Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:7 - ಪರಿಶುದ್ದ ಬೈಬಲ್‌

7 ಕೆರೂಬಿಗಳ ರೆಕ್ಕೆಗಳು ಪವಿತ್ರ ಪೆಟ್ಟಿಗೆಯ ಮೇಲೆಲ್ಲಾ ಹರಡಿಕೊಂಡಿದ್ದವು. ಅವು ಪವಿತ್ರ ಪೆಟ್ಟಿಗೆಯನ್ನು ಮತ್ತು ಅದನ್ನು ಹೊರುವ ಕೋಲುಗಳನ್ನು ಮುಚ್ಚಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದುದರಿಂದ ಮಂಜೂಷವೂ ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದುದರಿಂದ ಮಂಜೂಷವು ಹಾಗು ಅದರ ಕೋಲುಗಳು ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದದರಿಂದ ಮಂಜೂಷವೂ ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಕೆರೂಬಿಗಳು ಮಂಜೂಷವಿದ್ದ ಸ್ಥಳದ ಮೇಲೆ ತಮ್ಮ ರೆಕ್ಕೆಗಳನ್ನು ಚಾಚಿಕೊಂಡಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ, ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿಕೊಂಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:7
7 ತಿಳಿವುಗಳ ಹೋಲಿಕೆ  

ಆ ಪೆಟ್ಟಿಗೆಯ ಮೇಲ್ಗಡೆ ದೇವರ ವೈಭವವನ್ನು ತೋರ್ಪಡಿಸುವ ಕೆರೂಬಿಗಳಿದ್ದವು. ಈ ಕೆರೂಬಿಗಳು ಕೃಪಾಸನವನ್ನು ಆಚ್ಛಾದಿಸಿಕೊಂಡಿದ್ದವು. ಆದರೆ ಇವುಗಳ ಕುರಿತು ಎಲ್ಲವನ್ನೂ ನಾವು ಈಗ ಹೇಳಲು ಸಾಧ್ಯವಿಲ್ಲ.


ಅವುಗಳ ರೆಕ್ಕೆಗಳು ಆಕಾಶದ ಕಡೆಗೆ ಚಾಚಿರಬೇಕು; ಪೆಟ್ಟಿಗೆಯನ್ನು ಮುಚ್ಚಿಕೊಂಡಿರಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿರಬೇಕು.


ಈ ಕೆರೂಬಿಗಳನ್ನು ಮಹಾಪವಿತ್ರ ಸ್ಥಳದಲ್ಲಿಟ್ಟರು. ಅವುಗಳು ಒಂದಕ್ಕೊಂದು ಸಮೀಪದಲ್ಲಿದ್ದವು. ಅವುಗಳ ರೆಕ್ಕೆಗಳು ಕೊಠಡಿಯ ಮಧ್ಯಭಾಗದಲ್ಲಿ ಒಂದನ್ನೊಂದು ತಾಕುತ್ತಿದ್ದವು. ಉಳಿದೆರಡು ರೆಕ್ಕೆಗಳು ಎರಡು ಕಡೆಗಳಲ್ಲಿದ್ದ ಗೋಡೆಗಳನ್ನು ತಾಕುತ್ತಿದ್ದವು.


ಆಗ ಯಾಜಕರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಅದರ ಸರಿಯಾದ ಸ್ಥಳದಲ್ಲಿ ಇಟ್ಟರು. ಇದು ಆಲಯದ ಮಹಾ ಪವಿತ್ರಸ್ಥಳವಾಗಿತ್ತು. ಒಡಂಬಡಿಕೆಯ ಪೆಟ್ಟಿಗೆಯನ್ನು ಕೆರೂಬಿಗಳ ರೆಕ್ಕೆಗಳ ಅಡಿಯಲ್ಲಿ ಇಟ್ಟರು.


ಈ ಹೊರುವ ಕೋಲುಗಳು ಬಹಳ ಉದ್ದವಾಗಿದ್ದವು. ಮಹಾ ಪವಿತ್ರಸ್ಥಳದ ಎದುರಿನ ಪವಿತ್ರಸ್ಥಳದಲ್ಲಿ ನಿಂತುಕೊಳ್ಳುವ ಯಾವ ವ್ಯಕ್ತಿಯೇ ಆಗಲಿ ಈ ಕೋಲುಗಳ ತುದಿಯನ್ನು ಕಾಣಬಹುದಾಗಿತ್ತು. ಆದರೆ ಹೊರಗಿರುವ ಯಾರೂ ಅವುಗಳನ್ನು ನೋಡುವುದಕ್ಕಾಗುವುದಿಲ್ಲ. ಈ ಕೋಲುಗಳು ಇಂದಿಗೂ ಅಲ್ಲಿವೆ.


ಬಳಿಕ ಅವರು ಇವುಗಳಿಗೆಲ್ಲ ಶ್ರೇಷ್ಠವಾದ ತೊಗಲಿನಿಂದ ಮಾಡಿದ ಹೊದಿಕೆಯನ್ನು ಹೊದಿಸಬೇಕು. ಆಮೇಲೆ ಅವರು ನೀಲಿಬಟ್ಟೆಯನ್ನು ತೊಗಲಿನ ಮೇಲೆ ಹಾಸಿ ಪವಿತ್ರ ಪೆಟ್ಟಿಗೆಯ ಬಳೆಗಳಲ್ಲಿ ಹೊರುವ ಕೋಲುಗಳನ್ನು ಸೇರಿಸಬೇಕು.”


ಆರು ರೆಕ್ಕೆಗಳುಳ್ಳ ಸೆರಾಫಿಯರು ಯೆಹೋವನ ಸುತ್ತ್ತಲೂ ನಿಂತಿದ್ದರು. ಆ ದೇವದೂತರು ಎರಡು ರೆಕ್ಕೆಗಳಿಂದ ತಮ್ಮ ಮುಖಗಳನ್ನು ಮುಚ್ಚಿಕೊಂಡಿದ್ದರು; ಎರಡು ರೆಕ್ಕೆಗಳಿಂದ ತಮ್ಮ ಕಾಲುಗಳನ್ನು ಮುಚ್ಚಿಕೊಂಡಿದ್ದರು; ಉಳಿದ ಎರಡು ರೆಕ್ಕೆಗಳಿಂದ ಹಾರಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು