1 ಅರಸುಗಳು 8:9 - ಪರಿಶುದ್ದ ಬೈಬಲ್9 ಪವಿತ್ರ ಪೆಟ್ಟಿಗೆಯಲ್ಲಿರುವ ಒಂದೇ ವಸ್ತುವೆಂದರೆ ಎರಡು ಕಲ್ಲಿನ ಹಲಿಗೆಗಳು. ಮೋಶೆಯು ಹೋರೇಬ್ ಎಂಬ ಸ್ಥಳದಲ್ಲಿ ಪವಿತ್ರ ಪೆಟ್ಟಿಗೆಯಲ್ಲಿಟ್ಟ ಎರಡು ಕಲ್ಲಿನ ಹಲಗೆಗಳೇ. ಇವು ಈಜಿಪ್ಟಿನಿಂದ ಹೊರಬಂದ ಇಸ್ರೇಲಿನ ಜನರೊಂದಿಗೆ ಯೆಹೋವನು ಒಪ್ಪಂದ ಮಾಡಿಕೊಂಡ ಸ್ಥಳವೇ ಹೋರೇಬ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮಂಜೂಷದಲ್ಲಿ ಎರಡು ಶಿಲಾಶಾಸನಗಳನ್ನು ಬಿಟ್ಟರೆ, ಬೇರೇನೂ ಇರಲಿಲ್ಲ. ಸರ್ವೇಶ್ವರ ಈಜಿಪ್ಟಿನಿಂದ ಬಂದ ಇಸ್ರಯೇಲರೊಡನೆ ಹೋರೇಬ್ ಬೆಟ್ಟದ ಬಳಿ ಒಡಂಬಡಿಕೆ ಮಾಡಿಕೊಂಡ ಮೇಲೆ, ಮೋಶೆ ಆ ಶಾಸನಗಳನ್ನು ಅದರಲ್ಲಿ ಇಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲ್ಯರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಬಂದ ನಂತರ ಯೆಹೋವ ದೇವರು ಅವರ ಸಂಗಡ ಒಡಂಬಡಿಕೆ ಮಾಡಿದಾಗ, ಮೋಶೆಯು ಹೋರೇಬ್ ಬೆಟ್ಟದ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ. ಅಧ್ಯಾಯವನ್ನು ನೋಡಿ |
ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.
ಆತನು ಹೇಳಿದ್ದೇನೆಂದರೆ: “ನಿನ್ನ ಸಹೋದರನಾದ ಆರೋನನೊಡನೆ ಮಾತಾಡು. ಅವನು ತನಗೆ ಇಷ್ಟಬಂದಾಗಲೆಲ್ಲಾ ತೆರೆಯ ಹಿಂದಿರುವ ಮಹಾ ಪವಿತ್ರಸ್ಥಳದೊಳಕ್ಕೆ ಹೋಗಬಾರದೆಂದು ಅವನಿಗೆ ಹೇಳು. ಆ ತೆರೆಯ ಹಿಂದೆ ಇರುವ ಕೋಣೆಯೊಳಗೆ ಪವಿತ್ರ ಪೆಟ್ಟಿಗೆಯು ಇರುತ್ತದೆ. ಕೃಪಾಸನವು ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿರುತ್ತದೆ. ಕೃಪಾಸನದ ಮೇಲೆ ಮೇಘದಲ್ಲಿ ನಾನು ಕಾಣಿಸಿಕೊಳ್ಳುತ್ತೇನೆ. ಆರೋನನು ಆ ಕೋಣೆಯೊಳಗೆ ಹೋದರೆ ಸಾಯುವನು!