1 ಅರಸುಗಳು 8:20 - ಪರಿಶುದ್ದ ಬೈಬಲ್20 “ಯೆಹೋವನು ತಾನು ಮಾಡಿದ್ದ ವಾಗ್ದಾನವನ್ನು ಈಡೇರಿಸಿದನು. ನನ್ನ ತಂದೆಯಾದ ದಾವೀದನ ಸ್ಥಾನದಲ್ಲಿ ನಾನೀಗ ರಾಜನಾಗಿದ್ದೇನೆ. ಯೆಹೋವನ ವಾಗ್ದಾನದಂತೆ ಈಗ ನಾನು ಇಸ್ರೇಲಿನ ಜನರನ್ನು ಆಳುತ್ತಿದ್ದೇನೆ. ಇಸ್ರೇಲಿನ ದೇವರಾದ ಯೆಹೋವನಿಗೆ ನಾನು ಆಲಯವನ್ನು ನಿರ್ಮಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದನು. ಆತನ ವಾಗ್ದಾನದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲ್ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಈ ಆಲಯವನ್ನು ಕಟ್ಟಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಸರ್ವೇಶ್ವರ ತಾವು ಕೊಟ್ಟ ಮಾತನ್ನು ನೆರವೇರಿಸಿದ್ದಾರೆ. ಅವರ ವಾಗ್ದಾನದಂತೆ ನಾನು ನನ್ನ ತಂದೆ ದಾವೀದರ ಸ್ಥಾನದಲ್ಲಿ ಇಸ್ರಯೇಲ್ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡಿದ್ದೇನೆ; ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿಗೋಸ್ಕರ ಈ ಆಲಯವನ್ನು ಕಟ್ಟಿಸಿದ್ದೇನೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದನು. ಆತನ ವಾಗ್ದಾನದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲ್‍ಸಿಂಹಾಸನದ ಮೇಲೆ ಅರಸನಾಗಿ ಕೂತುಕೊಂಡು ಇಸ್ರಾಯೇಲ್‍ದೇವರಾದ ಯೆಹೋವನ ಹೆಸರಿಗೋಸ್ಕರ ಈ ಆಲಯವನ್ನು ಕಟ್ಟಿದೆನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ಈಗ ಯೆಹೋವ ದೇವರು ತಾವು ಹೇಳಿದ ವಾಗ್ದಾನವನ್ನು ನೆರವೇರಿಸಿದ್ದಾರೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಯೆಹೋವ ದೇವರು ಮಾತುಕೊಟ್ಟ ಪ್ರಕಾರ, ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಈ ಆಲಯವನ್ನು ಕಟ್ಟಿಸಿದ್ದೇನೆ. ಅಧ್ಯಾಯವನ್ನು ನೋಡಿ |