1 ಅರಸುಗಳು 8:64 - ಪರಿಶುದ್ದ ಬೈಬಲ್64 ಅಂದು ರಾಜನಾದ ಸೊಲೊಮೋನನು ಆಲಯದ ಮುಂದಿನ ಅಂಗಳವನ್ನು ಪ್ರತಿಷ್ಠಿಸಿದನು. ಅವನು ಸರ್ವಾಂಗಹೋಮಗಳನ್ನು, ಧಾನ್ಯಸಮರ್ಪಣೆಗಳನ್ನು ಮತ್ತು ಸಮಾಧಾನಯಜ್ಞಕ್ಕಾಗಿ ವಧಿಸಿದ್ದ ಪಶುಗಳ ಕೊಬ್ಬನ್ನು ಅಂಗಳದಲ್ಲಿ ಅರ್ಪಿಸಿದನು. ಯಾಕೆಂದರೆ ಯೆಹೋವನ ಮುಂದೆ ಇದ್ದ ಹಿತ್ತಾಳೆಯ ಯಜ್ಞವೇದಿಕೆಯು ಈ ಎಲ್ಲವನ್ನು ಹಿಡಿಸಲಾರದಷ್ಟು ಚಿಕ್ಕದಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201964 ಯೆಹೋವನ ಆಲಯದ ಮುಂದಿರುವ ತಾಮ್ರದ ಯಜ್ಞವೇದಿಯು ಈ ಎಲ್ಲಾ ಸರ್ವಾಂಗಹೋಮ ದ್ರವ್ಯಗಳನ್ನೂ, ಧಾನ್ಯ ನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಹಿಡಿಯಲಾರದಷ್ಟು ಚಿಕ್ಕದಾಗಿದ್ದುದರಿಂದ ಸೊಲೊಮೋನನು ಆ ದಿನ ದೇವಾಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ, ಅಲ್ಲಿ ಅವುಗಳನ್ನೆಲ್ಲಾ ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)64 ಸರ್ವೇಶ್ವರನ ಆಲಯದ ಮುಂದಿರುವ ತಾಮ್ರದ ಬಲಿಪೀಠ ಈ ಎಲ್ಲಾ ದಹನಬಲಿದ್ರವ್ಯಗಳನ್ನೂ ಧಾನ್ಯನೈವೇದ್ಯಗಳನ್ನೂ ಸಮಾಧಾನ ಬಲಿಯ ಕೊಬ್ಬನ್ನೂ ಹಿಡಿಸುವಷ್ಟು ದೊಡ್ಡದಾಗಿರಲಿಲ್ಲ. ಆದುದರಿಂದ ಸೊಲೊಮೋನನು ಆ ದಿವಸ ದೇವಾಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ ಅಲ್ಲಿಯೂ ಇವುಗಳನ್ನೆಲ್ಲ ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)64 ಯೆಹೋವನ ಆಲಯದ ಮುಂದಿರುವ ತಾಮ್ರದ ಯಜ್ಞವೇದಿಯು ಈ ಎಲ್ಲಾ ಸರ್ವಾಂಗಹೋಮದ್ರವ್ಯಗಳನ್ನೂ ಧಾನ್ಯನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಹಿಡಿಯಲಾರದಷ್ಟು ಚಿಕ್ಕದಾಗಿದ್ದದರಿಂದ ಸೊಲೊಮೋನನು ಆ ದಿವಸ ದೇವಾಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ ಅಲ್ಲಿ ಇವುಗಳನ್ನೆಲ್ಲಾ ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ64 ಆ ದಿನ ಅರಸನು ಯೆಹೋವ ದೇವರ ಆಲಯದ ಮುಂದಿರುವ ಮಧ್ಯದ ಅಂಗಳವನ್ನು ಪ್ರತಿಷ್ಠೆ ಮಾಡಿದನು. ಯೆಹೋವ ದೇವರ ಮುಂದಿರುವ ಕಂಚಿನ ಬಲಿಪೀಠದ ಮೇಲೆ ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ, ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಅಲ್ಲಿ ಅವನು ದಹನಬಲಿಗಳನ್ನೂ, ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು. ಅಧ್ಯಾಯವನ್ನು ನೋಡಿ |
ಆದರೆ ವಿಶೇಷವಾದ ಹಬ್ಬದ ಆಚರಣೆಗಳಿಗಾಗಿ ಅಧಿಪತಿಯು ಕಾಣಿಕೆಗಳನ್ನು ಕೊಡಲೇಬೇಕು. ಅಧಿಪತಿಯು ಪಾಪಪರಿಹಾರಕಯಜ್ಞಗಳನ್ನೂ ಧಾನ್ಯಾರ್ಪಣೆಗಳನ್ನೂ ಪಾನದ್ರವ್ಯಾರ್ಪಣೆಗಳನ್ನೂ ಕೊಡಬೇಕು. ಈ ಕಾಣಿಕೆಗಳನ್ನು ಪ್ರತಿಯೊಂದು ಹಬ್ಬದ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸಬ್ಬತ್ ದಿನದಲ್ಲಿಯೂ ಇಸ್ರೇಲ್ ಜನಾಂಗದ ಎಲ್ಲಾ ವಿಶೇಷ ಹಬ್ಬಗಳಲ್ಲಿಯೂ ಅರ್ಪಿಸಬೇಕು. ಇಸ್ರೇಲ್ ಸಂತತಿಯ ಜನರನ್ನು ಶುದ್ಧೀಕರಿಸುವುದಕ್ಕಾಗಿ ಅಧಿಪತಿಯು ಈ ಕಾಣಿಕೆಗಳನ್ನು ಕೊಡಬೇಕು.”