Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:27 - ಪರಿಶುದ್ದ ಬೈಬಲ್‌

27 “ದೇವರೇ, ನೀನು ನಿಜವಾಗಿಯೂ ನಮ್ಮೊಡನೆ ಭೂಲೋಕದಲ್ಲಿ ವಾಸಿಸುವೆಯಾ? ಆಕಾಶವೆಲ್ಲವೂ ಹಾಗೂ ಉನ್ನತೋನ್ನತವಾದ ಪರಲೋಕವೆಲ್ಲವೂ ನಿನ್ನನ್ನು ಹಿಡಿಸಲಾರವು. ಹೀಗಿರಲು, ನಾನು ನಿನಗಾಗಿ ನಿರ್ಮಿಸಿರುವ ಈ ಆಲಯವು ನಿನ್ನ ವಾಸಕ್ಕೆ ಖಂಡಿತವಾಗಿಯೂ ಸಾಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲದು. ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ, ಉನ್ನತೋನ್ನತ ಆದ ಆಕಾಶವೂ, ನಿಮ್ಮ ವಾಸಕ್ಕೆ ಸಾಲದು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲವು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ಆದರೆ ದೇವರು ನಿಜವಾಗಿ ಭೂಮಿಯ ಮೇಲೆ ವಾಸವಾಗಿರುವರೋ? ಇಗೋ, ಆಕಾಶವೂ ಉನ್ನತೋನ್ನತ ಆಕಾಶವೂ ನಿಮಗೆ ಸಾಲದು. ಹಾಗಾದರೆ, ನಾನು ಕಟ್ಟಿಸಿದ ಈ ಆಲಯವು ನಿಮಗೆ ಸಾಲುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:27
16 ತಿಳಿವುಗಳ ಹೋಲಿಕೆ  

ಯೆಹೋವನು ಹೇಳುವುದೇನೆಂದರೆ, “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದಪೀಠ. ಹೀಗಿರಲು, ನೀವು ನನಗೊಂದು ಮನೆಯನ್ನು ಕಟ್ಟಲು ಸಾಧ್ಯವೆಂದು ಯೋಚಿಸುವಿರಾ? ವಿಶ್ರಮಿಸಿಕೊಳ್ಳಲು ನೀವು ಸ್ಥಳ ಮಾಡುವಿರಾ? ಇಲ್ಲ, ಸಾಧ್ಯವಿಲ್ಲ!


ಯಾವನೂ ದೇವರಿಗೆ ಆಲಯವನ್ನು ಕಟ್ಟಲು ಸಾಧ್ಯವಿಲ್ಲ. ಯಾಕೆಂದರೆ, ಆಕಾಶವೂ ಉನ್ನತೋನ್ನತವಾದ ಆಕಾಶವೂ ಆತನ ವಾಸಕ್ಕೆ ಸಾಲುವುದಿಲ್ಲ. ಆದ್ದರಿಂದ ನಾನು ಆತನಿಗೆ ಆಲಯವನ್ನು ಕಟ್ಟಲಾರೆ. ನಾನು ಆತನಿಗೆ ಆಲಯವನ್ನು ಕಟ್ಟುತ್ತಿರುವುದು ಧೂಪಹಾಕಿ ಆತನನ್ನು ಘನಪಡಿಸುವದಕ್ಕಾಗಿಯಷ್ಟೇ.


ಒಬ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರೂ ನಾನು ಅವನನ್ನು ಸರಾಗವಾಗಿ ನೋಡಬಲ್ಲೆನು. ನಾನು ಭೂಮ್ಯಾಕಾಶಗಳ ಎಲ್ಲಾ ಕಡೆಗಳಲ್ಲೂ ಇದ್ದೇನೆ.” ಯೆಹೋವನೇ ಇವುಗಳನ್ನು ಹೇಳಿದ್ದಾನೆ.


“ದೇವರೇ, ನೀನು ಭೂಮಿಯ ಮೇಲೆ ಜನರೊಂದಿಗೆ ವಾಸಿಸುವವನಲ್ಲವೆಂದು ತಿಳಿದಿದ್ದೇವೆ. ಆಕಾಶಮಂಡಲವಾಗಲಿ ಅತ್ಯುನ್ನತವಾದ ಆಕಾಶವಾಗಲಿ ನಿನಗೆ ವಾಸಸ್ಥಾನವಾಗಲು ಸಾಧ್ಯವಿಲ್ಲ. ಈಗ ನಾನು ಕಟ್ಟಿರುವ ಈ ಆಲಯವು ಸಹ ನಿನ್ನ ವಾಸಕ್ಕೆ ಸಾಲದು.


“ಪ್ರತಿಯೊಂದೂ ಯೆಹೋವನದೇ, ಉನ್ನತವಾದ ಆಕಾಶವೂ ಯೆಹೋವನದೇ. ಈ ಭೂಮಿಯೂ, ಅದರಲ್ಲಿರುವ ಸಮಸ್ತವೂ ದೇವರಿಗೇ ಸೇರಿದ್ದು.


ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನಾಗಿದ್ದಾನೆ; ಆತನ ಮಹಿಮೆಯು ಮೇಲೋಕದಲ್ಲಿ ಮೆರೆಯುತ್ತಿದೆ.


ವಾಕ್ಯ ಎಂಬಾತನು ಮನುಷ್ಯನಾಗಿ ನಮ್ಮೊಂದಿಗೆ ವಾಸಿಸಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಒಬ್ಬನೇ ಮಗನಿಗಿರುವ ಮಹಿಮೆಯಾಗಿತ್ತು. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ತಂದೆಯು ನಮ್ಮನ್ನು ಬಹಳವಾಗಿ ಪ್ರೀತಿಸಿದನು! ದೇವರ ಮಕ್ಕಳು ಎಂಬ ಹೆಸರನ್ನು ನಮಗೆ ಕೊಡುವಷ್ಟರ ಮಟ್ಟಿಗೆ ದೇವರು ನಮ್ಮನ್ನು ಪ್ರೀತಿಸಿದನು. ನಾವು ನಿಜವಾಗಿಯೂ ದೇವರ ಮಕ್ಕಳಾಗಿದ್ದೇವೆ. ಆದರೆ ಲೋಕದಲ್ಲಿರುವ ಜನರಾದರೋ ನಾವು ದೇವರ ಮಕ್ಕಳೆಂಬುದನ್ನು ಅರ್ಥ ಮಾಡಿಕೊಳ್ಳುವುದಿಲ್ಲ. ಏಕೆಂದರೆ ಅವರು ದೇವರನ್ನು ತಿಳಿದಿಲ್ಲ.


“ದೇವರ ಬಗ್ಗೆಯೇ ನಾನು ನಿಮಗೆ ಹೇಳುತ್ತಿದ್ದೇನೆ! ಇಡೀ ಪ್ರಪಂಚವನ್ನು ಮತ್ತು ಅದರಲ್ಲಿರುವ ಪ್ರತಿಯೊಂದನ್ನು ಸೃಷ್ಟಿಮಾಡಿದಾತನೇ ಆ ದೇವರು. ಆತನೇ ಭೂಮ್ಯಾಕಾಶಗಳ ಒಡೆಯನು. ಮನುಷ್ಯರು ನಿರ್ಮಿಸುವ ಗುಡಿಗಳಲ್ಲಿ ಆತನು ಜೀವಿಸುವವನಲ್ಲ.


ಮೂರನೆಯ ಆಕಾಶಕ್ಕೆ ಒಯ್ಯಲ್ಪಟ್ಟಿದ್ದ ಒಬ್ಬ ವ್ಯಕ್ತಿಯನ್ನು ನಾನು ಬಲ್ಲೆನು. ಇದು ಸಂಭವಿಸಿ ಹದಿನಾಲ್ಕು ವರ್ಷಗಳಾದವು. ಆ ವ್ಯಕ್ತಿಯು ದೇಹಸಹಿತವಾಗಿ ಹೋಗಿದ್ದನೊ ಅಥವಾ ದೇಹರಹಿತನಾಗಿ ಹೋಗಿದ್ದನೊ ನನಗೆ ಗೊತ್ತಿಲ್ಲ. ದೇವರಿಗೆ ಗೊತ್ತು.


ದೇವರ ಆಲಯವು ವಿಗ್ರಹಗಳೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಲು ಸಾಧ್ಯವೇ? ನಾವು ಜೀವಸ್ವರೂಪನಾದ ದೇವರ ಆಲಯವಾಗಿದ್ದೇವೆ. ದೇವರು ಹೇಳಿದಂತೆ: “ನಾನು ಅವರೊಂದಿಗೆ ವಾಸಿಸುವೆನು; ಅವರೊಂದಿಗೆ ನಡೆಯುವೆನು; ಅವರ ದೇವರಾಗಿರುವೆನು; ಅವರು ನನ್ನ ಜನರಾಗಿರುವರು.”


ದೇವರಿಗೆ ಗಾಯನ ಮಾಡಿರಿ! ಅನಾದಿಕಾಲದಿಂದಿರುವ ಆತನು ಮಹೋನ್ನತವಾದ ಆಕಾಶದಲ್ಲಿ ರಥಾಶ್ವರೂಢನಾಗಿ ಸವಾರಿ ಮಾಡುವನು. ಆತನ ಗರ್ಜನೆಗೆ ಕಿವಿಗೊಡಿರಿ!


ಉನ್ನತೋನ್ನತವಾದ ಆಕಾಶವೇ, ಆತನನ್ನು ಸ್ತುತಿಸು! ಆಕಾಶದ ಮೇಲಿರುವ ನೀರುಗಳೇ ಆತನನ್ನು ಸ್ತುತಿಸಿರಿ!


“ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವನು. ಆದ್ದರಿಂದ ಆತನಿಗಾಗಿ ನಾನು ಮಹತ್ತಾದ ಆಲಯವನ್ನು ಕಟ್ಟುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು