1 ಅರಸುಗಳು 8:21 - ಪರಿಶುದ್ದ ಬೈಬಲ್21 ಯೆಹೋವನ ಪೆಟ್ಟಿಗೆಗಾಗಿ ಆಲಯದಲ್ಲಿ ನಾನೊಂದು ಸ್ಥಳವನ್ನು ಮಾಡಿದ್ದೇನೆ. ಯೆಹೋವನು ನಮ್ಮ ಪೂರ್ವಿಕರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯು ಈ ಪವಿತ್ರಪೆಟ್ಟಿಗೆಯಲ್ಲಿದೆ. ಯೆಹೋವನು ನಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದಾಗ ಈ ಒಡಂಬಡಿಕೆಯನ್ನು ಮಾಡಿಕೊಂಡನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇದಲ್ಲದೆ ಐಗುಪ್ತದೇಶದಿಂದ ಬಿಡುಗಡೆ ಹೊಂದಿದ ನಮ್ಮ ಪೂರ್ವಿಕರಿಗೆ ಯೆಹೋವನಿಂದ ದೊರಕಿದ ನಿಬಂಧನಾಶಾಸನಗಳಿರುವ ಮಂಜೂಷಕ್ಕೆ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇರಿಸಿದೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇದಲ್ಲದೆ, ಈಜಿಪ್ಟಿನಿಂದ ಬಿಡುಗಡೆಹೊಂದಿದ ನಮ್ಮ ಪಿತೃಗಳಿಗೆ ಸರ್ವೆಶ್ವರನಿಂದ ದೊರೆತ ನಿಬಂಧನಶಾಸನಗಳಿರುವ ಮಂಜೂಷಕ್ಕೆ ಪ್ರತ್ಯೇಕ ಸ್ಥಳವನ್ನು ಗುರುತಿಸಿ ಅಲ್ಲಿ ಅದನ್ನು ಇಟ್ಟಿದ್ದೇನೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಇದಲ್ಲದೆ ಐಗುಪ್ತದಿಂದ ಬಿಡುಗಡೆ ಹೊಂದಿದ ನಮ್ಮ ಪಿತೃಗಳಿಗೆ ಯೆಹೋವನಿಂದ ದೊರಕಿದ ನಿಬಂಧನಶಾಸನಗಳಿರುವ ಮಂಜೂಷಕ್ಕೆ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇಟ್ಟೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇದಲ್ಲದೆ ಯೆಹೋವ ದೇವರು ನಮ್ಮ ಪಿತೃಗಳನ್ನು ಈಜಿಪ್ಟ್ ದೇಶದಿಂದ ಬರಮಾಡಿದಾಗ, ಅವರ ಸಂಗಡ ಮಾಡಿದ ಒಡಂಬಡಿಕೆಯು ಇರುವ ಮಂಜೂಷಕ್ಕೋಸ್ಕರ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇಟ್ಟೆನು,” ಎಂದನು. ಅಧ್ಯಾಯವನ್ನು ನೋಡಿ |