Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:35 - ಪರಿಶುದ್ದ ಬೈಬಲ್‌

35 “ಅವರು ಕೆಲವು ಸಂದರ್ಭಗಳಲ್ಲಿ ನಿನ್ನ ವಿರುದ್ಧವಾಗಿ ಪಾಪಮಾಡುತ್ತಾರೆ. ಆಗ ನೀನು ಅವರ ಭೂಮಿಯ ಮೇಲೆ ಬೀಳುವ ಮಳೆಯನ್ನು ನಿಲ್ಲಿಸುವೆ. ಆಗ ಅವರು ಈ ಸ್ಥಳದ ಕಡೆಗೆ ತಿರುಗಿ ಪ್ರಾರ್ಥಿಸುತ್ತಾ, ನಿನ್ನ ಹೆಸರನ್ನು ಕೊಂಡಾಡುವರು. ನೀನು ಅವರನ್ನು ಬಳಲಿಸುವೆ. ಅವರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಟ್ಟು ಅವುಗಳಿಗೆ ವಿಮುಖರಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 “ಅವರ ಪಾಪಗಳ ನಿಮಿತ್ತವಾಗಿ ಆಕಾಶವು ಮಳೆಗರೆಯದಂತೆ ಮುಚ್ಚಿಕೊಂಡಾಗ ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ನಿನ್ನ ನಾಮವನ್ನು ಸ್ತುತಿಸಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 “ಅವರ ಪಾಪಗಳ ನಿಮಿತ್ತ ಆಕಾಶವು ಮಳೆಗರೆಯದೆ ತೆರೆ ಮುಚ್ಚಿಕೊಂಡಾಗ, ಅವರು ತಮ್ಮ ಪಾಪಗಳನ್ನು ಬಿಟ್ಟು, ತಮ್ಮನ್ನು ತಗ್ಗಿಸಿದವರು ನೀವೇ ಎಂದು ನಿಮ್ಮ ನಾಮವನ್ನು ಎತ್ತಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅವರ ಪಾಪಗಳ ನಿವಿುತ್ತವಾಗಿ ಆಕಾಶವು ಮಳೆಗರೆಯದಂತೆ ಮುಚ್ಚಿಕೊಂಡಾಗ ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ನಿನ್ನ ನಾಮವನ್ನು ಎತ್ತಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ಅವರು ನಿಮಗೆ ವಿರೋಧವಾಗಿ ಪಾಪವನ್ನು ಮಾಡಿದ್ದರಿಂದ, ನೀವು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ಕುಂದಿಸಿದಾಗ ಅವರು ತಮ್ಮ ಪಾಪವನ್ನು ಬಿಟ್ಟು ಈ ಸ್ಥಳದ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ ಪ್ರಾರ್ಥಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:35
30 ತಿಳಿವುಗಳ ಹೋಲಿಕೆ  

“ಇಸ್ರೇಲಿನ ನಿನ್ನ ಜನರೂ ಕೆಲವು ಸಂದರ್ಭಗಳಲ್ಲಿ ನಿನ್ನ ವಿರುದ್ಧವಾಗಿ ಪಾಪಮಾಡುತ್ತಾರೆ. ಅವರನ್ನು ಅವರ ಶತ್ರುಗಳು ಸೋಲಿಸುತ್ತಾರೆ. ಆಗ ಜನರು ನಿನ್ನ ಹತ್ತಿರಕ್ಕೆ ಹಿಂದಿರುಗಿ ನಿನ್ನನ್ನು ಸ್ತುತಿಸುತ್ತಾರೆ. ಈ ಆಲಯದಲ್ಲಿ ಜನರು ನಿನಗೆ ಪ್ರಾರ್ಥಿಸುತ್ತಾರೆ.


ಇಲ್ಲವಾದರೆ, ಯೆಹೋವನು ನಿಮ್ಮ ಮೇಲೆ ಬಹಳ ಕೋಪಗೊಳ್ಳುವನು; ಆಕಾಶವನ್ನು ಮುಚ್ಚಿ ಮಳೆಬೀಳದಂತೆ ಮಾಡುವನು. ಆಗ ಹೊಲದಲ್ಲಿ ಧಾನ್ಯ ಬೆಳೆಯುವುದಿಲ್ಲ. ಆಗ ಆತನು ಕೊಡುವ ಒಳ್ಳೆಯ ದೇಶದಲ್ಲಿಯೇ ಊಟಕ್ಕಿಲ್ಲದೆ ಸಾಯುವಿರಿ.


ನಿಮ್ಮ ಗರ್ವಕ್ಕೆ ಕಾರಣವಾದ ಬಲಿಷ್ಠವಾದ ಪಟ್ಟಣಗಳನ್ನು ನಾಶಮಾಡುವೆ. ಆಕಾಶವು ಮಳೆಗರೆಯುವುದಿಲ್ಲ. ಭೂಮಿಯು ಬೆಳೆಯನ್ನು ಫಲಿಸುವುದಿಲ್ಲ.


ಈ ಸಾಕ್ಷಿಗಳು ತಮ್ಮ ಪ್ರವಾದನೆಯ ಕಾಲದಲ್ಲಿ ಆಕಾಶದಿಂದ ಸುರಿಯುವ ಮಳೆಯನ್ನು ನಿಲ್ಲಿಸಲೂ ನೀರನ್ನು ರಕ್ತವನ್ನಾಗಿಸಲೂ ಭೂಮಿಗೆ ಎಲ್ಲಾ ವಿಧವಾದ ವಿಪತ್ತುಗಳನ್ನು ಕಳುಹಿಸಲೂ ಅಧಿಕಾರವನ್ನು ಹೊಂದಿರುತ್ತಾರೆ. ಅವರು ತಮಗೆ ಇಷ್ಟ ಬಂದಷ್ಟು ಸಲ ಹೀಗೆ ಮಾಡಶಕ್ತರಾಗಿದ್ದಾರೆ.


“ನಾನು ಹೇಳುವುದು ಸತ್ಯ. ಎಲೀಯನ ಕಾಲದಲ್ಲಿ ಮೂರುವರೆ ವರ್ಷಗಳವರೆಗೆ ಇಸ್ರೇಲ್ ದೇಶದಲ್ಲಿ ಮಳೆ ಬೀಳಲಿಲ್ಲ. ದೇಶದ ಯಾವ ಕಡೆಯಲ್ಲಿಯೂ ಆಹಾರವಿರಲಿಲ್ಲ. ಆ ಸಮಯದಲ್ಲಿ ಇಸ್ರೇಲಿನಲ್ಲಿ ಅನೇಕ ವಿಧವೆಯರು ಇದ್ದರು.


ಗಾದನು ದಾವೀದನ ಬಳಿಗೆ ಹೋಗಿ, “ಈ ಮೂರು ಶಿಕ್ಷೆಗಳಲ್ಲಿ ಒಂದನ್ನು ಆರಿಸಿಕೊ: ನಿನಗೆ ಮತ್ತು ನಿನ್ನ ದೇಶಕ್ಕೆ ಏಳು ವರ್ಷಗಳ ಕಾಲ ಬರಗಾಲ ಬರಬೇಕೇ? ಅಥವಾ ನಿನ್ನ ಶತ್ರುಗಳು ನಿನ್ನನ್ನು ಮೂರು ತಿಂಗಳ ಕಾಲ ಅಟ್ಟಿಸಬೇಕೇ? ಅಥವಾ ಮೂರು ದಿನಗಳ ಕಾಲ ನಿನ್ನ ದೇಶದಲ್ಲಿ ರೋಗರುಜಿನಗಳು ವ್ಯಾಪಿಸಬೇಕೇ? ಇವುಗಳ ಬಗ್ಗೆ ಯೋಚಿಸು, ನನ್ನನ್ನು ಕಳುಹಿಸಿದ ಯೆಹೋವನಿಗೆ ನಾನು ಏನು ಹೇಳಬೇಕೆಂಬುದನ್ನು ನೀನು ತೀರ್ಮಾನಿಸು” ಎಂದು ಹೇಳಿದನು.


ದೇವರು ತಮಗೆ ತೋರುವ ಕರುಣೆಗಾಗಿ ಯೆಹೂದ್ಯರಲ್ಲದವರು ಆತನನ್ನು ಮಹಿಮೆಪಡಿಸಲೆಂದು ಕ್ರಿಸ್ತನು ಯೆಹೂದ್ಯರ ಸೇವಕನಾದನು. ಪವಿತ್ರ ಗ್ರಂಥದಲ್ಲಿ ಈ ರೀತಿ ಬರೆಯಲ್ಪಟ್ಟಿದೆ: “ಆದ್ದರಿಂದ ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ನಾನು ನಿನ್ನನ್ನು ಸ್ತುತಿಸುವೆನು: ನಾನು ನಿನ್ನ ಹೆಸರನ್ನು ಸಂಕೀರ್ತಿಸುವೆನು.”


“ಯೇಸುವೇ ಪ್ರಭು”ವೆಂದು ನಿನ್ನ ಬಾಯಿಯ ಮೂಲಕ ಹೇಳುವುದಾದರೆ ಮತ್ತು ಯೇಸುವನ್ನು ಸತ್ತವರೊಳಗಿಂದ ಜೀವಂತನಾಗಿ ಎಬ್ಬಿಸಿದವನು ದೇವರೇ ಎಂದು ನಿನ್ನ ಹೃದಯದಲ್ಲಿ ನಂಬುವುದಾದರೆ, ನೀನು ರಕ್ಷಣೆ ಹೊಂದುವೆ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವುದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು.


ಇಸ್ರೇಲೇ, ನೀನು ಜಾರಿಬಿದ್ದು ದೇವರಿಗೆ ವಿರುದ್ಧವಾಗಿ ಪಾಪಮಾಡಿದಿ. ನಿನ್ನ ದೇವರಾದ ಯೆಹೋವನ ಬಳಿಗೆ ಹಿಂದಿರುಗಿ ಬಾ.


“ನರಪುತ್ರನೇ, ನನಗೆ ಅಪನಂಬಿಗಸ್ತರಾಗಿದ್ದು ನನ್ನ ವಿರುದ್ಧ ಪಾಪಮಾಡುವ ಯಾವ ದೇಶವನ್ನಾದರೂ ನಾನು ದಂಡಿಸುತ್ತೇನೆ. ನಾನು ಅವರ ಆಹಾರ ಸರಬರಾಜನ್ನು ನಿಲ್ಲಿಸುತ್ತೇನೆ. ನಾನು ಕ್ಷಾಮವನ್ನು ಕಳುಹಿಸಿ ಅವರ ಜನರನ್ನೂ ಪ್ರಾಣಿಗಳನ್ನೂ ನಾಶಮಾಡುವೆ.


ದೇವರು ಜನರನ್ನು ಶಿಕ್ಷಿಸಿದರೂ ಅವರು ಪಾಪ ಮಾಡುವದನ್ನು ನಿಲ್ಲಿಸುವದಿಲ್ಲ. ಅವರು ಆತನ ಬಳಿಗೆ ಹಿಂದಿರುಗಿಬರುವದಿಲ್ಲ. ಸರ್ವಶಕ್ತನಾದ ಯೆಹೋವನನ್ನು ಅವರು ಹಿಂಬಾಲಿಸುವುದಿಲ್ಲ.


“ನಿನ್ನ ಜನರಾದ ಇಸ್ರೇಲರು ನಿನಗೆ ವಿರುದ್ಧವಾಗಿ ಪಾಪಮಾಡಿದಾಗ ನೀನು ಆಕಾಶದಿಂದ ಮಳೆ ಬೀಳದಂತೆ ತಡೆದಾಗ ನಿನ್ನ ಜನರು ಪಶ್ಚಾತ್ತಾಪಪಟ್ಟು ಈ ದೇವಾಲಯದ ಕಡೆಗೆ ತಿರುಗಿ ನಿನ್ನನ್ನು ಪ್ರಾರ್ಥಿಸಿ ತಮ್ಮ ಪಾಪಗಳನ್ನು ಬಿಟ್ಟುಬಿಟ್ಟರೆ


“ನಿನ್ನ ಜನರಾದ ಇಸ್ರೇಲರು ನಿನಗೆ ವಿರುದ್ಧವಾಗಿ ಪಾಪಮಾಡಿದಾಗ ವೈರಿಗಳು ಬಂದು ಅವರನ್ನು ಯುದ್ಧದಲ್ಲಿ ಸೋಲಿಸಿದರೂ ನಿನ್ನ ಜನರು ನಿನ್ನ ಕಡೆಗೆ ತಿರುಗಿ ತಮ್ಮ ಪಾಪಗಳನ್ನು ಒಪ್ಪಿಕೊಂಡು ಈ ದೇವಾಲಯಕ್ಕೆ ಬಂದು ನಿನ್ನ ಹೆಸರನ್ನು ಹೇಳಿಕೊಂಡು ನಿನಗೆ ಪ್ರಾರ್ಥಿಸಿ ಬೇಡಿಕೊಂಡರೆ


ಎಲೀಯನು ಗಿಲ್ಯಾದಿನ ತಿಷ್ಬೀ ಪಟ್ಟಣದ ಒಬ್ಬ ಪ್ರವಾದಿ. ಎಲೀಯನು ರಾಜನಾದ ಅಹಾಬನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಸೇವಕನಾಗಿದ್ದೇನೆ. ಮುಂದಿನ ಕೆಲವು ವರ್ಷಗಳವರೆಗೆ ಹಿಮವಾಗಲಿ ಮಳೆಯಾಗಲಿ ಬೀಳುವುದಿಲ್ಲವೆಂದು ನಾನು ಆತನ ಹೆಸರಿನ ಮೇಲೆ ಪ್ರಮಾಣ ಮಾಡುತ್ತೇನೆ. ನಾನು ಬೀಳುವಂತೆ ಮಳೆಗೆ ಆಜ್ಞಾಪಿಸಿದರೆ ಮಾತ್ರ ಅದು ಬೀಳುತ್ತದೆ” ಎಂದು ಹೇಳಿದನು.


