Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:32 - ಪರಿಶುದ್ದ ಬೈಬಲ್‌

32 ಪರಲೋಕದಲ್ಲಿರುವ ನೀನು ಅದನ್ನು ಕೇಳಿ, ಆ ವ್ಯಕ್ತಿಗೆ ತೀರ್ಪುನೀಡು. ಆ ವ್ಯಕ್ತಿಯು ತಪ್ಪಿತಸ್ಥನಾಗಿದ್ದರೆ, ಅವನು ತಪ್ಪಿತಸ್ಥನೆಂಬುದನ್ನು ನಮಗೆ ತೋರಿಸು. ಅವನು ನಿರಪರಾಧಿಯಾಗಿದ್ದರೆ ಅವನು ತಪ್ಪಿತಸ್ಥನಲ್ಲವೆಂಬುದನ್ನೂ ದಯವಿಟ್ಟು ನಮಗೆ ತೋರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಪರಲೋಕದಲ್ಲಿರುವ ನೀನು ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು. ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ, ಅವನು ಅಪರಾಧಿಯೆಂದು ತೋರಿಸು. ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದೂ ತೋರಿಸಿಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಪರಲೋಕದಲ್ಲಿರುವ ನೀವು ಅದನ್ನು ಕೇಳಿ ನಿಮ್ಮ ದಾಸರಾದ ಭಕ್ತರ ವ್ಯಾಜ್ಯವನ್ನು ತೀರಿಸಿರಿ; ದುಷ್ಟನನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿರಿ; ಅವನು ಅಪರಾಧಿಯೆಂದು ತೋರಿಸಿಕೊಡಿ; ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡಿ..

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಪರಲೋಕದಲ್ಲಿರುವ ನೀನು ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು; ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ ಅವನು ಅಪರಾಧಿಯೆಂದೂ ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದೂ ತೋರಿಸಿಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ನೀವೇ ಆ ಅಪರಾಧಿಯನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿ, ಅವನು ಅಪರಾಧಿಯೆಂದು ತೋರಿಸಿಕೊಡಿರಿ. ನಿರ್ದೋಷಿಯಾಗಿದ್ದರೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡುವ ಹಾಗೆ ಪರಲೋಕದಲ್ಲಿರುವ ನೀವು ಅದನ್ನು ಕೇಳಿ, ನಿಮ್ಮ ಸೇವಕರ ನ್ಯಾಯವನ್ನು ತೀರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:32
22 ತಿಳಿವುಗಳ ಹೋಲಿಕೆ  

“ನಿಮ್ಮಲ್ಲಿ ಯಾರಿಗಾದರೂ ಇಬ್ಬರಿಗೆ ವಾಗ್ವಾದವಿದ್ದಲ್ಲಿ ಅವರು ಅದನ್ನು ನ್ಯಾಯಸ್ಥಾನಕ್ಕೆ ತೆಗೆದುಕೊಂಡು ಹೋಗಲಿ. ಅಲ್ಲಿ ನ್ಯಾಯಾಧೀಶರು ಯಾರು ಸರಿ ಯಾರು ತಪ್ಪು ಎಂದು ತೀರ್ಮಾನಿಸುವರು.


ಯಾರು ಪಾಪ ಮಾಡುತ್ತಾರೋ ಅವರೇ ಮರಣಶಿಕ್ಷೆ ಹೊಂದುವರು. ತಂದೆಯ ಪಾಪಗಳ ಪ್ರತಿಫಲಗಳಲ್ಲಿ ಯಾವುದನ್ನೂ ಮಗನು ಹೊತ್ತುಕೊಳ್ಳುವುದಿಲ್ಲ. ಮತ್ತು ಮಗನ ಪಾಪಗಳ ಪ್ರತಿಫಲಗಳಲ್ಲಿ ಯಾವುದನ್ನೂ ತಂದೆಯು ಹೊತ್ತುಕೊಳ್ಳುವದಿಲ್ಲ. ಒಬ್ಬ ಒಳ್ಳೆ ಮನುಷ್ಯನ ನೀತಿಯು ಅವನಿಗೇ ಸೇರಿದ್ದು. ಕೆಟ್ಟ ಮನುಷ್ಯನ ದುಷ್ಟತ್ವವೂ ಆ ಕೆಟ್ಟ ಮನುಷ್ಯನಿಗೆ ಸೇರಿದ್ದಾಗಿದೆ.


ಆ ಕೆಟ್ಟ ಮಗನಿಂದ ಯಾರಾದರೂ ಸಾಲ ತೆಗೆದುಕೊಂಡಿದ್ದರೆ ಅವನು ಅವರಿಂದ ಬಡ್ಡಿಯನ್ನು ಕಡ್ಡಾಯವಾಗಿ ವಸೂಲು ಮಾಡಿದ್ದಿರಬಹುದು. ಹೀಗಿರುವದರಿಂದ ಆ ಕೆಟ್ಟ ಮಗನು ಹೆಚ್ಚುಕಾಲ ಬದುಕುವುದಿಲ್ಲ. ಅವನು ಭಯಂಕರ ಕೃತ್ಯಗಳನ್ನು ಮಾಡಿರುವದರಿಂದ ಕೊಲ್ಲಲ್ಪಡುವನು. ಅವನ ಮರಣಕ್ಕೆ ಅವನೇ ಜವಾಬ್ದಾರನು.


ಯೆಹೋವನು ಸಾವಿರಾರು ತಲೆಗಳವರೆಗೆ ತನ್ನ ದಯೆ ತೋರಿಸುತ್ತಾನೆ. ಜನರು ಮಾಡುವ ಪಾಪಗಳನ್ನು ಯೆಹೋವನು ಕ್ಷಮಿಸುತ್ತಾನೆ. ಆದರೆ ಅಪರಾಧಿಗಳನ್ನು ಶಿಕ್ಷಿಸುವುದಕ್ಕೆ ಆತನು ಮರೆಯುವುದಿಲ್ಲ. ಯೆಹೋವನು ಅಪರಾಧಿಗಳನ್ನು ಶಿಕ್ಷಿಸುವನು ಮತ್ತು ಅವರ ಅಪರಾಧದ ಫಲವು ಅವರ ಮಕ್ಕಳ ಮೇಲೂ ಮೊಮ್ಮಕ್ಕಳ ಮೇಲೂ ಮತ್ತು ಮರಿಮೊಮ್ಮಕ್ಕಳ ಮೇಲೂ ಬರುವಂತೆ ಮಾಡುವನು” ಎಂದು ಹೇಳಿದನು.


ನಾನು ಧರ್ಮಶಾಸ್ತ್ರವನ್ನು ತಿಳಿದುಕೊಳ್ಳುವುದಕ್ಕಿಂತ ಮೊದಲು ಧರ್ಮಶಾಸ್ತ್ರವಿಲ್ಲದವನಾಗಿ ಜೀವಂತವಾಗಿದ್ದೆನು. ಆದರೆ ಧರ್ಮಶಾಸ್ತ್ರದ ಆಜ್ಞೆಯು ನನ್ನ ಬಳಿಗೆ ಬಂದಾಗ, ಪಾಪವು ಜೀವಿಸತೊಡಗಿತು.


ಧರ್ಮಶಾಸ್ತ್ರವನ್ನು ಕೇಳಿದ ಮಾತ್ರಕ್ಕೆ ಜನರು ನೀತಿವಂತರಾಗುವುದಿಲ್ಲ. ಧರ್ಮಶಾಸ್ತ್ರ ಹೇಳುವ ಪ್ರತಿಯೊಂದಕ್ಕೂ ವಿಧೇಯರಾಗುವ ಜನರನ್ನು ಧರ್ಮಶಾಸ್ತ್ರವು ನೀತಿವಂತರನ್ನಾಗಿ ಮಾಡುತ್ತದೆ.


ಇಸ್ರೇಲರೇ, ನಾನು ಪ್ರತಿಯೊಬ್ಬನನ್ನು ಅವನವನ ಕಾರ್ಯಗಳ ಪ್ರಕಾರ ನ್ಯಾಯತೀರಿಸುವೆನು” ಎಂದು ಹೇಳಿದನು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆದ್ದರಿಂದ ನನ್ನ ಬಳಿಗೆ ಬನ್ನಿರಿ, ದುಷ್ಟತನ ಮಾಡುವದನ್ನು ನಿಲ್ಲಿಸಿರಿ, ಪಾಪವು ನಿಮ್ಮ ನಾಶನಕ್ಕೆ ಕಾರಣವಾಗದಂತೆ ಎಚ್ಚರಿಕೆಯಾಗಿರಿ.


ನಿರಪರಾಧಿಗಾಗುವ ದಂಡನೆಯೂ ಅಪರಾಧಿಗಾಗುವ ಬಿಡುಗಡೆಯೂ ಯೆಹೋವನಿಗೆ ಅಸಹ್ಯ.


ಆದ್ದರಿಂದ ನೀವು ನಿಮ್ಮ ದುರ್ನಡತೆಯ ಫಲಗಳನ್ನು ಅನುಭವಿಸುವಿರಿ. ನೀವು ಬೇರೆಯವರಿಗೆ ಮಾಡಿದ ಕುಯುಕ್ತಿಗಳನ್ನೇ ಹೊಂದುವಿರಿ.


ಅವಳು ಅಶುದ್ಧಳಾಗಿದ್ದರೆ ಮತ್ತು ತನ್ನ ಗಂಡನಿಗೆ ವಿರುದ್ಧವಾಗಿ ಪಾಪಮಾಡಿದ್ದರೆ, ನೀರು ಅವಳಿಗೆ ಹಾನಿಯನ್ನು ಉಂಟುಮಾಡುವುದು, ನೀರು ಅವಳೊಳಗೆ ಹೋಗಿ ಅವಳಿಗೆ ಮಹಾಸಂಕಟವನ್ನು ಉಂಟುಮಾಡುವುದು. ನೀರು ಅವಳನ್ನು ಆ ಕೂಡಲೇ ಬಂಜೆಯನ್ನಾಗಿ ಮಾಡುವುದು. ಅವಳು ತನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳಾಗಿರುವಳು.


“ನೀವು ಮೋಸದ ಕಾರ್ಯಕ್ಕೆ ದೂರವಿರಬೇಕು. ನಿರಪರಾಧಿಯೂ ನೀತಿವಂತನೂ ಆಗಿರುವ ವ್ಯಕ್ತಿಗೆ ಮರಣದಂಡನೆ ವಿಧಿಸಕೂಡದು. ಅಂಥ ದುಷ್ಟಕಾರ್ಯ ಮಾಡಿದವನಿಗೆ ನಾನು ದಂಡನೆಯನ್ನು ವಿಧಿಸೇ ವಿಧಿಸುವೆನು.


ನಾನು ನೀತಿಗನುಸಾರವಾಗಿ ನಡೆದುಕೊಂಡಿದ್ದರಿಂದ ಯೆಹೋವನು ನನಗೆ ಪ್ರತಿಫಲವನ್ನು ಕೊಟ್ಟನು. ನಾನು ನಿರ್ದೋಷಿಯಾಗಿದ್ದರಿಂದ ಆತನು ನನಗೆ ಒಳ್ಳೆಯದನ್ನೇ ಮಾಡಿದನು.


ಯೆಹೋವನೇ, ನಿನ್ನನ್ನು ನಿಜವಾಗಿಯೂ ಪ್ರೀತಿಸುವವರನ್ನು ನೀನು ಶಾಶ್ವತವಾದ ಪ್ರೀತಿಯಿಂದ ಪ್ರೀತಿಸುವೆ. ನಿನಗೆ ನಂಬಿಗಸ್ತರಾಗಿರುವವರಿಗೆ ನೀನೂ ನಂಬಿಗಸ್ತನಾಗಿರುವೆ.


ಇಸ್ರೇಲರು ಧರ್ಮದಲ್ಲಿ ನಡೆಯುವಂತೆ ಯೆಹೋವನು ಮಾಡುವನು. ಜನರು ಯೆಹೋವನ ಬಗ್ಗೆ ಬಹಳವಾಗಿ ಹೆಚ್ಚಳಪಡುವರು.


ಒಬ್ಬ ಮನುಷ್ಯನು ಬೇರೊಬ್ಬನ ವಿರುದ್ಧ ಅಪರಾಧ ಮಾಡಿದರೆ, ಯೆಹೋವನು ಅವನಿಗೆ ಸಹಾಯ ಮಾಡಬಹುದು, ಆದರೆ ಒಬ್ಬ ಮನುಷ್ಯನು ಯೆಹೋವನ ವಿರುದ್ಧವೇ ಅಪರಾಧ ಮಾಡಿದರೆ, ಆಗ ಅವನಿಗೆ ಸಹಾಯ ಮಾಡುವವರು ಯಾರು?” ಎಂದು ಬುದ್ಧಿಮಾತು ಹೇಳಿದನು. ಆದರೆ ಏಲಿಯ ಮಾತನ್ನು ಅವನ ಮಕ್ಕಳು ಕೇಳಲಿಲ್ಲ. ಆದ್ದರಿಂದ ಯೆಹೋವನು ಏಲಿಯ ಮಕ್ಕಳನ್ನು ಕೊಲ್ಲಲು ನಿರ್ಧರಿಸಿದನು.


