Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:41 - ಪರಿಶುದ್ದ ಬೈಬಲ್‌

41-42 “ನಿನ್ನ ನಾಮಮಹತ್ತನ್ನು ಮತ್ತು ಶಕ್ತಿಯನ್ನು ಇತರ ಸ್ಥಳಗಳ ಜನರು ಕೇಳುತ್ತಾರೆ. ಈ ಆಲಯದಲ್ಲಿ ಪ್ರಾರ್ಥಿಸುವುದಕ್ಕಾಗಿ ಅವರು ದೂರದಿಂದ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 “ನಿನ್ನ ಪ್ರಜೆಗಳಾದ ಇಸ್ರಾಯೇಲನಲ್ಲದ ಒಬ್ಬ ಪರದೇಶದವನು ನಿನ್ನ ನಾಮಸ್ತುತಿಗೋಸ್ಕರ ದೂರದೇಶದಿಂದ ಬರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 “ನಿಮ್ಮ ನಾಮಮಹತ್ತು, ಭುಜಬಲ, ಶಿಕ್ಷಾಹಸ್ತ, ಇವುಗಳ ಸಂದೇಶ ಪರರಾಜ್ಯಗಳವರಿಗೂ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ನಿನ್ನ ನಾಮಮಹತ್ತು, ಭುಜಬಲ, ಶಿಕ್ಷಾಹಸ್ತ ಇವುಗಳ ವರ್ತಮಾನವು ಪರರಾಜ್ಯಗಳವರಿಗೂ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 “ನಿಮ್ಮ ಜನರಾದ ಇಸ್ರಾಯೇಲಿನವನಲ್ಲದೆ ನಿಮ್ಮ ನಾಮದ ನಿಮಿತ್ತ ದೂರದೇಶದಿಂದ ಬಂದ ಪರದೇಶಿಯ ವಿಷಯದಲ್ಲಿ ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:41
23 ತಿಳಿವುಗಳ ಹೋಲಿಕೆ  

ಅಲ್ಲಿ ಗ್ರೀಕ್ ಜನರು ಸಹ ಇದ್ದರು. ಪಸ್ಕಹಬ್ಬದಲ್ಲಿ ಆರಾಧಿಸುವುದಕ್ಕಾಗಿ ಜೆರುಸಲೇಮಿಗೆ ಹೋಗಿದ್ದವರಲ್ಲಿ ಇವರೂ ಸೇರಿದ್ದರು.


ದೇವರಿಗೆ ಕೃತಜ್ಞತೆ ಸಲ್ಲಿಸಲು ಈ ಸಮಾರ್ಯದವನನ್ನು ಬಿಟ್ಟು ಬೇರೆ ಯಾರೂ ಬರಲಿಲ್ಲವೇ?” ಎಂದು ಕೇಳಿದನು.


“ನ್ಯಾಯತೀರ್ಪಿನ ದಿನದಂದು ದಕ್ಷಿಣ ದೇಶದ ರಾಣಿಯು ಇಂದು ಜೀವಿಸುತ್ತಿರುವ ನಿಮ್ಮೊಂದಿಗೆ ಎದ್ದುನಿಂತು ನಿಮ್ಮನ್ನು ತಪ್ಪಿತಸ್ಥರೆಂದು (ಅಪರಾಧಿಗಳು) ನಿರೂಪಿಸುವಳು. ಏಕೆಂದರೆ, ಆ ರಾಣಿಯು ಸೊಲೊಮೋನನ ಜ್ಞಾನದ ಬೋಧನೆಯನ್ನು ಕೇಳಲು ಬಹಳ ದೂರದಿಂದ ಬಂದಳು. ನಾನಾದರೋ ಸೊಲೊಮೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ ಎಂದು ನಿಮಗೆ ಹೇಳುತ್ತೇನೆ.


ಯೇಸು ಕಪೆರ್ನೌಮ್ ಪಟ್ಟಣಕ್ಕೆ ಹೊರಟುಹೋದನು. ಆತನು ಪಟ್ಟಣಕ್ಕೆ ಪ್ರವೇಶಿಸಿದಾಗ ಸೈನ್ಯದ ಅಧಿಕಾರಿಯೊಬ್ಬನು ಬಂದು,


ಹೆರೋದನು ರಾಜನಾಗಿದ್ದ ಕಾಲದಲ್ಲಿ ಯೇಸು ಜುದೇಯದ ಬೆತ್ಲೆಹೇಮ್ ಎಂಬ ಊರಲ್ಲಿ ಹುಟ್ಟಿದನು. ಯೇಸು ಹುಟ್ಟಿದ ಮೇಲೆ, ಪೂರ್ವದೇಶದ ಕೆಲವು ಜ್ಞಾನಿಗಳು ಜೆರುಸಲೇಮಿಗೆ ಬಂದರು.


“ಇಸ್ರೇಲಿನವನಲ್ಲದ ಪರದೇಶಿಯು ನಿನ್ನ ಪರಾಕ್ರಮವನ್ನೂ ನಿನ್ನ ಸಾಮರ್ಥ್ಯವನ್ನೂ ಕಂಡು ಕೇಳಿ ಇಲ್ಲಿಗೆ ಬಂದು ಈ ಆಲಯದ ಮುಂದೆ ನಿಂತುಕೊಂಡು ನಿನಗೆ ಪ್ರಾರ್ಥಿಸುವದಾದರೆ,


ಬೋವಜನು ಅವಳಿಗೆ, “ನೀನು ನಿನ್ನ ಅತ್ತೆಯಾದ ನೊವೊಮಿಗೆ ಮಾಡಿದ ಎಲ್ಲ ಸಹಾಯದ ಬಗ್ಗೆ ನನಗೆ ಗೊತ್ತಿದೆ. ನಿನ್ನ ಗಂಡನು ಸತ್ತ ಮೇಲೆಯೂ ನೀನು ಅವಳಿಗೆ ಸಹಾಯ ಮಾಡಿದೆ ಎಂಬುದು ನನಗೆ ಗೊತ್ತಿದೆ. ನೀನು ನಿನ್ನ ತಂದೆತಾಯಿಗಳನ್ನೂ ನಿನ್ನ ದೇಶವನ್ನೂ ಬಿಟ್ಟು ಈ ದೇಶಕ್ಕೆ ಬಂದಿರುವಿ ಎಂಬುದು ನನಗೆ ಗೊತ್ತು. ನಿನಗೆ ಈ ದೇಶದಲ್ಲಿ ಯಾರ ಪರಿಚಯವೂ ಇರಲಿಲ್ಲ; ಆದರೂ ನೀನು ನೊವೊಮಿಯ ಜೊತೆ ಇಲ್ಲಿಗೆ ಬಂದಿರುವಿ.


ಅದಕ್ಕೆ ರೂತಳು, “ನಿನ್ನನ್ನು ಬಿಟ್ಟು ಸ್ವಜನರ ಬಳಿಗೆ ಹಿಂದಿರುಗಿ ಹೋಗೆಂದು ನನಗೆ ಒತ್ತಾಯ ಮಾಡಬೇಡ. ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು. ನೀನು ವಾಸಿಸುವಲ್ಲೇ ನಾನೂ ವಾಸಿಸುವೆನು. ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.


ನೀನು ಹೀಗೆ ಮಾಡಿದರೆ, ನೀನು ನಮ್ಮ ಪೂರ್ವಿಕರಿಗೆ ದಯಪಾಲಿಸಿರುವ ಈ ದೇಶದಲ್ಲಿ ಅವರು ವಾಸಿಸುವ ಎಲ್ಲಾ ಕಾಲದಲ್ಲೂ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿರುತ್ತಾರೆ.


ನಿಮಗೂ ನಿಮ್ಮ ಬಳಿಯಲ್ಲಿ ವಾಸಿಸುವ ಪರದೇಶದವನಿಗೂ ಒಂದೇ ವಿಧವಾದ ಪ್ರಮಾಣ ವಿಧಿಗಳಿರಬೇಕು.”


ನಿರುದ್ದೇಶದಿಂದ ತಪ್ಪುಮಾಡಿದ ಪ್ರತಿಯೊಬ್ಬರಿಗೂ ಈ ನಿಯಮ ಅನ್ವಯಿಸುತ್ತದೆ. ಈ ವಿಷಯದಲ್ಲಿ ಇಸ್ರೇಲರಲ್ಲಿರುವ ಸ್ವದೇಶದವರಿಗೂ ಪರದೇಶದವರಿಗೂ ಒಂದೇ ವಿಧಿಯಿರಬೇಕು.


ಆ ಕಾಲದಲ್ಲಿ ಜೆರುಸಲೇಮ್ ನಗರಕ್ಕೆ ‘ಯೆಹೋವನ ಸಿಂಹಾಸನ’ ಎಂದು ಕರೆಯುವರು. ಯೆಹೋವನ ಹೆಸರಿಗೆ ಗೌರವ ಸೂಚಿಸಲು ಎಲ್ಲಾ ಜನಾಂಗದವರು ಜೆರುಸಲೇಮಿನಲ್ಲಿ ಬಂದು ಸೇರುವರು. ಅವರು ತಮ್ಮ ದುಷ್ಟ ಮತ್ತು ಹಟಮಾರಿ ಹೃದಯಗಳನ್ನು ಅನುಸರಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು