1 ಅರಸುಗಳು 8:29 - ಪರಿಶುದ್ದ ಬೈಬಲ್29 ‘ಅಲ್ಲಿ ನಾನು ಸನ್ಮಾನಿಸಲ್ಪಡುವೆನು’ ಎಂದು ನೀನು ಬಹುಕಾಲದ ಹಿಂದೆ ಹೇಳಿರುವೆ. ಆದ್ದರಿಂದ ಈ ಆಲಯವನ್ನು ಹಗಲಿರುಳೂ ದೃಷ್ಟಿಸು. ನಾನು ಈ ಆಲಯದಲ್ಲಿ ನಿನಗೆ ಮಾಡುವ ಪ್ರಾರ್ಥನೆಯನ್ನು ದಯವಿಟ್ಟು ಕೇಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’ ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ. ಇಲ್ಲಿ ನಿನ್ನ ಸೇವಕರು ನಿನ್ನನ್ನು ಪ್ರಾರ್ಥಿಸುವಾಗೆಲ್ಲಾ ಅವರಿಗೆ ಸದುತ್ತರವನ್ನು ದಯಪಾಲಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’ ಎಂದು ಹೇಳಿದವರೇ, ನಿಮ್ಮ ಕಟಾಕ್ಷವು ಹಗಲಿರುಳೂ ಈ ಮಂದಿರದ ಮೇಲಿರಲಿ; ಇಲ್ಲಿ ನಿಮ್ಮ ದಾಸನು ನಿಮ್ಮನ್ನು ಪ್ರಾರ್ಥಿಸುವಾಗಲೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಈ ಸ್ಥಳವನ್ನು ಕುರಿತು - ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವದು ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ನಿನ್ನನ್ನು ಪ್ರಾರ್ಥಿಸುವಾಗೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ನಿಮ್ಮ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀವು ಕೇಳುವ ಹಾಗೆ, ‘ಇಲ್ಲಿ ನನ್ನ ನಾಮಪ್ರಭಾವ ಇರುವುದು,’ ಎಂದು ನೀವು ಹೇಳಿದ ಈ ಆಲಯದ ಮೇಲೆ ರಾತ್ರಿ ಹಗಲೂ ನಿಮ್ಮ ಕಟಾಕ್ಷವಿರಲಿ. ಅಧ್ಯಾಯವನ್ನು ನೋಡಿ |
“ಹಗಲಿರುಳು ನಿನ್ನಲ್ಲಿ ಪ್ರಾರ್ಥಿಸುವ ನಿನ್ನ ಸೇವಕನನ್ನು ಕಣ್ತೆರೆದು ನೋಡು; ಅವನ ಪ್ರಾರ್ಥನೆಗೆ ಕಿವಿಗೊಟ್ಟು ಆಲಿಸು. ನಿನ್ನ ಸೇವಕರಾದ ಇಸ್ರೇಲರಿಗಾಗಿ ನಾನು ಪ್ರಾರ್ಥಿಸುತ್ತಿದ್ದೇನೆ. ಇಸ್ರೇಲರಾದ ನಾವು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ನಾನು ನಿನಗೆ ಅರಿಕೆ ಮಾಡುತ್ತೇನೆ. ನಾನೂ ನನ್ನ ತಂದೆಯ ಮನೆಯವರೂ ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ನಿನಗೆ ಅರಿಕೆ ಮಾಡುತ್ತೇವೆ.
‘ನಾನು ನನ್ನ ಜನರಾದ ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದೆನು. ಆದರೆ ನನ್ನನ್ನು ಘನಪಡಿಸಿಕೊಳ್ಳುವುದಕ್ಕಾಗಿ ಆಲಯವೊಂದನ್ನು ಕಟ್ಟಲು ಇಸ್ರೇಲಿನ ಕುಲಗಳಿಂದ ನಾನಿನ್ನೂ ಯಾವ ನಗರವನ್ನು ಆರಿಸಿಕೊಂಡಿರಲಿಲ್ಲ. ಇಸ್ರೇಲಿನ ಜನರನ್ನಾಳುವ ನಾಯಕನನ್ನು ನಾನಿನ್ನೂ ಆರಿಸಿಕೊಂಡಿರಲಿಲ್ಲ, ಆದರೆ ನಾನೀಗ ಜೆರುಸಲೇಮನ್ನು ನನಗೆ ಸನ್ಮಾನವನ್ನು ತರುವಂಥ ಸ್ಥಳವನ್ನಾಗಿ ಆರಿಸಿಕೊಂಡಿರುವೆ. ಇಸ್ರೇಲಿನ ನನ್ನ ಜನರನ್ನು ಆಳಲು ದಾವೀದನನ್ನು ನಾನು ಆರಿಸಿಕೊಂಡಿರುವೆ’ ಎಂದು ಹೇಳಿದ್ದನು.
ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.
ಆ ಕಾಲದಲ್ಲಿ ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ರಾಜನಾಗಿದ್ದನು. ಅವನು ರಾಜನಾದಾಗ ಅವನಿಗೆ ನಲವತ್ತೊಂದು ವರ್ಷ ವಯಸ್ಸಾಗಿತ್ತು. ರೆಹಬ್ಬಾಮನು ಜೆರುಸಲೇಮ್ ನಗರದಲ್ಲಿ ಹದಿನೇಳು ವರ್ಷ ಆಳಿದನು. ಈ ನಗರದಲ್ಲಿ ತಾನು ಸನ್ಮಾನಿಸಲ್ಪಡಬೇಕೆಂದು ಯೆಹೋವನು ಈ ನಗರವನ್ನು ಆರಿಸಿಕೊಂಡಿದ್ದನು. ಇಸ್ರೇಲಿನ ಎಲ್ಲಾ ನಗರಗಳಲ್ಲಿ ಈ ನಗರವನ್ನು ಆತನು ಆರಿಸಿಕೊಂಡಿದ್ದನು. ಅಮ್ಮೋನಿಯಳಾದ ನಯಮಾ ಎಂಬವಳು ರೆಹಬ್ಬಾಮನ ತಾಯಿ.