1 ಅರಸುಗಳು 8:34 - ಪರಿಶುದ್ದ ಬೈಬಲ್34 ಪರಲೋಕದಲ್ಲಿಯೇ ಅವರ ಪ್ರಾರ್ಥನೆಗಳನ್ನು ಆಲಿಸಿ ನಿನ್ನ ಜನರಾದ ಇಸ್ರೇಲರ ಪಾಪಗಳನ್ನು ಕ್ಷಮಿಸಿ ಅವರ ದೇಶದಲ್ಲಿ ಅವರು ಮತ್ತೆ ನೆಲೆಸಲು ಅವಕಾಶ ಮಾಡಿಕೊಡು. ಈ ದೇಶವನ್ನು ಅವರ ಪೂರ್ವಿಕರಿಗೆ ದಯಪಾಲಿಸಿದವನು ನೀನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಪರಲೋಕದಲ್ಲಿರುವ ನೀನು ಅದನ್ನು ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ಪೂರ್ವಿಕರಿಗೆ ನೀನು ಕೊಟ್ಟ ದೇಶಕ್ಕೆ ಅವರನ್ನು ಮರಳಿ ಬರುವಂತೆಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಪರಲೋಕದಲ್ಲಿರುವ ನೀವು ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ಪಿತೃಗಳಿಗೆ ನೀವು ಕೊಟ್ಟ ಈ ನಾಡಿಗೆ ಅವರನ್ನು ಮರಳಿಬರಮಾಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಪರಲೋಕದಲ್ಲಿರುವ ನೀನು ಲಾಲಿಸಿ ಅವರ ಪಾಪಗಳನ್ನು ಕ್ಷವಿುಸಿ ಅವರ ಪಿತೃಗಳಿಗೆ ನೀನು ಕೊಟ್ಟ ದೇಶಕ್ಕೆ ಅವರನ್ನು ತಿರಿಗಿ ಬರಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆಗ ನೀವು ಪರಲೋಕದಿಂದ ಕೇಳಿ, ನಿಮ್ಮ ಜನರಾದ ಇಸ್ರಾಯೇಲರ ಪಾಪವನ್ನು ಮನ್ನಿಸಿ, ನೀವು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡಿರಿ. ಅಧ್ಯಾಯವನ್ನು ನೋಡಿ |
“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.
‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.