Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:66 - ಪರಿಶುದ್ದ ಬೈಬಲ್‌

66 ಮಾರನೆಯ ದಿನ ಸೊಲೊಮೋನನು ಜನರಿಗೆ ಮನೆಗೆ ಹೋಗುವಂತೆ ಹೇಳಿದನು. ಜನರೆಲ್ಲರು ರಾಜನನ್ನು ಅಭಿನಂದಿಸಿ ತಮ್ಮ ತಮ್ಮ ಮನೆಗಳಿಗೆ ಹೋದರು. ಯೆಹೋವನು ತನ್ನ ಸೇವಕನಾದ ದಾವೀದನಿಗೆ ಮತ್ತು ಇಸ್ರೇಲಿನ ಜನರಿಗೆ ಒಳ್ಳೆಯವುಗಳನ್ನು ಮಾಡಿದ್ದರಿಂದ ಅವರು ಸಂತೋಷವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

66 ಎಂಟನೆಯ ದಿನ ಜನರಿಗೆ ಹೋಗುವುದಕ್ಕೆ ಅಪ್ಪಣೆಯಾಗಲು ಅವರು ಅರಸನನ್ನು ವಂದಿಸಿ ಯೆಹೋವನು ತನ್ನ ಸೇವಕನಾದ ದಾವೀದನಿಗೂ ತನ್ನ ಪ್ರಜೆಗಳಾದ ಇಸ್ರಾಯೇಲರಿಗೂ ಮಾಡಿದ ಸರ್ವೋಪಕಾರಗಳನ್ನು ನೆನದು ಆನಂದಚಿತ್ತರಾಗಿ, ಹರ್ಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ತೆರಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

66 ಎಂಟನೆಯ ದಿವಸ ಜನರಿಗೆ ಹೋಗುವುದಕ್ಕೆ ಅಪ್ಪಣೆಯಾಯಿತು. ಅವರು ಅರಸನನ್ನು ವಂದಿಸಿ, ಸರ್ವೇಶ್ವರ ತಮ್ಮ ದಾಸ ದಾವೀದನಿಗೂ ತಮ್ಮ ಪ್ರಜೆಗಳಾದ ಇಸ್ರಯೇಲರಿಗೂ ಮಾಡಿದ ಸರ್ವೋಪಕಾರಗಳನ್ನು ಸ್ಮರಿಸಿ, ಆನಂದಚಿತ್ತರಾಗಿ ಹರ್ಷಿಸುತ್ತಾ, ತಮ್ಮ ತಮ್ಮ ನಿವಾಸಗಳಿಗೆ ತೆರಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

66 ಎಂಟನೆಯ ದಿವಸ ಜನರಿಗೆ ಹೋಗುವದಕ್ಕೆ ಅಪ್ಪಣೆಯಾಗಲು ಅವರು ಅರಸನನ್ನು ವಂದಿಸಿ ಯೆಹೋವನು ತನ್ನ ಸೇವಕನಾದ ದಾವೀದನಿಗೂ ತನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೂ ಮಾಡಿದ ಸರ್ವೋಪಕಾರಗಳನ್ನು ನೆನಸಿ ಆನಂದಚಿತ್ತರಾಗಿ ಹರ್ಷಿಸುತ್ತಾ ತಮ್ಮತಮ್ಮ ನಿವಾಸಗಳಿಗೆ ತೆರಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

66 ಎಂಟನೆಯ ದಿನದಲ್ಲಿ ಅವನು ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡಲು, ಆಗ ಅವರು ಅರಸನನ್ನು ಆಶೀರ್ವದಿಸಿ ಯೆಹೋವ ದೇವರು ತಮ್ಮ ಸೇವಕನಾದ ದಾವೀದನಿಗೂ, ತನ್ನ ಜನರಾದ ಇಸ್ರಾಯೇಲರಿಗೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಅವರು ಹೃದಯದಲ್ಲಿ ಆನಂದಭರಿತರಾಗಿ ಸಂತೋಷಪಡುತ್ತಾ ಅವರವರ ಡೇರೆಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:66
30 ತಿಳಿವುಗಳ ಹೋಲಿಕೆ  

ಯಾವಾಗಲೂ ಪ್ರಭುವಿನಲ್ಲಿ ಆನಂದಿಸಿರಿ; ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.


