1 ಅರಸುಗಳು 8:53 - ಪರಿಶುದ್ದ ಬೈಬಲ್53 ಭೂಲೋಕದ ಎಲ್ಲಾ ಜನರೊಳಗಿಂದ ಅವರನ್ನು ನೀನು ನಿನ್ನ ವಿಶೇಷವಾದ ಸ್ವಂತ ಜನರೆಂದು ಆರಿಸಿರುವೆ. ಯೆಹೋವನೇ, ನಮ್ಮ ಪೂರ್ವಿಕರನ್ನು ನೀನು ಈಜಿಪ್ಟಿನಿಂದ ಬರಮಾಡಿದಾಗ ನಿನ್ನ ಸೇವಕನಾದ ಮೋಶೆಯ ಮೂಲಕ ಅದನ್ನು ವಾಗ್ದಾನ ಮಾಡಿದೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಕರ್ತನೇ, ಯೆಹೋವನೇ, ನೀನು ನಮ್ಮ ಪೂರ್ವಿಕರನ್ನು ಐಗುಪ್ತದೇಶದಿಂದ ಬಿಡಿಸುವಾಗ ಅವರಿಗೆ ನಾನು ನಿಮ್ಮನ್ನು ಎಲ್ಲಾ ಜನಾಂಗಗಳೊಳಗಿಂದ ಪ್ರತ್ಯೇಕಿಸಿ, ಸ್ವಕೀಯಜನರನ್ನಾಗಿ ಮಾಡಿಕೊಂಡಿದ್ದೇನೆಂದು ಮೋಶೆಯ ಮುಖಾಂತರವಾಗಿ ಹೇಳಿದಿಯಲ್ಲವೇ” ಎಂದು ದೇವರನ್ನು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ಹೇ ಸರ್ವೇಶ್ವರಾ, ಸರ್ವೇಶ್ವರಾ, ನೀವು ನಮ್ಮ ಪಿತೃಗಳನ್ನು ಈಜಿಪ್ಟ್ ದೇಶದಿಂದ ಬಿಡಿಸುವಾಗ ಅವರಿಗೆ, ‘ನಾನು ನಿಮ್ಮನ್ನು ಎಲ್ಲಾ ಜನಾಂಗಗಳೊಳಗಿಂದ ಪ್ರತ್ಯೇಕಿಸಿ ಸ್ವಕೀಯ ಜನರನ್ನಾಗಿ ಮಾಡಿಕೊಂಡಿದ್ದೇನೆ’ ಎಂದು ಮೋಶೆಯ ಮುಖಾಂತರ ಹೇಳಿದಿರಲ್ಲವೇ!” ಎಂದು ದೇವರನ್ನು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ಕರ್ತನೇ, ಯೆಹೋವನೇ, ನೀನು ನಮ್ಮ ಪಿತೃಗಳನ್ನು ಐಗುಪ್ತದೇಶದಿಂದ ಬಿಡಿಸುವಾಗ ಅವರಿಗೆ - ನಾನು ನಿಮ್ಮನ್ನು ಎಲ್ಲಾ ಜನಾಂಗಗಳೊಳಗಿಂದ ಪ್ರತ್ಯೇಕಿಸಿ ಸ್ವಕೀಯ ಜನರನ್ನಾಗಿ ಮಾಡಿಕೊಂಡಿದ್ದೇನೆಂದು ಮೋಶೆಯ ಮುಖಾಂತರವಾಗಿ ಹೇಳಿದಿಯಲ್ಲವೇ ಎಂದು ದೇವರನ್ನು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 ನೀವು ಈಜಿಪ್ಟಿನಿಂದ ನಮ್ಮ ಪಿತೃಗಳನ್ನು ಹೊರಗೆ ತಂದಾಗ ನಿಮ್ಮ ಸೇವಕನಾದ ಮೋಶೆಯ ಮುಖಾಂತರವಾಗಿ ಹೇಳಿದ ಹಾಗೆಯೇ ಸಾರ್ವಭೌಮ ಯೆಹೋವ ದೇವರೇ, ಅವರನ್ನು ನಿಮ್ಮ ಬಾಧ್ಯತೆಯಾಗಿ ಭೂಮಿಯ ಸಮಸ್ತ ಜನರೊಳಗಿಂದ ಪ್ರತ್ಯೇಕಿಸಿರಿ,” ಎಂದನು. ಅಧ್ಯಾಯವನ್ನು ನೋಡಿ |
ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!