48 ಅವರು ಆ ದೂರದ ದೇಶದಲ್ಲಿರುತ್ತಾರೆ. ಆದರೆ ಅವರು ತಮ್ಮ ಪೂರ್ವಿಕರಿಗೆ ನೀನು ದಯಪಾಲಿಸಿದ ಈ ದೇಶದ ಕಡೆಗೂ ನಿನ್ನಿಂದ ಆರಿಸಲ್ಪಟ್ಟ ಈ ನಗರದ ಕಡೆಗೂ ನಿನ್ನ ಗೌರವಕ್ಕಾಗಿ ನಾನು ನಿರ್ಮಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ನಾವು ನಿನ್ನ ಆಜ್ಞೆಗಳನ್ನು ಮೀರಿ ಪಾಪಿಗಳಾದೆವು ಎಂದು ಒಪ್ಪಿ, ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿನ್ನಲ್ಲಿ ಪ್ರಾರ್ಥಿಸುವುದಾದರೆ,
48 ನಿಮ್ಮ ಅನುಗ್ರಹದಿಂದ ತಮ್ಮ ಪಿತೃಗಳಿಗೆ ದೊರಕಿದ ನಾಡಿನ ಕಡೆಗೂ ನೀವು ಆರಿಸಿಕೊಂಡ ಪಟ್ಟಣದ ಕಡೆಗೂ ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ‘ನಾವು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ಒಪ್ಪಿಕೊಂಡು ಪೂರ್ಣಮನಸ್ಸಿನಿಂದ ಹಾಗು ಪೂರ್ಣಪ್ರಾಣದಿಂದ, ನಿಮ್ಮನ್ನು ಪ್ರಾರ್ಥಿಸಿದರೆ,
48 ನಿನ್ನ ಅನುಗ್ರಹದಿಂದ ತಮ್ಮ ಪಿತೃಗಳಿಗೆ ದೊರಕಿದ ದೇಶದ ಕಡೆಗೂ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು - ನಾವು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು ಎಂದು ಒಪ್ಪಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನಿನ್ನನ್ನು ಪ್ರಾರ್ಥಿಸುವದಾದರೆ
48 ಅವರನ್ನು ಸೆರೆಹಿಡಿದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ಕಡೆಗೆ ತಿರುಗಿಕೊಂಡು, ನೀವು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಕಡೆಗೂ, ನೀವು ಆಯ್ದುಕೊಂಡ ಪಟ್ಟಣದ ಕಡೆಗೂ ನಿಮ್ಮ ನಾಮಕ್ಕೋಸ್ಕರ ನಾನು ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ಅವರು ನಿಮಗೆ ಪ್ರಾರ್ಥನೆಮಾಡಿದರೆ,
ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.
ಆದರೆ ನೀವು ಹಿಂತಿರುಗಿ ನನ್ನ ಬಳಿಗೆ ಬಂದು, ನನ್ನ ಕಟ್ಟಳೆಗಳಿಗೆ ವಿಧೇಯರಾದರೆ, ನಿಮ್ಮ ಜನರನ್ನು ಬಲವಂತವಾಗಿ ಭೂಲೋಕದ ಕಟ್ಟಕಡೆಯವರೆಗೆ ಕೊಂಡೊಯ್ದಿದ್ದರೂ ಅಲ್ಲಿಂದ ನನ್ನ ಹೆಸರನ್ನು ನೆಲೆಗೊಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸ್ಥಳಕ್ಕೆ ಕರೆದುಕೊಂಡು ಬರುವೆನು” ಎಂದು ಹೇಳಿರುವೆ.
ಅವರು ಪ್ರಯಾಣ ಮಾಡುತ್ತಾ ನೀರಿದ್ದ ಒಂದು ಸ್ಥಳಕ್ಕೆ ಬಂದಾಗ ಅಧಿಕಾರಿಯು, “ಇಗೋ! ಇಲ್ಲಿ ನೀರಿದೆ! ನಾನು ದೀಕ್ಷಾಸ್ನಾನ ತೆಗೆದುಕೊಳ್ಳಲು ಏನಾದರೂ ಅಡ್ಡಿಯಿದೆಯೇ?” ಎಂದು ಫಿಲಿಪ್ಪನನ್ನು ಕೇಳಿದನು.
ಆ ಕೇಡುಗಳೆಲ್ಲಾ ನಮಗೆ ಉಂಟಾದವು. ಇದೆಲ್ಲಾ ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿದಂತೆಯೇ ನಡೆದುಹೋಯಿತು. ಆದರೆ ಈವರೆಗೂ ನಾವು ನಿನ್ನ ಸಹಾಯವನ್ನು ಕೇಳಲಿಲ್ಲ. ಇಂದಿಗೂ ನಾವು ಪಾಪ ಮಾಡುವದನ್ನು ನಿಲ್ಲಿಸಲಿಲ್ಲ. ಯೆಹೋವನೇ, ಇನ್ನೂ ನಾವು ನಿನ್ನ ಸತ್ಯೋಪದೇಶದ ಕಡೆಗೆ ಗಮನ ಕೊಡುತ್ತಿಲ್ಲ.
ಅವರಲ್ಲಿ ನನ್ನನ್ನು ಅರಿತುಕೊಳ್ಳುವ ಬಯಕೆ ಉಂಟಾಗುವಂತೆ ಮಾಡುತ್ತೇನೆ. ನಾನೇ ಯೆಹೋವನು ಎಂಬುದನ್ನು ಅವರು ತಿಳಿದುಕೊಳ್ಳುವರು. ಅವರು ನನ್ನ ಜನರಾಗುವರು ಮತ್ತು ನಾನು ಅವರ ದೇವರಾಗುವೆನು. ನಾನು ಹೀಗೇಕೆ ಮಾಡುತ್ತೇನೆಂದರೆ ಬಾಬಿಲೋನಿನಲ್ಲಿ ಸೆರೆಯಾಳುಗಳಾಗಿದ್ದ ಜನರು ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗುತ್ತಾರೆ.
ಇಸ್ರೇಲಿಗೆ ಇಷ್ಟೆಲ್ಲಾ ದಂಡನೆ ಆದರೂ ಅವಳ ಸೋದರಿಯಾದ ಯೆಹೂದ ತುಂಬುಹೃದಯದಿಂದ ನನ್ನಲ್ಲಿಗೆ ಬರಲಿಲ್ಲ. ಅವಳು ನನ್ನಲ್ಲಿಗೆ ತಿರುಗಿ ಬರುವ ನಟನೆಯನ್ನು ಮಾತ್ರ ಮಾಡಿದಳು. ಇದು ಯೆಹೋವನಾದ ನನ್ನ ನುಡಿ” ಎಂದು ಹೇಳಿದನು.
“ಆದರೆ ಯೆಹೋವನೇ, ನಾವು ಪಾಪ ಮಾಡಿದ್ದೇವೆ. ನಾವು ತಪ್ಪುಗಳನ್ನು ಮಾಡಿದ್ದೇವೆ. ನಾವು ನಿನಗೆ ವಿರೋಧವಾಗಿ ದಂಗೆ ಎದ್ದಿದ್ದೇವೆ. ನಾವು ನಿನ್ನ ಆಜ್ಞೆಗಳನ್ನು ಮತ್ತು ಸರಿಯಾದ ನಿರ್ಣಯಗಳನ್ನು ತೊರೆದಿದ್ದೇವೆ.
ಹೌದು, ನಾನು ನನ್ನ ಜನರನ್ನು ಎಲ್ಲಾ ರಾಜ್ಯಗಳಿಗೆ ಚದರಿಸಿಬಿಟ್ಟಿರುತ್ತೇನೆ. ಆದರೆ ಆ ಬಹುದೂರದ ರಾಜ್ಯಗಳಲ್ಲಿ ಅವರು ನನ್ನನ್ನು ನೆನಪು ಮಾಡುವರು. ಅವರೂ ಅವರ ಮಕ್ಕಳೂ ಉಳಿಯುವರು ಮತ್ತು ಅವರು ಹಿಂತಿರುಗಿ ಬರುವರು.
“ಒಂದುವೇಳೆ ಜನರು ತಮ್ಮ ಪಾಪಗಳನ್ನೂ ತಮ್ಮ ಪೂರ್ವಿಕರ ಪಾಪಗಳನ್ನೂ ಅರಿಕೆ ಮಾಡಬಹುದು; ನನಗೆ ವಿರುದ್ಧವಾಗಿ ಪಾಪಮಾಡಿರುವುದಾಗಿಯೂ ನನಗೆ ವಿರೋಧವಾಗಿ ತಿರುಗಿರುವುದಾಗಿಯೂ ಅವರು ಒಪ್ಪಿಕೊಂಡು
“ಇಸ್ರೇಲಿನ ನಿನ್ನ ಜನರೂ ಕೆಲವು ಸಂದರ್ಭಗಳಲ್ಲಿ ನಿನ್ನ ವಿರುದ್ಧವಾಗಿ ಪಾಪಮಾಡುತ್ತಾರೆ. ಅವರನ್ನು ಅವರ ಶತ್ರುಗಳು ಸೋಲಿಸುತ್ತಾರೆ. ಆಗ ಜನರು ನಿನ್ನ ಹತ್ತಿರಕ್ಕೆ ಹಿಂದಿರುಗಿ ನಿನ್ನನ್ನು ಸ್ತುತಿಸುತ್ತಾರೆ. ಈ ಆಲಯದಲ್ಲಿ ಜನರು ನಿನಗೆ ಪ್ರಾರ್ಥಿಸುತ್ತಾರೆ.
ಇದಕ್ಕೆ ಮೊದಲು ಯೋಷೀಯನಂತಹ ರಾಜನು ಇರಲೇ ಇಲ್ಲ. ಯೋಷೀಯನು ತನ್ನ ಪೂರ್ಣ ಹೃದಯದಿಂದಲೂ ತನ್ನ ಪೂರ್ಣ ಆತ್ಮದಿಂದಲೂ ತನ್ನ ಪೂರ್ಣ ಶಕ್ತಿಯಿಂದಲೂ ಯೆಹೋವನ ಕಡೆಗೆ ತಿರುಗಿದನು. ಮೋಶೆಯ ಧರ್ಮಶಾಸ್ತ್ರವನ್ನು ಯೋಷೀಯನಂತೆ ಬೇರೆ ಯಾವ ರಾಜನೂ ಅನುಸರಿಸಿರಲಿಲ್ಲ. ಆ ಕಾಲದವರೆಗೆ ಯೋಷೀಯನಂತಹ ಮತ್ತೊಬ್ಬ ರಾಜನು ಇರಲೇ ಇಲ್ಲ.