ಪ್ರತಿದಿನ ದೇವಾಲಯದಲ್ಲಿ ಸೇರಿಬರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು. ಅವರು ತಮ್ಮ ಮನೆಗಳಲ್ಲಿ ರೊಟ್ಟಿ ಮುರಿದು ಒಟ್ಟಾಗಿ ಊಟ ಮಾಡುತ್ತಿದ್ದರು. ಅವರ ಹೃದಯಗಳು ಆನಂದದಿಂದ ತುಂಬಿದ್ದವು.


ಆಗ ಪ್ರತಿಯೊಂದು ಸುಂದರವೂ ರಮಣೀಯವೂ ಆಗಿರುವುದು. ಬೆಳೆಯು ಸುಭಿಕ್ಷವಾಗಿರುವುದು. ಆಹಾರ ಮತ್ತು ದ್ರಾಕ್ಷಾರಸ ಮಾತ್ರವೇ ಅಲ್ಲ, ಎಲ್ಲಾ ಯೌವನಸ್ಥರೂ ಯೌವನಸ್ಥೆಯರೂ ಹಾಗೆಯೇ ಇರುವರು.


ಅಲ್ಲಿಗೆ ನಿಮ್ಮ ಹೆಂಡತಿ ಮಕ್ಕಳೊಂದಿಗೆ, ನಿಮ್ಮ ಸೇವಕರೊಂದಿಗೆ ಮತ್ತು ನಿಮ್ಮ ಪಟ್ಟಣದಲ್ಲಿ ಸ್ವಾಸ್ತ್ಯವನ್ನು ಹೊಂದದೆ ಇರುವ ಲೇವಿಯರೊಂದಿಗೆ ಹೋಗಿ ಯೆಹೋವನ ಸಮಕ್ಷಮದಲ್ಲಿ ಸಂತೋಷಪಡಬೇಕು.


ನೀವೂ ಮತ್ತು ನಿಮ್ಮ ಕುಟುಂಬಗಳವರೂ ಅಲ್ಲಿ ಒಟ್ಟಿಗೆ ಊಟ ಮಾಡಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿರುವನು. ನೀವು ದುಡಿದು ಸಂಪಾದಿಸಿದ ಎಲ್ಲಾ ವಸ್ತುಗಳನ್ನು ಇತರರೊಂದಿಗೆ ಹಂಚಿಕೊಂಡು ಆ ಸ್ಥಳದಲ್ಲಿ ಆನಂದಿಸುವಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸಿ ಆ ಎಲ್ಲಾ ಒಳ್ಳೆಯವುಗಳನ್ನು ನಿಮಗೆ ಕೊಟ್ಟನೆಂದು ನೀವು ಜ್ಞಾಪಿಸಿಕೊಳ್ಳುವಿರಿ.


ಆದರೆ ದೇವರಾತ್ಮನು ಹುಟ್ಟಿಸುವುದು ಪ್ರೀತಿ, ಆನಂದ, ಶಾಂತಿ, ತಾಳ್ಮೆ, ಕರುಣೆ, ಉಪಕಾರ, ನಂಬಿಗಸ್ತಿಕೆ,


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ಜೆರುಸಲೇಮೇ, ಹಾಡುತ್ತಾ ಸಂತೋಷಿಸುತ್ತಿರು. ಇಸ್ರೇಲೇ, ಸಂತೋಷದಿಂದ ಆರ್ಭಟಿಸು. ಜೆರುಸಲೇಮೇ, ಸಂತೋಷದಿಂದಿದ್ದು ಉಲ್ಲಾಸಿಸು.


ನಮ್ಮ ದೇವರಾದ ಯೆಹೋವನ ಆಲಯಕ್ಕೋಸ್ಕರ ಈ ಪಟ್ಟಣಕ್ಕೆ ಒಳ್ಳೆಯದಾಗಲೆಂದು ಪ್ರಾರ್ಥಿಸುವೆನು.


ಜೆರುಸಲೇಮಿನ ಶಾಂತಿಗೋಸ್ಕರ ಪ್ರಾರ್ಥಿಸಿರಿ: “ನಿನ್ನನ್ನು ಪ್ರೀತಿಸುವ ಜನರು ಅಲ್ಲಿ ಶಾಂತಿಯನ್ನು ಕಂಡುಕೊಳ್ಳಲಿ.


“ಹೋಗಿ ಮೃಷ್ಟಾನ್ನ ಭೋಜನ ಮಾಡಿ ಸಿಹಿ ಪಾನೀಯಗಳನ್ನು ಕುಡಿಯಿರಿ. ಅಡಿಗೆ ಮಾಡದೆ ಇದ್ದವರಿಗೂ ಅವುಗಳನ್ನು ಕೊಡಿರಿ. ಈ ದಿನ ಯೆಹೋವನಿಗೆ ವಿಶೇಷ ದಿನವಾಗಿದೆ. ದುಃಖಿಸಬೇಡಿರಿ. ಯಾಕೆಂದರೆ ಯೆಹೋವನ ಸಂತೋಷವು ನಮ್ಮನ್ನು ಬಲಗೊಳಿಸುತ್ತದೆ” ಎಂದು ನೆಹೆಮೀಯನು ಜನರಿಗೆ ಹೇಳಿದನು.


ಜೆರುಸಲೇಮಿನಲ್ಲಿ ಸಂತಸವು ತುಂಬಿತ್ತು. ಸೊಲೊಮೋನ್ ಅರಸನ ಸಮಯದಿಂದ ಅಂದಿನ ತನಕ ಅಂಥಾ ಹಬ್ಬವು ಆಚರಿಸಲ್ಪಟ್ಟಿರಲಿಲ್ಲ.


ದೇವರು ಅವುಗಳನ್ನು ತನ್ನ ಜನರಿಗಾಗಿ ಸಿದ್ಧಪಡಿಸಿದ್ದಕ್ಕಾಗಿಯೂ ಅದನ್ನು ಅಲ್ಪಕಾಲಾವಧಿಯಲ್ಲಿ ಮಾಡಿದ್ದಕ್ಕಾಗಿಯೂ ಹಿಜ್ಕೀಯನು ಮತ್ತು ಯೆಹೂದದ ಜನರು ಸಂತೋಷಪಟ್ಟರು.


ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನದಂದು ಸೊಲೊಮೋನನು ನೆರೆದು ಬಂದಿದ್ದ ಜನರನ್ನು ಅವರ ಮನೆಗಳಿಗೆ ಕಳುಹಿಸಿದನು. ದೇವರಾದ ಯೆಹೋವನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಮತ್ತು ಎಲ್ಲಾ ಇಸ್ರೇಲರಿಗೂ ಕರುಣೆಯನ್ನು ತೋರಿಸಿದ್ದಕ್ಕಾಗಿ ಜನರೆಲ್ಲರೂ ಹರ್ಷಿಸುತ್ತಾ ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು.


ಆ ದೂರದೇಶಗಳಲ್ಲಿ ನಿನ್ನ ಜನರು ತಮಗೆ ಸಂಭವಿಸಿದ್ದನ್ನು ಆಲೋಚಿಸುತ್ತಾರೆ. ಅವರು ತಮ್ಮ ಪಾಪಗಳಿಗಾಗಿ ಕ್ಷಮೆಯನ್ನು ಕೋರಿ, ನಿನ್ನಲ್ಲಿ ಪ್ರಾರ್ಥಿಸುತ್ತಾರೆ. ಅವರು, ‘ನಾವು ಪಾಪಮಾಡಿ ದ್ರೋಹಿಗಳಾಗಿದ್ದೇವೆ’ ಎಂದು ಹೇಳುತ್ತಾರೆ.


ರಾಜನಾದ ಸೊಲೊಮೋನನು ಇಸ್ರೇಲಿನ ಹಿರಿಯರೆಲ್ಲರಿಗೆ, ಕುಲಗಳ ಮುಖ್ಯಸ್ಥರಿಗೆ ಮತ್ತು ಇಸ್ರೇಲಿನ ಕುಟುಂಬ ಪ್ರಧಾನರಿಗೆ ಜೆರುಸಲೇಮಿನಲ್ಲಿದ್ದ ತನ್ನ ಬಳಿಗೆ ಬರಬೇಕೆಂದು ತಿಳಿಸಿದನು. ಒಡಂಬಡಿಕೆಯ ಪೆಟ್ಟಿಗೆಯನ್ನು ದಾವೀದ ನಗರದಿಂದ ಆಲಯಕ್ಕೆ ತರುವಾಗ ಅವರು ಸಹ ತನ್ನೊಂದಿಗಿರಬೇಕೆಂಬುದು ಸೊಲೊಮೋನನ ಅಪೇಕ್ಷೆಯಾಗಿತ್ತು.


ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಜನರೂ ಒಟ್ಟಾಗಿ ಸೇರಿ ದೇವರ ಸನ್ನಿಧಾನದಲ್ಲಿ ಸಂತೋಷಪಡಿರಿ. ನಿಮ್ಮ ಹೆಂಡತಿಮಕ್ಕಳನ್ನು ಅಲ್ಲದೆ ನಿಮ್ಮ ಸೇವಕಸೇವಕಿಯರನ್ನು ನಿಮ್ಮ ಪಟ್ಟಣದಲ್ಲಿರುವ ಲೇವಿಯರನ್ನು ಮತ್ತು ವಿಧವೆಯರನ್ನು, ಅನಾಥರನ್ನು, ಪರದೇಶಿಗಳನ್ನು ಕರೆದುಕೊಂಡು ಸಂತೋಷಪಡಿರಿ.


ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡಿರುವ ಮತ್ತು ಆತನು ನಿಮ್ಮೊಂದಿಗಿರುವ ಆ ವಿಶೇಷ ಸ್ಥಳದಲ್ಲಿಯೇ ನೀವು ಆ ಕಾಣಿಕೆಗಳನ್ನು ತಿನ್ನಬೇಕು. ನೀವು ಅಲ್ಲಿಗೆ ನಿಮ್ಮ ಗಂಡುಹೆಣ್ಣು ಮಕ್ಕಳೊಂದಿಗೆ, ನಿಮ್ಮ ಎಲ್ಲಾ ಸೇವಕರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿ ವಾಸವಾಗಿರುವ ಲೇವಿಯರೊಂದಿಗೆ ಹೋಗಿ ನಿಮ್ಮ ದೇವರಾದ ಯೆಹೋವನೊಂದಿಗೆ ಆನಂದಿಸಿರಿ; ನೀವು ದುಡಿದು ಸಂಪಾದಿಸಿದವುಗಳನ್ನು ಅನುಭವಿಸಿರಿ.


ಆಗ ಯೋಸೇಫನು ತನ್ನ ತಂದೆಯನ್ನು ಫರೋಹನ ಸನ್ನಿಧಿಗೆ ಕರೆಯಿಸಿದನು. ಯಾಕೋಬನು ಫರೋಹನನ್ನು ಆಶೀರ್ವದಿಸಿದನು.


ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರು ವಿಶ್ರಾಂತಿ ಹಬ್ಬವನ್ನು ಆಚರಿಸಿದರು. ಉತ್ತರದಲ್ಲಿದ್ದ ಹಮಾತ್ ದಾರಿಯಿಂದ ದಕ್ಷಿಣದ ಈಜಿಪ್ಟಿನ ಗಡಿಯವರೆಗಿನ ಎಲ್ಲ ಇಸ್ರೇಲರು ಅಲ್ಲಿದ್ದರು. ಅವರೆಲ್ಲರೂ ಒಟ್ಟಾಗಿ ಏಳು ದಿನಗಳ ಕಾಲ ಯೆಹೋವನ ಮುಂದೆ ತಿಂದು, ಕುಡಿದು ಆನಂದಿಸಿದರು. ಆಗ ಅವರು ಮತ್ತೆ ಏಳು ದಿನಗಳು ಅಲ್ಲಿಯೇ ಉಳಿದರು. ಅವರು ಒಟ್ಟಿಗೆ ಹದಿನಾಲ್ಕು ದಿನಗಳು ಹಬ್ಬವನ್ನು ಆಚರಿಸಿದರು!


ಸೊಲೊಮೋನನು ಯೆಹೋವನ ಆಲಯವನ್ನು ಮತ್ತು ತನ್ನ ಅರಮನೆಯನ್ನು ಕಟ್ಟಿ ಮುಗಿಸಿದನು. ಸೊಲೊಮೋನನು ತಾನು ಕಟ್ಟಬೇಕೆಂದು ಅಪೇಕ್ಷಿಸಿದ ಎಲ್ಲವನ್ನು ಕಟ್ಟಿ ಮುಗಿಸಿದನು.


ಬಲಾಢ್ಯ ನಗರಗಳನ್ನು ಸ್ವಾಧೀನಪಡಿಸಿಕೊಂಡರು. ಉತ್ತಮವಾದ ಭೂಮಿಯನ್ನು ವಶಪಡಿಸಿಕೊಂಡರು. ಒಳ್ಳೆಯ ವಸ್ತುಗಳಿಂದ ತುಂಬಿದ್ದ ಮನೆಗಳನ್ನು ಅವರು ವಶಪಡಿಸಿಕೊಂಡರು. ಅಗೆದು ತಯಾರಾಗಿದ್ದ ಬಾವಿಗಳನ್ನು ಅವರಿಗೆ ನೀನು ಕೊಟ್ಟೆ, ದ್ರಾಕ್ಷಿತೋಟವನ್ನು, ಎಣ್ಣೆಮರಗಳ ತೋಪನ್ನು, ಬೇಕಾದಷ್ಟು ಹಣ್ಣಿನ ಮರಗಳನ್ನು ನೀನು ಅವರಿಗೆ ಕೊಟ್ಟೆ. ಅವರ ಹೊಟ್ಟೆ ತುಂಬಿ ಕೊಬ್ಬೇರುವಷ್ಟು ಅವರಿಗೆ ಕೊಟ್ಟೆ. ನೀನು ಕೊಟ್ಟ ಉತ್ತಮವಾದ ವಸ್ತುಗಳಲ್ಲಿ ಅವರು ಆನಂದಿಸಿದರು.


ಯೆಹೋವನು ಕರುಣಾಶೀಲನೆಂಬುದನ್ನು ನೆನಪು ಮಾಡಿಕೊಳ್ಳುವೆನು. ಆತನನ್ನು ಸ್ತುತಿಸಲು ನೆನಪುಮಾಡಿಕೊಳ್ಳುವೆನು. ಇಸ್ರೇಲ್ ಕುಟುಂಬಕ್ಕೆ ಯೆಹೋವನು ಎಷ್ಟೋ ಮೇಲನ್ನು ಮಾಡಿದ್ದಾನೆ. ನಮ್ಮ ಮೇಲೆ ಯೆಹೋವನು ತನ್ನ ದಯೆಯನ್ನು ಸುರಿಸಿದ್ದಾನೆ. ನಮಗೆ ಕರುಣೆಯನ್ನು ತೋರಿಸಿದ್ದಾನೆ.


ಯೆಹೋಶುವನು ಅವರನ್ನು ಆಶೀರ್ವದಿಸಿ ಬೀಳ್ಕೊಟ್ಟನು. ಅವರು ತಮ್ಮತಮ್ಮ ಮನೆಗಳಿಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು