1 ಅರಸುಗಳು 8:37 - ಪರಿಶುದ್ದ ಬೈಬಲ್37 “ಭೂಮಿಯು ಬಹಳ ಬರಡಾಗಿ ಅದರ ಮೇಲೆ ಬೆಳಗಳೇ ಬೆಳೆಯದಂತಾಗಬಹುದು, ಬಹುಶಃ ಘೋರವಾದ ವ್ಯಾಧಿಗಳು ಜನರಲ್ಲಿ ಹರಡಬಹುದು. ಬೆಳೆಯುವ ಬೆಳೆಗಳೆಲ್ಲ ಬಹುಶಃ ಕ್ರಿಮಿಕೀಟಗಳಿಂದ ನಾಶವಾಗಬಹುದು. ಇಲ್ಲವೆ ನಿನ್ನ ಜನರ ಮೇಲೆ ಕೆಲವು ನಗರಗಳಲ್ಲಿ ಅವರ ಶತ್ರುಗಳು ಆಕ್ರಮಣ ಮಾಡಬಹುದು. ನಿನ್ನ ಜನರಲ್ಲಿ ಅನೇಕರು ವ್ಯಾಧಿಗೆ ಒಳಗಾಗಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 “ದೇಶಕ್ಕೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಜೊಳ್ಳು, ಮಿಡತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಅಂತು ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ ಬಾಧೆ ಉಂಟಾಗುವಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 “ನಾಡಿಗೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಬೂದಿ, ಮಿಡತೆ, ಚಿಟ್ಟೇಹುಳು, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಇಂಥ ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ, ಬಾಧೆ ಉಂಟಾದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ದೇಶಕ್ಕೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಬೂದಿ, ವಿುಡಿತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಅಂತು ಯಾವ ಉಪದ್ರವದಿಂದಾಗಲಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 “ದೇಶದಲ್ಲಿ ಬರಗಾಲ, ಘೋರವ್ಯಾಧಿ, ಉರಿಗಾಳಿ, ಬೆಳೆಗಳ ಮೇಲೆ ಮಿಡತೆ, ಕಂಬಳಿಹುಳು ಇವುಗಳು ಇದ್ದರೆ, ಅಥವಾ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ, ಯಾವ ಬಾಧೆ ಯಾವ ಬೇನೆ ಇದ್ದರೂ, ಅಧ್ಯಾಯವನ್ನು ನೋಡಿ |
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.