ಯೋವಾಬನು ತನಗಿಂತಲೂ ಬಹಳಷ್ಟು ಉತ್ತಮರಾದ ಇಬ್ಬರನ್ನು ಕೊಂದುಹಾಕಿದನು. ಅವರು ಯಾರೆಂದರೆ, ನೇರನ ಮಗನಾದ ಅಬ್ನೇರ ಮತ್ತು ಯೆತೆರನ ಮಗನಾದ ಅಮಾಸ. ಅಬ್ನೇರನು ಇಸ್ರೇಲಿನ ಸೇನಾಧಿಪತಿಯಾಗಿದ್ದನು; ಅಮಾಸನು ಯೆಹೂದದ ಸೇನಾಧಿಪತಿಯಾಗಿದ್ದನು. ಯೋವಾಬನು ಅವರನ್ನು ಕೊಂದನೆಂಬುದು ಆ ಸಮಯದಲ್ಲಿ ನನ್ನ ತಂದೆಯಾದ ದಾವೀದನಿಗೆ ತಿಳಿಯಲಿಲ್ಲ. ಯೋವಾಬನು ಅವರನ್ನು ಕೊಂದದ್ದರಿಂದ ಯೆಹೋವನು ಅವನನ್ನು ದಂಡಿಸುತ್ತಾನೆ.


ಅವರನ್ನು ಕೊಂದ ಅಪರಾಧವು ಯೋವಾಬನ ಮೇಲೆಯೂ ಅವನ ಕುಟುಂಬದ ಮೇಲೆಯೂ ಶಾಶ್ವತವಾಗಿರಲಿ. ಆದರೆ ದಾವೀದನನ್ನೂ ಅವನ ಸಂತತಿಯವರನ್ನೂ ಅವನ ಸಿಂಹಾಸನವನ್ನೂ ಯೆಹೋವನು ಶಾಶ್ವತವಾಗಿ ಆಶೀರ್ವದಿಸಲಿ” ಎಂದು ಹೇಳಿದನು.


ಹಾಮಾನನ ಕುತಂತ್ರವನ್ನು ಎಸ್ತೇರ್ ರಾಣಿಯು ರಾಜನ ಸಂಗಡ ಮಾತಾಡುವುದರ ಮೂಲಕ ನಿರರ್ಥಕಗೊಳಿಸಿ ಅವನಿಗೂ ಅವನ ಕುಟುಂಬಕ್ಕೂ ಮರಣವಾಗುವಂತೆ ಮಾಡಿದಳು. ಹಾಮಾನನೂ ಅವನ ಗಂಡುಮಕ್ಕಳೂ ಗಲ್ಲಿಗೇರಿಸಲ್ಪಟ್ಟರು.


ಕೆಟ್ಟವರನ್ನು ದಂಡಿಸು, ಒಳ್ಳೆಯವರಿಗೆ ಸಹಾಯಮಾಡು. ದೇವರೇ ನೀನು ಒಳ್ಳೆಯವನು; ಮನುಷ್ಯರ ಅಂತರಾಳವನ್ನು ನೀನು ಪರಿಶೋಧಿಸಬಲ್ಲೆ.


ಅವರಿಗೆ ನಾನು ಕನಿಕರ ತೋರಿಸುವುದಿಲ್ಲ. ಅವರಿಗಾಗಿ ನಾನು ದುಃಖಿಸುವುದಿಲ್ಲ. ಅವರು ತಾವೇ ಇದನ್ನು ತಮ್ಮ ಮೇಲೆ ಬರಮಾಡಿಕೊಂಡರು. ಅವರು ಹೊಂದಲು ಯೋಗ್ಯವಾದ ಶಿಕ್ಷೆಯನ್ನೇ ನಾನು ಕೊಡುತ್ತಿರುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು