1 ಅರಸುಗಳು 8:39 - ಪರಿಶುದ್ದ ಬೈಬಲ್39 ದಯವಿಟ್ಟು ಅವನ ಪ್ರಾರ್ಥನೆಯನ್ನು ನಿನ್ನ ನಿವಾಸವಾದ ಪರಲೋಕದಿಂದ ಆಲಿಸಿ, ಜನರನ್ನು ಕ್ಷಮಿಸಿ, ಅವರಿಗೆ ಸಹಾಯ ಮಾಡು. ಜನರು ನಿಜವಾಗಿ ಆಲೋಚಿಸುವ ಸಂಗತಿಗಳು ನಿನಗೆ ಮಾತ್ರ ತಿಳಿದಿವೆ. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಗೂ ತೀರ್ಪುನೀಡು ಮತ್ತು ಅವನಿಗೆ ನ್ಯಾಯವಾದದ್ದನ್ನು ಮಾಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ, ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸು. ನೀನೊಬ್ಬನೇ ಎಲ್ಲಾ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಮನುಷ್ಯರ ಅಂತರಂಗಗಳನ್ನು ಬಲ್ಲಂಥ ನೀವು, ನಿಮ್ಮ ನಿವಾಸವಾಗಿರುವ ಪರಲೋಕದಿಂದ ಆಲಿಸಿರಿ; ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸಿರಿ; ನೀವೊಬ್ಬರೇ ಎಲ್ಲಾ ಮಾನವರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸು; ನೀನೊಬ್ಬನೇ ಎಲ್ಲಾ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ನೀವು ವಾಸಮಾಡುವ ಪರಲೋಕದಿಂದ ಕೇಳಿ, ಮನ್ನಿಸಿ, ನಡೆಸಿರಿ. ಮನುಷ್ಯನ ಹೃದಯವನ್ನು ತಿಳಿದಿರುವ ನೀವು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರ ಪ್ರತಿಫಲಕೊಡಿರಿ. ಏಕೆಂದರೆ ನೀವೊಬ್ಬರೇ ಸಮಸ್ತ ಜನರ ಹೃದಯಗಳನ್ನು ತಿಳಿದವರಾಗಿದ್ದೀರಿ. ಅಧ್ಯಾಯವನ್ನು ನೋಡಿ |
ಅಪೊಸ್ತಲರು ಹೀಗೆ ಪ್ರಾರ್ಥಿಸಿದರು: “ಪ್ರಭುವೇ, ನೀನು ಎಲ್ಲಾ ಜನರ ಮನಸ್ಸುಗಳನ್ನು ತಿಳಿದಿರುವೆ. ಈ ಕೆಲಸವನ್ನು ಮಾಡುವುದಕ್ಕಾಗಿ ಈ ಇಬ್ಬರಲ್ಲಿ ನೀನು ಯಾರನ್ನು ಆರಿಸಿಕೊಂಡಿರುವೆ ಎಂಬುದನ್ನು ನಮಗೆ ತೋರಿಸು. ಯೂದನು ಈ ಕೆಲಸಕ್ಕೆ ವಿಮುಖನಾಗಿ ತಾನು ಸೇರಬೇಕಿದ್ದಲ್ಲಿಗೆ ಹೊರಟುಹೋದನು. ಪ್ರಭುವೇ, ಅವನ ಸ್ಥಳದಲ್ಲಿ ಅಪೊಸ್ತಲನಾಗಿ ಯಾರು ನೇಮಕಗೊಳ್ಳಬೇಕೆಂಬುದನ್ನು ನಮಗೆ ತೋರಿಸು!”
ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.