನು ಕಟ್ಟಬಾರದು. ನಿನ್ನಿಂದ ಹುಟ್ಟುವ ಮಗನೇ, ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕು,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:19
8 ತಿಳಿವುಗಳ ಹೋಲಿಕೆ  

“ನೀನು ನನ್ನ ಸೇವಕನಾದ ದಾವೀದನ ಬಳಿಗೆ ಹೋಗಿ ಈ ಸಂದೇಶವನ್ನು ತಿಳಿಸು: ‘ನನ್ನ ವಾಸಕ್ಕಾಗಿ ಆಲಯವನ್ನು ಕಟ್ಟುವ ವ್ಯಕ್ತಿಯು ನೀನಲ್ಲ.


ಯೆಹೋವನು ನನಗೆ, ‘ದಾವೀದನೇ, ನಿನ್ನ ಮಗನಾದ ಸೊಲೊಮೋನನು ದೇವಾಲಯವನ್ನು ಮತ್ತು ಅದರ ಸುತ್ತಮುತ್ತಲಿನ ಕಟ್ಟಡಗಳನ್ನು ಕಟ್ಟುವನು. ಯಾಕೆಂದರೆ ಸೊಲೊಮೋನನನ್ನು ನಾನು ಆರಿಸಿಕೊಂಡಿದ್ದೇನೆ. ಅವನು ನನಗೆ ಮಗನಾಗಿರುವನು; ನಾನು ಅವನಿಗೆ ತಂದೆಯಾಗಿರುವೆನು.


ದೇವರು ಅವನಿಗೆ, “ನನ್ನ ಸೇವಕನಾದ ದಾವೀದನಿಗೆ ಹೀಗೆ ಹೇಳು: ‘ನನಗೋಸ್ಕರ ಆಲಯವನ್ನು ಕಟ್ಟುವವನು ನೀನಲ್ಲ.


ಆದರೆ ಯೆಹೋವನು ನನ್ನ ತಂದೆಗೆ, ‘ನೀನು ನನ್ನ ಮಹಿಮೆಗಾಗಿ ಆಲಯವೊಂದನ್ನು ನಿರ್ಮಿಸಲು ಬಹಳ ಅಪೇಕ್ಷೆಪಟ್ಟಿರುವುದು ನನಗೆ ತಿಳಿದಿದೆ. ನನಗೋಸ್ಕರ ಆಲಯವನ್ನು ಕಟ್ಟಲು ನೀನು ಅಪೇಕ್ಷಿಸಿರುವುದು ಒಳ್ಳೆಯದೇ ಆಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು