1 ಅರಸುಗಳು 8:50 - ಪರಿಶುದ್ದ ಬೈಬಲ್50 ನಿನ್ನ ಜನರ ಎಲ್ಲಾ ಪಾಪಗಳನ್ನು ಕ್ಷಮಿಸು. ಅವರು ನಿನಗೆ ವಿರುದ್ಧವಾದುದಕ್ಕೆ ಅವರನ್ನು ಕ್ಷಮಿಸು. ಅವರ ಶತ್ರುಗಳು ಅವರಿಗೆ ದಯೆತೋರಿಸುವಂತೆ ಮಾಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನೀನು ಬಿಡಿಸಿದ ಈ ಜನರು ನಿನ್ನ ಸ್ವಕೀಯ ಜನರಾಗಿದ್ದಾರೆಂಬುದನ್ನು ನೆನಪುಮಾಡಿಕೊ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಈಜಿಪ್ಟ್ ದೇಶದಿಂದ ನೀವು ಬಿಡಿಸಿದ ಈ ಜನರು ನಿಮ್ಮ ಸ್ವಕೀಯಜನರಾಗಿದ್ದಾರೆಂಬುದನ್ನು ನೆನಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಕಬ್ಬಿಣ ಕರಗಿಸುವ ಕುಲಿಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನೀನು ಬಿಡಿಸಿದ ಈ ಜನರು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ನಿಮ್ಮ ಜನರು ನಿಮಗೆ ವಿರೋಧವಾಗಿ ಮಾಡಿದ ಪಾಪಗಳನ್ನೂ, ಅವರ ಸಮಸ್ತ ದ್ರೋಹಗಳನ್ನೂ ಕ್ಷಮಿಸಿರಿ; ಅವರನ್ನು ಸೆರೆಯಾಗಿ ಒಯ್ಯುವವರು ಅವರನ್ನು ಕರುಣಿಸುವಂತೆ ನೀವು ಸಹ ಅವರನ್ನು ಕರುಣಿಸಿರಿ. ಅಧ್ಯಾಯವನ್ನು ನೋಡಿ |
ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.
ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.”