1 ಅರಸುಗಳು 8:5 - ಪರಿಶುದ್ದ ಬೈಬಲ್5 ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರೂ ಒಡಂಬಡಿಕೆಯ ಪೆಟ್ಟಿಗೆಯ ಎದುರಿನಲ್ಲಿ ಒಟ್ಟಿಗೆ ಸೇರಿದರು. ಅವರು ಅಸಂಖ್ಯವಾದ ಕುರಿಗಳನ್ನು ಮತ್ತು ದನಗಳನ್ನು ಯಜ್ಞಗಳನ್ನಾಗಿ ಅರ್ಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅರಸನಾದ ಸೊಲೊಮೋನನು ಅಲ್ಲಿ ಕೂಡಿ ಬಂದಿದ್ದ ಎಲ್ಲಾ ಇಸ್ರಾಯೇಲರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿದನಗಳನ್ನು ಯಜ್ಞಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅರಸ ಸೊಲೊಮೋನನು ಹಾಗು ಅಲ್ಲಿ ಕೂಡಿಬಂದಿದ್ದ ಎಲ್ಲ ಇಸ್ರಯೇಲರೂ ಮಂಜೂಷದ ಮುಂದೇ ಅಸಂಖ್ಯವಾದ ಕುರಿದನಗಳನ್ನು ಬಲಿದಾನಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅರಸನಾದ ಸೊಲೊಮೋನನೂ ಅಲ್ಲಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿದನಗಳನ್ನು ಯಜ್ಞಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಅರಸನಾದ ಸೊಲೊಮೋನನೂ, ಅವನ ಬಳಿಯಲ್ಲಿ ಕೂಡಿದ ಇಸ್ರಾಯೇಲ್ ಜನರೆಲ್ಲರೂ ಮಂಜೂಷದ ಮುಂದೆ ನಿಂತು ಎಣಿಸಲಾಗದಷ್ಟು ಕುರಿಗಳನ್ನೂ ಪಶುಗಳನ್ನೂ ಬಲಿಯಾಗಿ ಅರ್ಪಿಸಿದರು. ಅಧ್ಯಾಯವನ್ನು ನೋಡಿ |
ರಾಜನಾದ ಯಾರೊಬ್ಬಾಮನು ಹೊಸಹಬ್ಬದ ದಿನವನ್ನು ಆರಂಭಿಸಿದನು. ಈ ಹಬ್ಬವು ಯೆಹೂದ್ಯರ ಪಸ್ಕಹಬ್ಬದಂತಿತ್ತು. ಆದರೆ ಈ ಹಬ್ಬವು ಎಂಟನೆಯ ತಿಂಗಳ ಹದಿನೈದನೆಯ ದಿವಸವಾಗಿತ್ತು. ಆ ಸಂದರ್ಭದಲ್ಲಿ ರಾಜನು ಬೇತೇಲ್ ನಗರದಲ್ಲಿ ಯಜ್ಞವೇದಿಕೆಯ ಮೇಲೆ ಯಜ್ಞಗಳನ್ನು ಅರ್ಪಿಸಿದನು. ಅವನು ತಾನೇ ನಿರ್ಮಿಸಿದ ಕರುಗಳಿಗೆ ಯಜ್ಞಗಳನ್ನು ಅರ್ಪಿಸಿದನು. ರಾಜನಾದ ಯಾರೊಬ್ಬಾಮನು ತಾನು ನಿರ್ಮಿಸಿದ ಎತ್ತರದ ಸ್ಥಳಗಳಲ್ಲಿ ಸೇವೆಮಾಡಲು ಯಾಜಕರನ್ನು ಬೇತೇಲ್‌ನಲ್ಲಿಯೇ ಆರಿಸಿಕೊಂಡನು.