ಯೆಹೋವನು ತನ್ನ ಆಶೀರ್ವಾದಗಳೆಂಬ ಭಂಡಾರವನ್ನೇ ನಿಮಗೆ ತೆರೆಯುವನು. ಕಾಲಕ್ಕೆ ತಕ್ಕಹಾಗೆ ಮಳೆ ಸುರಿಯುವಂತೆ ಮಾಡುವನು; ನಿಮ್ಮ ಕಾರ್ಯವನ್ನೆಲ್ಲಾ ಸಫಲ ಮಾಡುವನು. ಇತರ ದೇಶಗಳಿಗೆ ಸಾಲ ಕೊಡಲು ನಿಮ್ಮಲ್ಲಿ ಹಣವಿರುವುದು; ಬೇರೆಯವರಿಂದ ಸಾಲ ತೆಗೆದುಕೊಳ್ಳುವ ಅವಶ್ಯಕತೆ ನಿಮಗೆ ಬಾರದು.


“ಆದ್ದರಿಂದ ಜಾಗರೂಕರಾಗಿರಿ. ಬೇರೆ ದೇವರುಗಳನ್ನು ಸೇವೆಮಾಡಿ ಆರಾಧಿಸಬೇಡಿ.


ದಾವೀದನು ಜನರನ್ನು ಲೆಕ್ಕಹಾಕಿದ ನಂತರ ಅವಮಾನಗೊಂಡಂತೆ ಭಾವಿಸಿದನು. ದಾವೀದನು ಯೆಹೋವನಿಗೆ, “ನಾನು ಈ ಕಾರ್ಯವನ್ನು ಮಾಡಿ ಮಹಾಪಾಪಕ್ಕೆ ಒಳಗಾದೆನು! ಯೆಹೋವನೇ, ನನ್ನ ಪಾಪಕ್ಕಾಗಿ ನನ್ನನ್ನು ಕ್ಷಮಿಸೆಂದು ಬೇಡುತ್ತೇನೆ. ನಾನು ಬಹಳ ಮೂರ್ಖನಾಗಿಬಿಟ್ಟೆ” ಎಂದು ಹೇಳಿದನು.


ಪರಲೋಕದಲ್ಲಿಯೇ ಅವರ ಪ್ರಾರ್ಥನೆಗಳನ್ನು ಆಲಿಸಿ ನಿನ್ನ ಜನರಾದ ಇಸ್ರೇಲರ ಪಾಪಗಳನ್ನು ಕ್ಷಮಿಸಿ ಅವರ ದೇಶದಲ್ಲಿ ಅವರು ಮತ್ತೆ ನೆಲೆಸಲು ಅವಕಾಶ ಮಾಡಿಕೊಡು. ಈ ದೇಶವನ್ನು ಅವರ ಪೂರ್ವಿಕರಿಗೆ ದಯಪಾಲಿಸಿದವನು ನೀನೇ.


ಆತನು ಮಳೆಯನ್ನು ತಡೆಹಿಡಿದರೆ ಭೂಮಿಗೆ ಬರಗಾಲವಾಗುವುದು. ಮಳೆಯನ್ನು ಸುರಿಸಿದರೆ ಭೂಮಿಯ ಮೇಲೆ ಪ್ರವಾಹವಾಗುವುದು.


ನಾನು ಅದನ್ನು ಬೆಂಗಾಡಾಗಿ ಮಾಡುವೆನು. ಅದರಲ್ಲಿರುವ ಸಸಿಗಳನ್ನು ಯಾರೂ ಲಕ್ಷಿಸರು. ತೋಟದಲ್ಲಿ ಯಾರೂ ಕೆಲಸ ಮಾಡುವದಿಲ್ಲ. ಮುಳ್ಳುಗಳೂ ಹಣಜಿಗಳೂ ಅಲ್ಲಿ ಬೆಳೆಯುವವು. ಅಲ್ಲಿ ಮಳೆಗರೆಯದಂತೆ ಮೋಡಗಳಿಗೆ ಆಜ್ಞಾಪಿಸುವೆನು.”


ಅದಕ್ಕಾಗಿಯೇ ಆಕಾಶವು ಮಂಜನ್ನು ಸುರಿಸುವುದಿಲ್ಲ. ಭೂಮಿಯು ಪೈರನ್ನು ಬೆಳೆಸುವದಿಲ್ಲ.”


ರಾಜನೂ ಸರ್ವಶಕ್ತನೂ ಆಗಿರುವ ಯೆಹೋವನನ್ನು ಆರಾಧಿಸಲು ಭೂಲೋಕದ ಕುಟುಂಬಗಳ ಯಾವ ಜನರಾದರೂ ಜೆರುಸಲೇಮಿಗೆ ಹೋಗದಿದ್ದಲ್ಲಿ ಅವರ ರಾಜ್ಯಗಳಲ್ಲಿ ಮಳೆಗೆರೆಯುವದು ನಿಂತುಹೋಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು