1 ಅರಸುಗಳು 9:11 - ಪರಿಶುದ್ದ ಬೈಬಲ್11 ರಾಜನಾದ ಸೊಲೊಮೋನನು ಇಪ್ಪತ್ತು ವರ್ಷಗಳ ತರುವಾಯ ಗಲಿಲಾಯದ ಇಪ್ಪತ್ತು ಪಟ್ಟಣಗಳನ್ನು ತೂರಿನ ರಾಜನಾದ ಹೀರಾಮನಿಗೆ ಬಿಟ್ಟುಕೊಟ್ಟನು. ಆಲಯವನ್ನು ಮತ್ತು ಅರಮನೆಯನ್ನು ನಿರ್ಮಿಸಲು ಹೀರಾಮನು ಸಹಾಯ ಮಾಡಿದ್ದರಿಂದ ಸೊಲೊಮೋನನು ಹೀರಾಮನಿಗೆ ಈ ಪಟ್ಟಣಗಳನ್ನು ಕೊಟ್ಟನು. ಸೊಲೊಮೋನನು ಅಪೇಕ್ಷಿಸಿದ ದೇವದಾರು ಮರಗಳನ್ನು, ತುರಾಯಿ ಮರಗಳನ್ನು ಮತ್ತು ಬಂಗಾರವನ್ನು ಹೀರಾಮನು ಕೊಟ್ಟಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆನಂತರ ಅವನು ತನಗೆ ಬೇಕಾದಷ್ಟು ದೇವದಾರುಮರಗಳನ್ನೂ, ತುರಾಯಿಮರಗಳನ್ನೂ ಮತ್ತು ಬಂಗಾರವನ್ನೂ ಕೊಟ್ಟಂಥ ತೂರಿನ ಅರಸನಾದ ಹೀರಾಮನಿಗೆ ಗಲಿಲಾಯ ಪ್ರಾಂತ್ಯದಲ್ಲಿ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ತನಗೆ ಬೇಕಾದಷ್ಟು ದೇವದಾರು ಮರಗಳನ್ನು, ತುರಾಯಿ ಮರಗಳನ್ನು ಹಾಗು ಬಂಗಾರವನ್ನು ಕೊಟ್ಟಿದ್ದ ಟೈರಿನ ಅರಸ ಹೀರಾಮನಿಗೆ, ಗಲಿಲೇಯ ಪ್ರಾಂತ್ಯದಲ್ಲಿನ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ತನಗೆ ಬೇಕಾದಷ್ಟು ದೇವದಾರು ಮರಗಳನ್ನೂ ತುರಾಯಿ ಮರಗಳನ್ನೂ ಬಂಗಾರವನ್ನೂ ಕೊಟ್ಟಂಥ ತೂರಿನ ಅರಸನಾದ ಹೀರಾಮನಿಗೆ ಗಲಿಲಾಯ ಪ್ರಾಂತದಲ್ಲಿನ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಸೊಲೊಮೋನನ ಇಷ್ಟದ ಪ್ರಕಾರ ಟೈರಿನ ಅರಸನಾದ ಹೀರಾಮನು ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಚಿನ್ನವನ್ನೂ ಕೊಟ್ಟಿದ್ದರಿಂದ ಸೊಲೊಮೋನನು ಟೈರಿನ ಅರಸನಾದ ಹೀರಾಮನಿಗೆ ಗಲಿಲಾಯ ದೇಶದಲ್ಲಿನ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿ |