1 ಅರಸುಗಳು 8:30 - ಪರಿಶುದ್ದ ಬೈಬಲ್30 ಯೆಹೋವನೇ, ನಾನು ಮತ್ತು ಇಸ್ರೇಲಿನ ಜನರೆಲ್ಲರೂ ಈ ಸ್ಥಳದ ಕಡೆಗೆ ತಿರುಗಿ, ನಿನ್ನಲ್ಲಿ ಪ್ರಾರ್ಥಿಸುತ್ತೇವೆ. ದಯವಿಟ್ಟು ಆ ಪ್ರಾರ್ಥನೆಗಳನ್ನು ಲಾಲಿಸು. ನೀನು ಪರಲೋಕದಲ್ಲಿ ವಾಸಿಸುತ್ತಿರುವಿಯೆಂದು ನಮಗೆ ಗೊತ್ತಿದೆ. ನೀನು ನಮ್ಮ ಪ್ರಾರ್ಥನೆಗಳನ್ನು ಅಲ್ಲಿಯೇ ಕೇಳಿ, ನಮಗೆ ಕ್ಷಮೆಯನ್ನು ಅನುಗ್ರಹಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವುದಾದರೆ, ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ನಿಮ್ಮ ದಾಸನಾದ ನಾನಾಗಲಿ, ನಿಮ್ಮ ಪ್ರಜೆಗಳಾದ ಇಸ್ರಯೇಲರಾಗಲಿ, ಈ ಸ್ಥಳದ ಕಡೆಗೆ ತಿರುಗಿಕೊಂಡು ನಿಮ್ಮನ್ನು ಪ್ರಾರ್ಥಿಸಿದರೆ ನಿಮ್ಮ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವದಾದರೆ ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ ಕ್ಷಮೆಯನ್ನು ಅನುಗ್ರಹಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ನಿಮ್ಮ ಜನರಾದ ಇಸ್ರಾಯೇಲರ ಮತ್ತು ನಿಮ್ಮ ಸೇವಕನ ವಿಜ್ಞಾಪನೆಯನ್ನೂ ಕೇಳಿರಿ. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ, ನೀವು ವಾಸಮಾಡುವ ಸ್ಥಳವಾದ ಪರಲೋಕದಿಂದ ಕೇಳಿ, ಕ್ಷಮೆಯನ್ನು ದಯಪಾಲಿಸಿರಿ. ಅಧ್ಯಾಯವನ್ನು ನೋಡಿ |
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.
ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.