1 ಅರಸುಗಳು 8:2 - ಪರಿಶುದ್ದ ಬೈಬಲ್2 ಆದ್ದರಿಂದ ಇಸ್ರೇಲಿನ ಜನರೆಲ್ಲರೂ ರಾಜನಾದ ಸೊಲೊಮೋನನ ಬಳಿಗೆ ಒಟ್ಟಾಗಿ ಬಂದರು. ಇದು ಏತನೀಮ್ ತಿಂಗಳಿನ (ಆಶ್ವೀಜ) ವಿಶೇಷ ದಿನದಂದು (ಪರ್ಣಶಾಲೆಗಳ ಹಬ್ಬ) ನಡೆಯಿತು. ಇದು ವರ್ಷದ ಏಳನೆಯ ತಿಂಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇಸ್ರಾಯೇಲರೆಲ್ಲರೂ ಏಳನೆಯ ತಿಂಗಳಾದ ಆಶ್ವೀಜ ಮಾಸದಲ್ಲಿ ಜಾತ್ರೆಗೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಕೂಡಿಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಂತೆಯೇ ಆ ಇಸ್ರಯೇಲರೆಲ್ಲರು ಏಳನೆಯ ತಿಂಗಳಾದ ಅಶ್ವಯುಜ ಮಾಸದಲ್ಲಿ ಜಾತ್ರೆಯಾಗಿ ಅರಸ ಸೊಲೊಮೋನನ ಬಳಿಗೆ ಕೂಡಿಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಸ್ರಾಯೇಲ್ಯರೆಲ್ಲರೂ ಏಳನೆಯ ತಿಂಗಳಾದ ಆಶ್ವೀಜಮಾಸದಲ್ಲಿ ಜಾತ್ರೆಗೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಕೂಡಿಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯಥನಿಮ ತಿಂಗಳಲ್ಲಿ ಹಬ್ಬವಿದ್ದಾಗ, ಇಸ್ರಾಯೇಲಿನ ಸಮಸ್ತ ಜನರು ಅರಸನಾದ ಸೊಲೊಮೋನನ ಬಳಿಗೆ ಕೂಡಿಬಂದರು. ಅಧ್ಯಾಯವನ್ನು ನೋಡಿ |
ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರು ವಿಶ್ರಾಂತಿ ಹಬ್ಬವನ್ನು ಆಚರಿಸಿದರು. ಉತ್ತರದಲ್ಲಿದ್ದ ಹಮಾತ್ ದಾರಿಯಿಂದ ದಕ್ಷಿಣದ ಈಜಿಪ್ಟಿನ ಗಡಿಯವರೆಗಿನ ಎಲ್ಲ ಇಸ್ರೇಲರು ಅಲ್ಲಿದ್ದರು. ಅವರೆಲ್ಲರೂ ಒಟ್ಟಾಗಿ ಏಳು ದಿನಗಳ ಕಾಲ ಯೆಹೋವನ ಮುಂದೆ ತಿಂದು, ಕುಡಿದು ಆನಂದಿಸಿದರು. ಆಗ ಅವರು ಮತ್ತೆ ಏಳು ದಿನಗಳು ಅಲ್ಲಿಯೇ ಉಳಿದರು. ಅವರು ಒಟ್ಟಿಗೆ ಹದಿನಾಲ್ಕು ದಿನಗಳು ಹಬ್ಬವನ್ನು ಆಚರಿಸಿದರು!
ರಾಜನಾದ ಯಾರೊಬ್ಬಾಮನು ಹೊಸಹಬ್ಬದ ದಿನವನ್ನು ಆರಂಭಿಸಿದನು. ಈ ಹಬ್ಬವು ಯೆಹೂದ್ಯರ ಪಸ್ಕಹಬ್ಬದಂತಿತ್ತು. ಆದರೆ ಈ ಹಬ್ಬವು ಎಂಟನೆಯ ತಿಂಗಳ ಹದಿನೈದನೆಯ ದಿವಸವಾಗಿತ್ತು. ಆ ಸಂದರ್ಭದಲ್ಲಿ ರಾಜನು ಬೇತೇಲ್ ನಗರದಲ್ಲಿ ಯಜ್ಞವೇದಿಕೆಯ ಮೇಲೆ ಯಜ್ಞಗಳನ್ನು ಅರ್ಪಿಸಿದನು. ಅವನು ತಾನೇ ನಿರ್ಮಿಸಿದ ಕರುಗಳಿಗೆ ಯಜ್ಞಗಳನ್ನು ಅರ್ಪಿಸಿದನು. ರಾಜನಾದ ಯಾರೊಬ್ಬಾಮನು ತಾನು ನಿರ್ಮಿಸಿದ ಎತ್ತರದ ಸ್ಥಳಗಳಲ್ಲಿ ಸೇವೆಮಾಡಲು ಯಾಜಕರನ್ನು ಬೇತೇಲ್‌ನಲ್ಲಿಯೇ ಆರಿಸಿಕೊಂಡನು.