Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:10 - ಪರಿಶುದ್ದ ಬೈಬಲ್‌

10 ಯೆಹೋವನ ಆಲಯವನ್ನು ಮತ್ತು ರಾಜನ ಅರಮನೆಯನ್ನು ಕಟ್ಟಲು ರಾಜನಾದ ಸೊಲೊಮೋನನಿಗೆ ಇಪ್ಪತ್ತು ವರ್ಷಗಳು ಹಿಡಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅರಸನಾದ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವನ ಆಲಯವನ್ನೂ ಮತ್ತು ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅರಸ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಸರ್ವೇಶ್ವರನ ಆಲಯವನ್ನು ಹಾಗು ತನ್ನ ಅರಮನೆಯನ್ನು ಕಟ್ಟಿ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅರಸನಾದ ಸೊಲೊಮೋನನು ಇಪ್ಪತ್ತು ವರುಷಗಳಲ್ಲಿ ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿ ತೀರಿಸಿದ ನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅರಸನಾದ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಆ ಎರಡು ಮನೆಗಳನ್ನು ಅಂದರೆ, ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ ಕಟ್ಟಿಸಿ ತೀರಿಸಿದ ತರುವಾಯ

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:10
9 ತಿಳಿವುಗಳ ಹೋಲಿಕೆ  

ಅವರು ವರ್ಷದ ಎರಡನೆಯ ತಿಂಗಳಿನ ಜೀವ್ (ವೈಶಾಖ) ಮಾಸದಲ್ಲಿ ದೇವಾಲಯವನ್ನು ಕಟ್ಟಲಾರಂಭಿಸಿದರು. ಇಸ್ರೇಲನ್ನು ಸೊಲೊಮೋನನು ಆಳಲು ಆರಂಭಿಸಿದ ನಾಲ್ಕನೆಯ ವರ್ಷದಲ್ಲಿ ಇದು ನಡೆಯಿತು.


ಸೊಲೊಮೋನನು ಯೆಹೋವನ ಆಲಯವನ್ನು ಮತ್ತು ತನ್ನ ಅರಮನೆಯನ್ನು ಕಟ್ಟಿ ಮುಗಿಸಿದನು. ಸೊಲೊಮೋನನು ತಾನು ಕಟ್ಟಬೇಕೆಂದು ಅಪೇಕ್ಷಿಸಿದ ಎಲ್ಲವನ್ನು ಕಟ್ಟಿ ಮುಗಿಸಿದನು.


ಸೊಲೊಮೋನನು ಈಜಿಪ್ಟಿನ ರಾಜನಾದ ಫರೋಹನ ಮಗಳನ್ನು ಮದುವೆಯಾಗಿ ಅವನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಸೊಲೊಮೋನನು ಅವಳನ್ನು ದಾವೀದನಗರಕ್ಕೆ ಕರೆದು ತಂದನು. ಸೊಲೊಮೋನನು ಆ ಸಮಯದಲ್ಲಿ ತನ್ನ ಅರಮನೆಯನ್ನು ಮತ್ತು ಯೆಹೋವನ ದೇವಾಲಯಗಳನ್ನು ನಿರ್ಮಿಸುತ್ತಿದ್ದನು. ಜೆರುಸಲೇಮಿನ ಸುತ್ತಲೂ ಒಂದು ಗೋಡೆಯನ್ನು ಸಹ ಸೊಲೊಮೋನನು ನಿರ್ಮಿಸುತ್ತಿದ್ದನು.


ಈ ದೇವಾಲಯದ ನಿರ್ಮಾಣವು ವರ್ಷದ ಎಂಟನೇ ತಿಂಗಳಾದ ಬುಲ್ (ಕಾರ್ತಿಕ) ತಿಂಗಳಲ್ಲಿ ಮುಗಿಯಿತು. ಅದು ಸೊಲೊಮೋನನ ಆಳ್ವಿಕೆಯ ಹನ್ನೊಂದನೆಯ ವರ್ಷವಾಗಿತ್ತು. ದೇವಾಲಯವನ್ನು ಕಟ್ಟಲು ಏಳು ವರ್ಷ ಹಿಡಿಯಿತು. ದೇವಾಲಯವನ್ನು ಅದರ ನಿಯಮಾನುಸಾರವಾಗಿ ಕಟ್ಟಿದರು.


ಸೊಲೊಮೋನನು ತನಗಾಗಿ ಒಂದು ಅರಮನೆಯನ್ನು ನಿರ್ಮಿಸಿದನು. ಸೊಲೊಮೋನನ ಅರಮನೆಯನ್ನು ನಿರ್ಮಿಸಲು ಹದಿಮೂರು ವರ್ಷ ಹಿಡಿಯಿತು.


ರಾಜನಾದ ಸೊಲೊಮೋನನು ಇಪ್ಪತ್ತು ವರ್ಷಗಳ ತರುವಾಯ ಗಲಿಲಾಯದ ಇಪ್ಪತ್ತು ಪಟ್ಟಣಗಳನ್ನು ತೂರಿನ ರಾಜನಾದ ಹೀರಾಮನಿಗೆ ಬಿಟ್ಟುಕೊಟ್ಟನು. ಆಲಯವನ್ನು ಮತ್ತು ಅರಮನೆಯನ್ನು ನಿರ್ಮಿಸಲು ಹೀರಾಮನು ಸಹಾಯ ಮಾಡಿದ್ದರಿಂದ ಸೊಲೊಮೋನನು ಹೀರಾಮನಿಗೆ ಈ ಪಟ್ಟಣಗಳನ್ನು ಕೊಟ್ಟನು. ಸೊಲೊಮೋನನು ಅಪೇಕ್ಷಿಸಿದ ದೇವದಾರು ಮರಗಳನ್ನು, ತುರಾಯಿ ಮರಗಳನ್ನು ಮತ್ತು ಬಂಗಾರವನ್ನು ಹೀರಾಮನು ಕೊಟ್ಟಿದ್ದನು.


ಅದಕ್ಕೆ ಅವರು ಈ ರೀತಿಯಾಗಿ ಉತ್ತರಕೊಟ್ಟರು: “ಭೂಪರಲೋಕಗಳ ದೇವರ ಸೇವಕರಾದ ನಾವು ಬಹಳ ವರ್ಷಗಳ ಹಿಂದೆ ಇಸ್ರೇಲರ ರಾಜನು ಕಟ್ಟಿಸಿ ಮುಗಿಸಿದ ದೇವಾಲಯವನ್ನು ಮತ್ತೆ ಕಟ್ಟುತ್ತಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು