1 ಅರಸುಗಳು 8:47 - ಪರಿಶುದ್ದ ಬೈಬಲ್47 ಆ ದೂರದೇಶಗಳಲ್ಲಿ ನಿನ್ನ ಜನರು ತಮಗೆ ಸಂಭವಿಸಿದ್ದನ್ನು ಆಲೋಚಿಸುತ್ತಾರೆ. ಅವರು ತಮ್ಮ ಪಾಪಗಳಿಗಾಗಿ ಕ್ಷಮೆಯನ್ನು ಕೋರಿ, ನಿನ್ನಲ್ಲಿ ಪ್ರಾರ್ಥಿಸುತ್ತಾರೆ. ಅವರು, ‘ನಾವು ಪಾಪಮಾಡಿ ದ್ರೋಹಿಗಳಾಗಿದ್ದೇವೆ’ ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಅವರು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಪಶ್ಚಾತ್ತಾಪಪಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ತಾವು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಅವರು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಮಾನಸಾಂತರಪಟ್ಟು, ‘ನಾವು ಪಾಪಮಾಡಿದ್ದೇವೆ, ತಪ್ಪುಮಾಡಿ ದುಷ್ಟರಾಗಿ ನಡೆದಿದ್ದೇವೆ,’ ಎಂದು ಅವರನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿಮಗೆ ಪ್ರಾರ್ಥನೆಮಾಡಿದರೆ, ಅಧ್ಯಾಯವನ್ನು ನೋಡಿ |
ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿದರು. ಅವರು ನೀರನ್ನು ತೆಗೆದುಕೊಂಡು ಬಂದು ಯೆಹೋವನ ಮುಂದೆ ಅದನ್ನು ಸುರಿದರು. ಈ ರೀತಿ ಅಂದು ಅವರು ಉಪವಾಸವನ್ನು ಆರಂಭಿಸಿದರು. ಅಂದು ಅವರು ಯಾವ ಆಹಾರವನ್ನೂ ತೆಗೆದುಕೊಳ್ಳಲಿಲ್ಲ. ಅಲ್ಲದೆ ಅವರು ತಮ್ಮ ಪಾಪಗಳನ್ನು ಅರಿಕೆ ಮಾಡಿದರು. “ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಅವರು ಹೇಳಿದರು. ಹೀಗಿರಲು, ಸಮುವೇಲನು ಇಸ್ರೇಲರ ನ್ಯಾಯಾಧೀಶನಾಗಿ ಮಿಚ್ಪೆಯಲ್ಲಿ ಸೇವೆ ಸಲ್ಲಿಸಿದನು.